Somwarpet: ಕಾಫಿತೋಟದಲ್ಲಿ ಎದೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ ಯುವಕ

ಕಾಫಿತೋಟದಲ್ಲಿ ಎದೆಗೆ ಗುಂಡು ಹಾರಿಸಿಕೊಂಡು ಯುವಕ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಗರ್ವಾಲೆ ಗ್ರಾಮದಲ್ಲಿ ನಡೆದಿದೆ.

Somwarpet: ಕಾಫಿತೋಟದಲ್ಲಿ ಎದೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ ಯುವಕ
ನಾಪಂಡ ರಾಜೇಶ್(26) ಆತ್ಮಹತ್ಯೆಗೆ ಶರಣಾದ ಯುವಕ
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on:Jan 15, 2023 | 9:39 PM

ಕೊಡಗು: ಕಾಫಿತೋಟದಲ್ಲಿ ಎದೆಗೆ ಗುಂಡು ಹಾರಿಸಿಕೊಂಡು ಯುವಕ ಆತ್ಮಹತ್ಯೆ (suicide) ಮಾಡಿಕೊಂಡಿರುವಂತಹ ಘಟನೆ ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಗರ್ವಾಲೆ ಗ್ರಾಮದಲ್ಲಿ ನಡೆದಿದೆ. ನಾಪಂಡ ರಾಜೇಶ್(26) ಮೃತ ಯುವಕ. ಬೆಂಗಳೂರಿನಲ್ಲಿ ಖಾಸಗಿ ಕಂಪನಿಯಲ್ಲಿ ರಾಜೇಶ್ ಕೆಲಸ ಮಾಡುತ್ತಿದ್ದ. ಊರಿಗೆ ಬಂದಿದ್ದಾಗ ಕಾಫಿತೋಟದಲ್ಲಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಮಾದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಡಲತೀರದಲ್ಲಿ ಪ್ರವಾಸಿಗ ಸಾವು

ಕಾರವಾರ: ಗೋಕರ್ಣ ಮುಖ್ಯ ಕಡಲತೀರದಲ್ಲಿ ಪ್ರವಾಸಿಗರೊಬ್ಬರು ಸಾವನ್ನಪ್ಪಿರುವಂತಹ ಘಟನೆ ಉತ್ತರ ಕನ್ನಡ ಜಿಲ್ಲೆ ಕುಮಟಾ ತಾಲೂಕಿನ ಗೋಕರ್ಣದಲ್ಲಿ ನಡೆದಿದೆ. ಹಾವೇರಿ ಮೂಲದ ಸಂತೋಷ ಗಾಣಿಗೇರ (23) ಸಾವನ್ನಪ್ಪಿದ ಯುವಕ. ನೀರಿನಿಂದ ಮೇಲೆ ಬಂದು ದಡದಲ್ಲಿ ಮಲುಗಿದ್ದ ವೇಳೆ ಹೃದಯಾಘಾತದಿಂದ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ ಸ್ನೇಹಿತರೊಂದಿಗೆ ಪ್ರವಾಸಕ್ಕೆ ಬಂದಿದ್ದ ವೇಳೆ ಘಟನೆ ನಡೆದಿದೆ. ಮೃತ ದೇಹವನ್ನ ಗೋಕರ್ಣದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ರವಾನೆ ಮಾಡಲಾಗಿದೆ. ಗೋಕರ್ಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಪ್ರೀತಿಸಿ ಮೋಸ ಮಾಡಿದ ಬಿಜೆಪಿ ಕಾರ್ಯಕರ್ತ: ಚಿಕಿತ್ಸೆ ಪಡೆಯುವ ವೇಳೆ ಡೆತ್​ ನೋಟ್​ ಬರೆದಿಟ್ಟು ಬಾಲಕಿ ನಿಧನ

