ಕಡಿಮೆ ಬೆಲೆಗೆ ತರಕಾರಿ ಕೊಟ್ಟಿಲ್ಲ ಎಂದು ಮಂಡಿ ಮಾಲೀಕನ ಮೇಲೆ ಹಲ್ಲೆ; 1.25 ಲಕ್ಷ ರೂಪಾಯಿ ದೋಚಿ ಪರಾರಿ

ಯಶವಂತಪುರ ವ್ಯಾಪಾರಿ ಚಂದ್ರಶೇಖರ್ ಸೇರಿದಂತೆ 6ಜನರ ತಂಡ ಈ ಕೃತ್ಯ ಎಸಗಿದ್ದು, ಹಲ್ಲೆ ಬಳಿಕ 1.25 ಲಕ್ಷ ರೂಪಾಯಿ ಹಣ ದೋಚಿದ್ದಾರೆ. ಸದ್ಯ ಮಾದನಾಯಕನಹಳ್ಳಿ ಪೋಲಿಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ಕಡಿಮೆ ಬೆಲೆಗೆ ತರಕಾರಿ ಕೊಟ್ಟಿಲ್ಲ ಎಂದು ಮಂಡಿ ಮಾಲೀಕನ ಮೇಲೆ ಹಲ್ಲೆ; 1.25 ಲಕ್ಷ ರೂಪಾಯಿ ದೋಚಿ ಪರಾರಿ
ಮಾದನಾಯಕನಹಳ್ಳಿ ಪೋಲಿಸ್ ಠಾಣೆ
Follow us
TV9 Web
| Updated By: preethi shettigar

Updated on:Jul 27, 2021 | 10:00 AM

ಬೆಂಗಳೂರು: ಹರಾಜು ವೇಳೆ ಕಡಿಮೆ ಬೆಲೆಗೆ ತರಕಾರಿ ಕೊಟ್ಟಿಲ್ಲವೆಂದು ಮಂಡಿ ಮಾಲಿಕನ ಮೇಲೆ ವ್ಯಾಪಾರಿ ತಂಡವೊಂದು ಹಲ್ಲೆ ಮಾಡಿದ ಘಟನೆ ಬೆಂಗಳೂರು ಉತ್ತರ ತಾಲೂಕಿನ ದಾಸನಪುರ ಎಪಿಎಂಸಿ (APMC) ಮಾರುಕಟ್ಟೆಯಲ್ಲಿ ನಡೆದಿದೆ. ಮಂಡಿ ಮಾಲಿಕ ಹನುಮಂತರಾಯಪ್ಪಗೆ ಸಣ್ಣಪುಟ್ಟ ಗಾಯವಾಗಿದೆ. ಯಶವಂತಪುರ ವ್ಯಾಪಾರಿ ಚಂದ್ರಶೇಖರ್ ಸೇರಿದಂತೆ 6ಜನರ ತಂಡ ಈ ಕೃತ್ಯ ಎಸಗಿದ್ದು, ಹಲ್ಲೆ ಬಳಿಕ 1.25 ಲಕ್ಷ ರೂಪಾಯಿ ಹಣ ದೋಚಿದ್ದಾರೆ. ಸದ್ಯ ಮಾದನಾಯಕನಹಳ್ಳಿ ಪೋಲಿಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ಹಸು ಮೇಯಿಸುತ್ತಿದ್ದ ಮಹಿಳೆ ಕಿವಿ ಕತ್ತರಿಸಿ ಓಲೆ ಕಳ್ಳತನ ಹಸು ಮೇಯಿಸುತ್ತಿದ್ದ ಒಂಟಿ ಮಹಿಳೆ ಕಿವಿ ಕತ್ತರಿಸಿ ಓಲೆ ಕಳ್ಳತನ ಮಾಡಿದ ಘಟನೆ ಬೆಂಗಳೂರು ಉತ್ತರ ತಾಲೂಕಿನ ಹೊನ್ನಸಂದ್ರದಲ್ಲಿ ನಡೆದಿದೆ. ಕಿವಿ ಕತ್ತರಿಸಿ 6 ಗ್ರಾಂನ ಓಲೆಯೊಂದಿಗೆ ದುಷ್ಕರ್ಮಿ ಪರಾರಿಯಾಗಿದ್ದಾನೆ. 4 ದಿನದ ಹಿಂದೆ ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಗಾಯಾಳು ಸಿದ್ದಗಂಗಮ್ಮ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸದ್ಯ ಮಾದನಾಯಕನಹಳ್ಳಿ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ಮಾದಕ ಸರಬರಾಜುಗಾರರ ವಿರುದ್ಧ ಸಿಸಿಬಿ ಪೊಲೀಸರ ಕಾರ್ಯಾಚರಣೆ ಮಾದಕವಸ್ತು ಪೂರೈಕೆದಾರರ ವಿರುದ್ಧ ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದು, ಬೆಂಗಳೂರಿನ ರಾಮಮೂರ್ತಿನಗರ ಹಾಗೂ ಬಾಗಲೂರು ಠಾಣಾ ವ್ಯಾಪ್ತಿಯಲ್ಲಿ ಇಬ್ಬರು ವಿದೇಶಿ ಪ್ರಜೆಗಳ ಸಹಿತ 6 ಜನರನ್ನು ಸೆರೆ ಹಿಡಿದಿದ್ದಾರೆ. ಪ್ರತ್ಯೇಕ ಪ್ರಕರಣದಲ್ಲಿ 6 ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದು, 1.5 ಕೋಟಿ ರೂಪಾಯಿ ಮೌಲ್ಯದ ಕೊಕೇನ್, ಎಕ್ಸ್ಟಸಿ ಪಿಲ್ಸ್, ಯಾಬಾ, ಎಲ್​ಸಿಡಿ ಮತ್ತು ಕೃತ್ಯಕ್ಕೆ ಬಳಸಲಾಗಿದ್ದ ಕಾರು, ಬೈಕ್ ವಶಪಡಿಸಿಕೊಂಡಿದ್ದಾರೆ.

