ನಡುರಸ್ತೆಯಲ್ಲಿ ಕಬ್ಬಿಣದ ಸಲಾಕೆಯಿಂದ 15 ಬಾರಿ ಹೊಡೆದು ಪ್ರೇಯಸಿಯ ಕೊಂದ ವ್ಯಕ್ತಿ

ಹಾಡಹಗಲೇ ವ್ಯಕ್ತಿಯೊಬ್ಬ ತನ್ನ ಪ್ರೇಯಸಿಯನ್ನು ಕೊಲೆ ಮಾಡಿರುವ ಘಟನೆ ಮುಂಬೈನಲ್ಲಿ ವರದಿಯಾಗಿದೆ. ನಡುರಸ್ತೆಯಲ್ಲಿ ವ್ಯಕ್ತಿಯೊಬ್ಬ ಕಬ್ಬಿಣದ ಸಲಾಕೆಯಿಂದ ಪ್ರೇಯಸಿಗೆ 15 ಬಾರಿ ಹೊಡೆದು ಹತ್ಯೆ ಮಾಡಿರುವ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ನಡುರಸ್ತೆಯಲ್ಲಿ ಕಬ್ಬಿಣದ ಸಲಾಕೆಯಿಂದ 15 ಬಾರಿ ಹೊಡೆದು ಪ್ರೇಯಸಿಯ ಕೊಂದ ವ್ಯಕ್ತಿ
Image Credit source: Mid Day

Updated on: Jun 18, 2024 | 3:17 PM

ಮುಂಬೈನ ರಸ್ತೆಯಲ್ಲಿ ಬರ್ಬರ ಹತ್ಯೆ ನಡೆದಿದೆ, ಹಾಡಹಗಲೇ ವ್ಯಕ್ತಿಯೊಬ್ಬ ತನ್ನ ಪ್ರೇಯಸಿಯನ್ನು ಕೊಲೆ ಮಾಡಿರುವ ಘಟನೆ ವರದಿಯಾಗಿದೆ. ನಡುರಸ್ತೆಯಲ್ಲಿ ವ್ಯಕ್ತಿಯೊಬ್ಬ ಕಬ್ಬಿಣದ ಸಲಾಕೆಯಿಂದ ಪ್ರೇಯಸಿಗೆ 15 ಬಾರಿ ಹೊಡೆದು ಹತ್ಯೆ ಮಾಡಿರುವ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಮುಂಬೈನ ವಸಾಯಿಯಲ್ಲಿ ಘಟನೆ ನಡೆದಿದೆ. ಯುವತಿಯ ಎದೆ, ತಲೆಯ ಮೇಲೆ ಮನಬಂದಂತೆ ಕಬ್ಬಿಣದ ಸಲಾಕೆಯಿಂದ ಥಳಿಸಿದ್ದಾನೆ.

ರಸ್ತೆ ಮಧ್ಯದಲ್ಲಿ ಆಕೆಯ ಶವ ಬಿದ್ದಿರುವುದನ್ನು ವಿಡಿಯೋದಲ್ಲಿ ಕಾಣಬಹುದು, ವರದಿಯ ಪ್ರಕಾರ ಆತ ಆಕೆಯ ಗೆಳೆಯನಾಗಿದ್ದು, ಆಕೆಯನ್ನು ರಸ್ತೆಗೆ ತಳ್ಳಿ ಮನಬಂದಂತೆ ಥಳಿಸಿರುವುದು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ಮತ್ತಷ್ಟು ಓದಿ: ದೆಹಲಿಯಲ್ಲಿ ಮರ್ಯಾದಾ ಹತ್ಯೆ; ಬೇರೆ ಜಾತಿಯವನನ್ನು ಮದುವೆಯಾಗಿದ್ದಕ್ಕೆ ಮಗಳನ್ನೇ ಕೊಂದ ಅಪ್ಪ

ಆತ ಯಾಕೆ ಹೀಗೆ ಮಾಡಿದೆ ಎಂದು ಕೂಗುತ್ತಾ ಆಕೆಗೆ ಥಳಿಸುತ್ತಿದ್ದ, ನಂತರ ಆಕೆ ಪ್ರಜ್ಞೆ ಇಲ್ಲದೆ ಅಲ್ಲೇ ಬಿದ್ದಿದ್ದಳು, ಇಬ್ಬರ ಗುರುತು ಇನ್ನೂ ಸಿಕ್ಕಿ ಪತ್ತೆಯಾಗಿಲ್ಲ. ಈ ಘಟನೆಯನ್ನು ರಸ್ತೆಯಲ್ಲಿ ಹೋಗುವವವರು ವಿಡಿಯೋ ಮಾಡಿದ್ದಾರೆ.

ಯಾರೂ ಕೂಡ ಭಯದಿಂದ ಆಕೆಯ ರಕ್ಷಣೆಗೆ ಬರಲಿಲ್ಲ, ರಕ್ತದ ಮಡುವಿನಲ್ಲಿ ಆಕೆ ನಿತ್ರಾಣಳಾಗಿ ಬಿದ್ದಿದ್ದು, ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಪೊಲೀಸರು ಕೂಡ ಸ್ಥಳಕ್ಕೆ ಬಂದಿರಲಿಲ್ಲ.

 

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More
Loading...
Unable to load recommendations.
Follow Us