ಪಿಕ್ನಿಕ್‌ಗೆ ತೆರಳಿದ್ದ ಬಸ್ ಪಲ್ಟಿಯಾಗಿ ಐವರು ವಿದ್ಯಾರ್ಥಿಗಳಿಗೆ ಗಾಯ

ಚಿಕ್ಕಮಗಳೂರು: ಪಿಕ್ನಿಕ್‌ಗೆ ತೆರಳಿದ್ದ ಬಸ್ ಪಲ್ಟಿಯಾಗಿ ಐವರು ವಿದ್ಯಾರ್ಥಿಗಳಿಗೆ ಗಾಯವಾಗಿ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ದೇವರಮನೆ ಗುಡ್ಡದಲ್ಲಿ ಸಂಭವಿಸಿದೆ. ದೇವರಮನೆ ಗುಡ್ಡದಿಂದ ಹಿಂದಿರುಗುವಾಗ ಈ ದುರ್ಘಟನೆ ನಡೆದಿದೆ. ಮುತ್ತಿಗೆಪುರದ ಹರೀಶ್ ಪಿಯು ಕಾಲೇಜಿನ ವಿದ್ಯಾರ್ಥಿಗಳಿದ್ದ ಬಸ್‌, ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಬಳಿಕ ಬಸ್ ಪಲ್ಟಿಯಾಗಿದೆ. ಗಾಯಾಳು ವಿದ್ಯಾರ್ಥಿಗಳಿಗೆ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ರೇವಣಸಿದ್ದೇಶ್ವರ ಬೆಟ್ಟದಲ್ಲಿ ಯಾರೋ ಹಚ್ಚಿದ ಬೆಂಕಿಗೆ ಆಹುತಿಯಾದ ಪಾದಯಾತ್ರಿ

ತುಮಕೂರು: ರೇವಣಸಿದ್ದೇಶ್ವರ ಬೆಟ್ಟದಲ್ಲಿ ಪಾದಯಾತ್ರಿಯೋರ್ವರು ಬೆಂಕಿಗೆ ಆಹುತಿಯಾದ ಘಟನೆ ತುಮಕೂರು ಜಿಲ್ಲೆ ತಿಪಟೂರು ತಾಲೂಕಿನ ಹೊನ್ನವಳ್ಳಿ ಬಳಿಯ ಬೆಟ್ಟದಲ್ಲಿ ನಡೆದಿದೆ. ಸಿದ್ದೇಶ್ವರ ಬೆಟ್ಟದ ತಪ್ಪಲಿನಲ್ಲಿ ಕಿಡಿಗೇಡಿಗಳು ಹುಲ್ಲಿಗೆ ಬೆಂಕಿಯಿಟ್ಟಿದ್ದಾರೆ. ದುರ್ವೈವ ಅಂದ್ರೆ ಈ ಬೆಂಕಿ ಕಾಲ್ನಡಿಗೆಯಲ್ಲಿ ಬೆಟ್ಟಕ್ಕೆ ಬಂದಿದ್ದ ಪಾದಯಾತ್ರಿಗೆ ತಗುಲಿ ಸಾವನ್ನಪ್ಪಿದ್ದಾರೆ. ಹೊನ್ನವಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದ್ದು, ಪಾದಯಾತ್ರಿ ಯಾರು?ಎಲ್ಲಿಯವರು ಎಂದು ಮಾಹಿತಿ ತಿಳಿದುಬಂದಿಲ್ಲ.

ಇದನ್ನೂ ಓದಿ: Mangaluru: ಅನ್ಯಕೋಮಿನ ವಿದ್ಯಾರ್ಥಿನಿಗೆ ಚಾಕಲೇಟ್ ಬೇಕಾ ಅಂತ ಕೇಳಿದಾತನಿಗೆ ಥಳಿತ ಪ್ರಕರಣ; 6 ಮಂದಿ ವಿರುದ್ಧ ದೂರು ದಾಖಲು

ಚನ್ನಪಟ್ಟಣದಲ್ಲಿ ಮಚ್ಚು ಹಿಡಿದು ರಸ್ತೆಯಲ್ಲಿ ಓಡಾಡಿದ ಮಾನಸಿಕ ಅಸ್ವಸ್ಥ

ರಾಮನಗರ: ಮಾನಸಿಕ ಅಸ್ವಸ್ಥನೊಬ್ಬ ಮಚ್ಚು ಹಿಡಿದು ರಸ್ತೆಯಲ್ಲಿ ಓಡಾಡಿ ನಿವಾಸಿಗರಲ್ಲಿ ಭಯ ಹುಟ್ಟಿಸಿದ ಘಟನೆ ಜಿಲ್ಲೆಯ ಚನ್ನಪಟ್ಟಣದಲ್ಲಿ ನಡೆದಿದೆ. ನಿಮ್ಹಾನ್ಸ್​ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮನೆಗೆ ಬಂದಿದ್ದ ವ್ಯಕ್ತಿ, ಇಂದು ಏಕಾಏಕಿ ಮನೆಯಿಂದ ಮಚ್ಚು ಹಿಡಿದು ಹೊರಬಂದಿದ್ದು, ನಿವಾಸಿಗಳು ಮನೆಗಳಿಂದ ಹೊರಬರಲು ಹೆದರುತ್ತಿದ್ದಾರೆ. ಕೂಡಲೇ ಆತನನ್ನು ಆಸ್ಪತ್ರೆಗೆ ಸೇರಿಸುವಂತೆ ಮಾನಸಿಕ ಅಸ್ವಸ್ಥನ ಕುಟುಂಬ ಸದಸ್ಯರಿಗೆ ಪೊಲೀಸರು ಸೂಚನೆ ನೀಡಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:38 pm, Sun, 15 January 23

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