police arrest

ಮಾದಕ ವಸ್ತು

ಮನೆಯ ಬಾಗಿಲು ಮುರಿದು 1.21 ಲಕ್ಷ ರೂಪಾಯಿ ಕಳ್ಳತನ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕು ಅರಿಶಿನಕುಂಟೆ ಬಳಿಯ ಆದರ್ಶ ನಗರದಲ್ಲಿ ಮನೆಯ ಬಾಗಿಲು ಮುರಿದು 1.21 ಲಕ್ಷ ರೂಪಾಯಿ ಕಳ್ಳತನ ಮಾಡಿದ್ದಾರೆ. ಯಂಟಗಾನಹಳ್ಳಿಯಲ್ಲಿರುವ ಅತ್ತೆ ನಂಜಮ್ಮ ಮನೆಗೆ ತೆರಳಿದ್ದಾಗ ಅನಂತರಾಮು ಮನೆಯಲ್ಲಿದ್ದ ಹಣವನ್ನು ಕಳ್ಳರು ಕದ್ದೊಯ್ದಿದ್ದಾರೆ. ಸದ್ಯ ನೆಲಮಂಗಲ ಟೌನ್ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಯುವತಿ ವಿಚಾರವಾಗಿ ನಡು ರಸ್ತೆಯಲ್ಲೇ ಸ್ನೇಹಿತರ ನಡುವೆ ಮಾರಾಮಾರಿ; 8 ಜನರ ಗುಂಪಿಂದ ಯುವಕನ ಮೇಲೆ ಹಲ್ಲೆ

ಯುವತಿಯನ್ನು ಚುಡಾಯಿಸಿದ ಆರೋಪ: ಪೆಟ್ರೋಲ್​ ತುಂಬಿಸುತ್ತಿದ್ದ ಯುವಕನಿಗೆ ಹಾಲಿನ ಕ್ಯಾನ್​ನಿಂದ ಹೊಡೆದು ಮಾರಣಾಂತಿಕ ಹಲ್ಲೆ

Published On - 8:37 am, Tue, 27 July 21

ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?