ಅನೈತಿಕ ಸಂಬಂಧ: ನಡುರಸ್ತೆಯಲ್ಲಿ ಪತ್ನಿಯನ್ನು ಅಟ್ಟಾಡಿಸಿ ಮಚ್ಚಿನಿಂದ ಹಲ್ಲೆ ಮಾಡಿದ ಪತಿ

ಪತ್ನಿಗೆ ಅನೈತಿಕ ಸಂಬಂಧವಿದೆ ಎಂದು ಶಂಕಿಸಿದ ಪತಿಯೊಬ್ಬ ನಡುರಸ್ತೆಯಲ್ಲಿ ಅಟ್ಟಾಡಿಸಿಕೊಂಡು ಮಚ್ಚಿನಿಂದ ಹಲ್ಲೆ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇನ್ನು ಆರೋಪಿಯನ್ನು ಪೊಲೀಸರು ಬಂಧಿಸಿ ವಿಚಾರಣೆಗೊಳಪಡಿಸಿದಾಗ ಸ್ಫೋಟಕ ಅಂಶವನ್ನು ಬಾಯ್ಬಿಟ್ಟಿದ್ದಾನೆ.

ಅನೈತಿಕ ಸಂಬಂಧ: ನಡುರಸ್ತೆಯಲ್ಲಿ ಪತ್ನಿಯನ್ನು ಅಟ್ಟಾಡಿಸಿ ಮಚ್ಚಿನಿಂದ ಹಲ್ಲೆ ಮಾಡಿದ ಪತಿ
Edited By:

Updated on: Feb 20, 2024 | 4:36 PM

ಬೆಂಗಳೂರು, (ಫೆಬ್ರವರಿ 20): ಬೇರೊಬ್ಬನ ಜೊತೆ ಅನೈತಿಕ ಸಂಬಂಧದ(illicit relationship_ ಅನುಮಾನದ ಮೇಲೆ ನಡುರಸ್ತೆಯಲ್ಲೇ ಪತ್ನಿ ಮೇಲೆ ಮಚ್ಚಿನಿಂದ ಮಾರಣಾಂತಿಕ ಹಲ್ಲೆಯನ್ನು (Assault) ಮಾಡಿದ್ದಾನೆ. ರಸ್ತೆಯಲ್ಲಿ ಅಟ್ಟಾಡಿಸಿಕೊಂಡು ಪತ್ನಿಗೆ ಮಚ್ಚಿನಿಂದ ಹೊಡೆದಿದ್ದಾನೆ. ಬೆಂಗಳೂರಿನ(Bengaluru) ಜೀವನ್ ಭೀಮಾ ನಗರದ ವಿಂಡ್ ಟನಲ್ ರಸ್ತೆಯಲ್ಲಿ ಸೋಮವಾರ ಸಂಜೆ 7 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಶೇಕ್ ಮುಜೀಬ್‌ ಎನ್ನುವಾತ ನೈಗರ್ (28) ಎನ್ನುವಾಕೆಯನ್ನು ಪ್ರೀತಿಸಿ ಮದುವೆಯಾಗಿದ್ದ. ಆದ್ರೆ, ಹೆಂಡ್ತಿ ಬೇರೊಬ್ಬನ ಜತೆ ಸಂಬಂಧ ಹೊಂದಿದ್ದಾಳೆಂದು ಆಕೆಯ ಮೇಲೆ ಮಚ್ಚಿನಿಂದ ಹಲ್ಲೆ ಮಾಡಿದ್ದಾನೆ.

ನೈಗರ್​ಳ ತಲೆಗೆ ಮಚ್ಚಿನ ಏಟು ಬಿದ್ದಿದ್ದು, ಸದ್ಯ ಮಹಿಳೆ ಪ್ರಾಣಾಪಾಯದಿಂದ ಪಾರಾಗಿದ್ದಾಳೆ. ಇನ್ನು ಶೇಕ್ ಮುಜೀಬ್ ನನ್ನು ಜೆ ಬಿ ನಗರ ಪೊಲೀಸರು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ.

ಇದನ್ನೂ ಓದಿ: ದೊಡ್ಡಬಳ್ಳಾಪುರ: ಯುವಕನ ಮೇಲೆ ಲಾಠಿಗಳಿಂದ ಹಲ್ಲೆ ನಡೆಸಿದ ಅಪಾರ್ಟ್​ಮೆಂಟ್ ಸೆಕ್ಯುರಿಟಿ ಗಾರ್ಡ್​ಗಳು

ನೈಗರ್​ಳನ್ನ ಪ್ರೀತಿಸಿ ಮದುವೆಯಾಗಿದ್ದ ಹೊಸಕೋಟೆ ಮೂಲದ ಶೇಕ್ ಮುಜೀಬ್, ಆರ್ ಟಿ ನಗರದಲ್ಲಿ ನೆಲೆಸಿದ್ದ. ನೈಗರ್, ಮುರುಗೇಶ್ ಪಾಳ್ಯದ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರೆ, ಆರೋಪಿ ಶೇಕ್ ಮುಜೀಬ್ ಕ್ಯಾಬ್ ಚಾಲಕನಾಗಿ ಕೆಲಸ ಮಾಡುತ್ತಿದ್ದ. ಕೆಲಸ ಮಾಡುತ್ತಿದ್ದ ಸ್ಥಳದಲ್ಲಿ ಯುವಕನ ಜೊತೆ ಸಂಬಂಧ ಇದೆ ಎಂದು ಅನುಮಾನ ಬಂದಿದೆ. ಈ ಹಿನ್ನೆಲೆಯಲ್ಲಿ ನೈಗರ್​ಳನ್ನ ಕೆಲಸಕ್ಕೆ ಹೋಗುವುದನ್ನ ಬಿಡಿಸಬೇಕು ಎಂದು ಪ್ಲ್ಯಾನ್ ಮಾಡಿದ್ದ. ಹೀಗಾಗಿ ಆಕೆಯ ಕೈ ಬೆರಳು ಕಟ್ ಮಾಡಬೇಕೆಂದುಕೊಂಡಿದ್ದ. ಯಾಕಂದ್ರೆ ಬೆರಳುಗಳನ್ನ ಕತ್ತರಿಸಿದರೆ ಕೆಲಸ ಮಾಡಲು ಆಗುವುದಿಲ್ಲ. ಮನೆಯಲ್ಲೇ ಇರುತ್ತಾಳೆ ಎಂದು ತೀರ್ಮಾನಿಸಿ ಶಿವಾಜಿನಗರದಲ್ಲಿ ಮಚ್ಚು ಖರೀದಿಸಿರುವುದನ್ನು ಎಂದು ಪೊಲೀಸರ ಮುಂದೆ ಬಾಯ್ಬಿಟ್ಟಿದ್ದಾನೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

TV9 Web

TV9 Kannada

Read More
Loading...
Unable to load recommendations.
Follow Us