Davanagere News: ಪೊಲೀಸರಿಂದ ತಪ್ಪಿಸಿಕೊಳ್ಳುವಾಗ ಸೇತುವೆ ಮೇಲಿಂದ ಹಾರಿ ವ್ಯಕ್ತಿ ಸಾವು, ಪೊಲೀಸರ ಮೇಲೆ ಕೇಳಿಬಂತು ಆರೋಪ

ಪೊಲೀಸರಿಂದ‌ ತಪ್ಪಿಸಿಕೊಳ್ಳಲು ಹೋಗಿ ಸೇತುವೆ ಮೇಲಿಂದ ಹಾರಿ ವ್ಯಕ್ತಿಯೊಬ್ಬ ಸಾವನ್ನಪ್ಪಿದ ಘಟನೆ ದಾವಣಗೆರೆ ತಾಲೂಕಿನ ತೋಳಹುಣಸೆ ಬಳಿಯ ಸೇತುವೆ ಬಳಿ ನಡೆದಿದೆ. ಹರೀಶ್ ಹಳ್ಳಿ (40) ಸಾವನ್ನಪ್ಪಿದ ವ್ಯಕ್ತಿ.

Davanagere News: ಪೊಲೀಸರಿಂದ ತಪ್ಪಿಸಿಕೊಳ್ಳುವಾಗ ಸೇತುವೆ ಮೇಲಿಂದ ಹಾರಿ ವ್ಯಕ್ತಿ ಸಾವು, ಪೊಲೀಸರ ಮೇಲೆ ಕೇಳಿಬಂತು ಆರೋಪ
ಮೃತರ ಕುಟುಂಬಸ್ಥರ ಆಕ್ರೋಶ
Follow us
ಕಿರಣ್ ಹನುಮಂತ್​ ಮಾದಾರ್
|

Updated on: May 28, 2023 | 9:39 AM

ದಾವಣಗೆರೆ: ಪೊಲೀಸರಿಂದ‌ ತಪ್ಪಿಸಿಕೊಳ್ಳಲು ಹೋಗಿ ಸೇತುವೆ ಮೇಲಿಂದ ಹಾರಿ ವ್ಯಕ್ತಿಯೊಬ್ಬ ಸಾವನ್ನಪ್ಪಿದ ಘಟನೆ ದಾವಣಗೆರೆ (Davanagere )ತಾಲೂಕಿನ ತೋಳಹುಣಸೆ ಬಳಿಯ ಸೇತುವೆ ಬಳಿ ನಡೆದಿದೆ. ಹರೀಶ್ ಹಳ್ಳಿ (40) ಸಾವನ್ನಪ್ಪಿದ ವ್ಯಕ್ತಿ.ಪ್ರಕರಣವೊಂದರಲ್ಲಿ ಪೊಲೀಸರಿಗೆ ಬೇಕಾಗಿದ್ದ ಹರೀಶ್ ಹಳ್ಳಿಯನ್ನ ಪೊಲೀಸರು ವಶಕ್ಕೆ ಪಡೆದು ಕರೆ ತರುವ ವೇಳೆ ದಾವಣಗೆರೆ ತಾಲೂಕಿನ ತೋಳಹುಣಸೆ ಬಳಿಯ ಸೇತುವೆ ಬಳಿ ಪೊಲೀಸ್ ಜೀಪ್​ನಿಂದ ಇಂದು ಬೆಳಿಗ್ಗೆ 2.30ಕ್ಕೆ ತಪ್ಪಿಸಿಕೊಂಡು ಹರೀಶ್ ಹಾರಿದ್ದ. ಬಳಿಕ ತೀವ್ರಗಾಯಗೊಂಡ ಹರೀಶ್​ನನ್ನು ಆಸ್ಪತ್ರೆಗೆ ರವಾನೆ ಮಾಡಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲಿ ಕೊನೆಯುಸಿರೆಳದಿದ್ದಾನೆ.

ಮಾಹಿತಿ ಹಕ್ಕು ಹೋರಾಟಗಾರನಾಗಿದ್ದ ಹರೀಶ್ ಹಳ್ಳಿ

ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಕಬ್ಬಳ ಗ್ರಾಮದ ನಿವಾಸಿಯಾದ ಹರೀಶ್ ಹಳ್ಳಿಯೊಬ್ಬ ಮಾಹಿತಿ ಹಕ್ಕು ಹೋರಾಟಗಾರನಾಗಿದ್ದ. ನಿನ್ನೆ(ಮೇ.27) ನಕಲಿ ದಾಖಲೆ ಸೃಷ್ಠಿಸಿ ಬೇರೊಬ್ಬರ ಸೈಟ್ ತನ್ನ ಹೆಸರಿಗೆ ಮಾಡಿಕೊಂಡ ಆರೋಪ ಎದುರಿಸುತ್ತಿದ್ದ ಹರೀಶ್ ಹಳ್ಳಿಯನ್ನ ಇತನ ಪತ್ನಿಯ ಊರಾದ ಚನ್ನಗಿರಿ ಕಾಕನೂರ ಗ್ರಾಮದಿಂದ ಪೊಲೀಸರು ಕರೆ ತಂದಿದ್ದರು. ಈ ವೇಳೆ ದುರ್ಘಟನೆ ನಡೆದಿದ್ದು, ಕುಟುಂಬ ಸದಸ್ಯರು ಪೊಲೀಸರ ವಿರುದ್ದ ಆಕ್ರೋಶ ವ್ಯಕ್ತಪಡಿಸಿ, ಆಸ್ಪತ್ರೆ ಎದುರು ಹೋರಾಟ ನಡೆಸಿದ್ದಾರೆ.

ಇದನ್ನೂ ಓದಿ:Yadgir New: ಚಲಿಸುತ್ತಿದ್ದ ಬಸ್‌ನಲ್ಲೇ ಹೃದಯಾಘಾತದಿಂದ ಮಹಿಳೆ ಸಾವು

ಎಸ್ ಐ ಹಾಗೂ ಇಬ್ಬರು ಪಿಸಿಗಳ ವಿರುದ್ದ ದೂರು

ಹೌದು ಪೊಲೀಸರೇ ಕೊಲೆ ಮಾಡಿದ್ದಾರೆ ಎಂದು ಆರೋಪಿಸಿ ಮೃತ ಸುರೇಶ್​ ಪತ್ನಿಯಿಂದ ಎಸ್ ಐ ಹಾಗೂ ಇಬ್ಬರು ಪಿಸಿಗಳ ವಿರುದ್ದ ದೂರು ನೀಡಿದ್ದಾರೆ. ಪ್ರಕರಣದ ವಿಚಾರವಾಗಿ ತನ್ನ ಪತಿಯನ್ನ ಕರೆದುಕೊಂಡು ಹೋಗಿ ಗಾಂಧಿನಗರ ಪೊಲೀಸ್ ಠಾಣೆಯ ಎಸ್ ಐ ಕೃಷ್ಣಪ್ಪ ಹಾಗೂ ಇಬ್ಬರು ಪಿಸಿಗಳು ಸೇರಿ ಕೊಲೆ ಮಾಡಿದ್ದಾರೆ ಎಂದು ದೂರು ದಾಖಲಿಸಿದ್ದಾರೆ. ಇನ್ನು ಮಾಹಿತಿ ತಿಳಿದು ಸ್ಥಳಕ್ಕೆ ದಾವಣಗೆರೆ ಎಸ್ಪಿ ಡಾ.ಕೆ.ಅರುಣ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇನ್ನಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