ಮುಂಬೈ: ಜನನಿಬಿಡ ರಸ್ತೆಯಲ್ಲಿ , ಕತ್ತಿಯಿಂದ ಹಲ್ಲೆ ನಡೆಸಿದ ಬಾಲಕ, ವ್ಯಕ್ತಿ ಸಾವು

ಜನರಿಂದ ತುಂಬಿ ತುಳುಕುತ್ತಿರುವ ರಸ್ತೆಯೊಂದರಲ್ಲಿ ಬಾಲಕನೊಬ್ಬ ವ್ಯಕ್ತಿ ಮೇಲೆ ಕತ್ತಿಯಿಂದ ಹಲ್ಲೆ ನಡೆಸಿದ್ದು, ವ್ಯಕ್ತಿ ಕೂಡಲೇ ಕುಸಿದುಬಿದ್ದು ಸಾವನ್ನಪ್ಪಿರುವ ಘಟನೆ ಮುಂಬೈನಲ್ಲಿ ನಡೆದಿದೆ. ಆ ಘಟನೆಯನ್ನು ಕೆಲವರು ವಿಡಿಯೋ ಮಾಡಿಕೊಂಡಿದ್ದಾರೆ, ಕೆಲವರು ನೋಡುತ್ತಾ ನಿಂತಿದ್ದಾರೆ ಆದರೆ ವ್ಯಕ್ತಿಯನ್ನು ಬದುಕಿಸುವ ಕೆಲಸವನ್ನು ಯಾರೂ ಮಾಡಿಲ್ಲ ಎಂಬುದೇ ವಿಪರ್ಯಾಸ.

ಮುಂಬೈ: ಜನನಿಬಿಡ ರಸ್ತೆಯಲ್ಲಿ , ಕತ್ತಿಯಿಂದ ಹಲ್ಲೆ ನಡೆಸಿದ ಬಾಲಕ, ವ್ಯಕ್ತಿ ಸಾವು
ಸಾವು
Follow us
ನಯನಾ ರಾಜೀವ್
|

Updated on: Aug 13, 2024 | 2:37 PM

ಮುಂಬೈನ ಜನನಿಬಿಡ ರಸ್ತೆಯಲ್ಲಿ ಅಪ್ರಾಪ್ತ ಬಾಲಕನೊಬ್ಬ ಕತ್ತಿಯಿಂದ ಹಲ್ಲೆ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ. ಮುಂಬೈನ ಶಿವಾಜಿನಗರ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಘಟನೆಯ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ವ್ಯಕ್ತಿಯೊಬ್ಬರು ರಕ್ತದ ಮಡುವಿನಲ್ಲಿ ಬಿದ್ದಿದ್ದರು, ಆದರೂ ಬಿಡದ ವ್ಯಕ್ತಿಗೆ ಕತ್ತಿಯಿಂದ ಹಲ್ಲೆ ನಡೆಸಿದ್ದಾನೆ. ತುಂಬಾ ಜನರು ಅಲ್ಲಿ ನಿಂತು ಘಟನೆಯನ್ನು ನೋಡಿ ವಿಡಿಯೋ ಮಾಡುತ್ತಿದ್ದರೂ ಕೂಡ, ಯಾರೂ ವ್ಯಕ್ತಿಯನ್ನು ಉಳಿಸುವ ಕೆಲಸ ಮಾಡಿಲ್ಲ. ಮೃತರನ್ನು ಅಹ್ಮದ್ ಪಠಾಣ್ ಎಂದು ಗುರುತಿಸಲಾಗಿದೆ. ಐವರ ವಿರುದ್ಧ ಪ್ರಕರಣ ದಾಖಲಾಗಿದೆ. ಇದುವರೆಗೆ ಮಹಿಳೆ ಸೇರಿದಂತೆ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ.

