Dharwad News: ಸಾಲಗಾರನ ಕಿರುಕುಳ: ವಿಡಿಯೋ ಮಾಡಿಟ್ಟು ವ್ಯಕ್ತಿ ಆತ್ಮಹತ್ಯೆಗೆ ಶರಣು

ಹತ್ತು ಲಕ್ಷಕ್ಕೆ 18 ಲಕ್ಷ ರೂ. ನೀಡಿದರೂ ಮತ್ತೆ ಮತ್ತೆ ಬಡ್ಡಿ ನೀಡುವಂತೆ ದಂಧೆಕೋರನ ಕಿರುಕುಳ ತಾಳಲಾರದೆ ವಿಡಿಯೋ ಮಾಡಿಟ್ಟು ಓರ್ವ ವ್ಯಕ್ತಿ ಆತ್ಮಹತ್ಯೆಗೆ ಶರಣಾಗಿರುವಂತಹ ಘಟನೆ ಕೆಲಗೇರಿ ಬಡಾವಣೆಯ ಚೈತನ್ಯ ನಗರದಲ್ಲಿ ನಡೆದಿದೆ.

Dharwad News: ಸಾಲಗಾರನ ಕಿರುಕುಳ: ವಿಡಿಯೋ ಮಾಡಿಟ್ಟು ವ್ಯಕ್ತಿ ಆತ್ಮಹತ್ಯೆಗೆ ಶರಣು
ಮೃತ ನಿಂಗರಾಜ್ ಸಿದ್ದಪ್ಪನವರ
Follow us
ನರಸಿಂಹಮೂರ್ತಿ ಪ್ಯಾಟಿ, ಧಾರವಾಡ
| Updated By: ಗಂಗಾಧರ​ ಬ. ಸಾಬೋಜಿ

Updated on:Jul 22, 2023 | 7:16 PM

ಧಾರವಾಡ, ಜುಲೈ 22: ಸಾಲಗಾರನ ಕಿರುಕುಳ ತಾಳಲಾರದೆ ವಿಡಿಯೋ ಮಾಡಿಟ್ಟು ಓರ್ವ ವ್ಯಕ್ತಿ ಆತ್ಮಹತ್ಯೆಗೆ (suicide) ಶರಣಾಗಿರುವಂತಹ ಘಟನೆ ಕೆಲಗೇರಿ ಬಡಾವಣೆಯ ಚೈತನ್ಯ ನಗರದಲ್ಲಿ ನಡೆದಿದೆ. ನಿಂಗರಾಜ್ ಸಿದ್ದಪ್ಪನವರ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಬಡ್ಡಿ ದಂಧೆಕೋರ ಆನಂದ ಪಾಸ್ತೆ ವಿರುದ್ಧ ವಿಡಿಯೋ ಮಾಡಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ನಿಂಗರಾಜ್ ಸಿದ್ದಪ್ಪನವರ 2018ರಲ್ಲಿ ಕರೆಪ್ಪ ಗಳೆನವರ್​ ಮೂಲಕ ಮನೆ ಪತ್ರ ಅಡಮಾನವಿಟ್ಟು ಪಾಸ್ತೆಯಿಂದ 10 ಲಕ್ಷ ರೂಪಾಯಿ ಸಾಲ ಪಡೆದಿದ್ದ. ಮತ್ತೆ ಮತ್ತೆ ಬಡ್ಡಿ ನೀಡುವಂತೆ ದಂಧೆಕೋರ ಆನಂದ ಪಾಸ್ತೆ ಪೀಡಿಸಿದ್ದು, ಹತ್ತು ಲಕ್ಷಕ್ಕೆ 18 ಲಕ್ಷ ರೂ. ತುಂಬಿಸಿಕೊಂಡಿದ್ದಾರೆಂದು ನಿಂಗರಾಜ್ ವಿಡಿಯೋದಲ್ಲಿ ಅಳಲು ತೊಡಿಕೊಂಡಿದ್ದಾರೆ.

ಇದನ್ನೂ ಓದಿ: ಕಣ್ಣಿಗೆ ಖಾರದಪುಡಿ ಎರಚಿ ಕೊಲೆ ಪ್ರಕರಣ: ಇಬ್ಬರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಬಳ್ಳಾರಿ ಕೋರ್ಟ್

ಬಡ್ಡಿ ಕೊಡು ಅಥವಾ ಮನೆ ಖಾಲಿ ಮಾಡು ಎಂದು ಆನಂದ ಪಾಸ್ತೆ ಬೆದರಿಕೆ ಹಾಕಿದ್ದಾನೆ. ಹಾಗಾಗಿ ತನಗೆ ಮೋಸ ಮಾಡಿದವರ ಹೆಸರು ಹೇಳಿ ವಿಡಿಯೋ ಮಾಡಿಟ್ಟು ನಿಂಗರಾಜ್ ಸಿದ್ದಪ್ಪನವರ್​ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಧಾರವಾಡ ಉಪನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಆಸ್ತಿ ವಿಚಾರಕ್ಕೆ ನಡು ರಸ್ತೆಯಲ್ಲೇ ಅಣ್ಣ ತಮ್ಮಂದಿರ ಗಲಾಟೆ

ದಾವಣಗೆರೆ: ಆಸ್ತಿ ವಿಚಾರಕ್ಕೆ ಅಣ್ಣ-ತಮ್ಮಂದಿರ ಮಧ್ಯೆ ಭೀಕರ ಗಲಾಟೆ ನಡೆದಿರುವಂತಹ ಘಟನೆ ದಾವಣಗೆರೆ ತಾಲೂಕಿನ ಮೆಳ್ಳೇಕಟ್ಟೆ ಗ್ರಾಮದಲ್ಲಿ ನಡೆದಿದೆ. ನಡು ರಸ್ತೆಯಲ್ಲೇ ಗಲಾಟೆ ನಡೆದಿದ್ದು, ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ಸಿದ್ದೇಶ್, ಮಲ್ಲಿಕಾರ್ಜುನ ಗಲಾಟೆ ಮಾಡಿಕೊಂಡ ಸಹೋದರರು. ತಾಯಿ ಹೆಸರಿಗಿರುವ ಅಡಿಕೆ ಜಮೀನು ತನ್ನ ಹೆಸರಿಗೆ ಮಾಡುವಂತೆ ಅಣ್ಣ ಸಿದ್ದೇಶ್ ಗಲಾಟೆ ಮಾಡಿದ್ದು, ರಾಡ್​ನಿಂದ್ ಮಲ್ಲಿಕಾರ್ಜುನ ಕಾರ್ ಗ್ಲಾಸ್ ಒಡೆದು ಬೆಂಕಿ ಹಚ್ಚಿದ್ದಾನೆ.

ಇದನ್ನೂ ಓದಿ: Chikkaballapur News: ಹಣ ದ್ವಿಗುಣದ ಆಸೆಗೆ 3.21 ಲಕ್ಷ ರೂಪಾಯಿ ಕಳೆದುಕೊಂಡ ಚಿಕ್ಕಬಳ್ಳಾಪುರ ಶಿಕ್ಷಕಿ!

ತಡೆಯಲು ಬಂದು ಮಲ್ಲಿಕಾರ್ಜುನ ಮತ್ತು ಅವರ ಮನೆಯವರ ಮೇಲೂ ರಾಡ್​ನಿಂದ ಹಲ್ಲೆ ಮಾಡಲಾಗಿದೆ. ಈ ಬಗ್ಗೆ ದಾವಣಗೆರೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 7:14 pm, Sat, 22 July 23

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