ಮತ್ತೊಂದು ಘಟನೆ

ನಡುರಸ್ತೆಯಲ್ಲಿ ಪತ್ನಿಯನ್ನು ಅಟ್ಟಾಡಿಸಿ ಮಚ್ಚಿನಿಂದ ಹಲ್ಲೆ ಮಾಡಿದ ಪತಿ ಬೇರೊಬ್ಬನ ಜೊತೆ ಅನೈತಿಕ ಸಂಬಂಧದ ಅನುಮಾನದ ಮೇಲೆ ನಡುರಸ್ತೆಯಲ್ಲೇ ಪತ್ನಿ ಮೇಲೆ ಮಚ್ಚಿನಿಂದ ಮಾರಣಾಂತಿಕ ಹಲ್ಲೆಯನ್ನು ಮಾಡಿದ್ದಾನೆ. ರಸ್ತೆಯಲ್ಲಿ ಅಟ್ಟಾಡಿಸಿಕೊಂಡು ಪತ್ನಿಗೆ ಮಚ್ಚಿನಿಂದ ಹೊಡೆದಿದ್ದಾನೆ. ಬೆಂಗಳೂರಿನ ಜೀವನ್ ಭೀಮಾ ನಗರದ ವಿಂಡ್ ಟನಲ್ ರಸ್ತೆಯಲ್ಲಿ  ಈ ಘಟನೆ ನಡೆದಿದೆ. ಶೇಕ್ ಮುಜೀಬ್‌ ಎನ್ನುವಾತ ನೈಗರ್ (28) ಎನ್ನುವಾಕೆಯನ್ನು ಪ್ರೀತಿಸಿ ಮದುವೆಯಾಗಿದ್ದ. ಆದ್ರೆ, ಹೆಂಡ್ತಿ ಬೇರೊಬ್ಬನ ಜತೆ ಸಂಬಂಧ ಹೊಂದಿದ್ದಾಳೆಂದು ಆಕೆಯ ಮೇಲೆ ಮಚ್ಚಿನಿಂದ ಹಲ್ಲೆ ಮಾಡಿದ್ದಾನೆ.

ಮತ್ತಷ್ಟು ಓದಿ: ಕಲಬುರಗಿ: ರಸ್ತೆ ಮಧ್ಯೆ ಲಾರಿ ನಿಲ್ಲಿಸಿದ್ದನ್ನು ಪ್ರಶ್ನಿಸಿದಕ್ಕೆ ಯುವಕರ ಮೇಲೆ ಹಲ್ಲೆ

ನೈಗರ್​ಳ ತಲೆಗೆ ಮಚ್ಚಿನ ಏಟು ಬಿದ್ದಿದ್ದು, ಸದ್ಯ ಮಹಿಳೆ ಪ್ರಾಣಾಪಾಯದಿಂದ ಪಾರಾಗಿದ್ದಾಳೆ. ಇನ್ನು ಶೇಕ್ ಮುಜೀಬ್ ನನ್ನು ಜೆ ಬಿ ನಗರ ಪೊಲೀಸರು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ.

ನೈಗರ್​ಳನ್ನ ಪ್ರೀತಿಸಿ ಮದುವೆಯಾಗಿದ್ದ ಹೊಸಕೋಟೆ ಮೂಲದ ಶೇಕ್ ಮುಜೀಬ್, ಆರ್ ಟಿ ನಗರದಲ್ಲಿ ನೆಲೆಸಿದ್ದ. ನೈಗರ್, ಮುರುಗೇಶ್ ಪಾಳ್ಯದ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರೆ, ಆರೋಪಿ ಶೇಕ್ ಮುಜೀಬ್ ಕ್ಯಾಬ್ ಚಾಲಕನಾಗಿ ಕೆಲಸ ಮಾಡುತ್ತಿದ್ದ. ಕೆಲಸ ಮಾಡುತ್ತಿದ್ದ ಸ್ಥಳದಲ್ಲಿ ಯುವಕನ ಜೊತೆ ಸಂಬಂಧ ಇದೆ ಎಂದು ಅನುಮಾನ ಬಂದಿದೆ.

ಈ ಹಿನ್ನೆಲೆಯಲ್ಲಿ ನೈಗರ್​ಳನ್ನ ಕೆಲಸಕ್ಕೆ ಹೋಗುವುದನ್ನ ಬಿಡಿಸಬೇಕು ಎಂದು ಪ್ಲ್ಯಾನ್ ಮಾಡಿದ್ದ. ಹೀಗಾಗಿ ಆಕೆಯ ಕೈ ಬೆರಳು ಕಟ್ ಮಾಡಬೇಕೆಂದುಕೊಂಡಿದ್ದ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್