AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shivamogga News: ಸಿಗಂದೂರು ದೇವಿಯ ದರ್ಶನಕ್ಕೆ ಬಂದಿದ್ದ ವ್ಯಕ್ತಿ ಹೃದಯಾಘಾತದಿಂದ ಸಾವು

ಸಿಗಂದೂರು ದೇವಿಯ ದರ್ಶನಕ್ಕೆ ಬಂದಿದ್ದ ವ್ಯಕ್ತಿ ಹೃದಯಘಾತದಿಂದ ಸಾವನ್ನಪ್ಪಿರುವಂತಹ ಘಟನೆ ಹೊಸನಗರದ ಲಾಡ್ಜ್​​ನಲ್ಲಿ ತಂಗಿದ್ದ ವೇಳೆ ನಡೆದಿದೆ.

Shivamogga News: ಸಿಗಂದೂರು ದೇವಿಯ ದರ್ಶನಕ್ಕೆ ಬಂದಿದ್ದ ವ್ಯಕ್ತಿ ಹೃದಯಾಘಾತದಿಂದ ಸಾವು
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on:Jan 05, 2023 | 7:51 PM

ಶಿವಮೊಗ್ಗ: ಸಿಗಂದೂರು ದೇವಿಯ ದರ್ಶನಕ್ಕೆ (Sigandhur Chowdeshwari temple) ಬಂದಿದ್ದ ವ್ಯಕ್ತಿ ಹೃದಯಘಾತದಿಂದ ಸಾವನ್ನಪ್ಪಿರುವಂತಹ ಘಟನೆ ಹೊಸನಗರದ ಲಾಡ್ಜ್​​ನಲ್ಲಿ ತಂಗಿದ್ದ ವೇಳೆ ನಡೆದಿದೆ. ಮುನಿರಾಜು (48) ಮೃತ ವ್ಯಕ್ತಿ. ಬೆಂಗಳೂರಿನ ಆಡುಗೋಡಿ ಆನೆಪಾಳ್ಯದ ರಿಯಲ್ ಎಸ್ಟೇಟ್ ಉದ್ಯಮಿಯಾಗಿರುವ ಮುನಿರಾಜು, ಜ. 4ರಂದು ಪುಣ್ಯಕ್ಷೇತ್ರಗಳ ಪ್ರವಾಸಕ್ಕೆ ಪತ್ನಿ ಮಕ್ಕಳೊಂದಿಗೆ ತೆರಳಿದ್ದರು. ಸಿಗಂದೂರಿನ ಶ್ರೀ ಚೌಡೇಶ್ವರಿ ದೇವಿ ದರ್ಶನಕ್ಕಾಗಿ ತೆರಳಲು ಹೊಸನಗರ ಬರುವಾಗ ರಾತ್ರಿ ಆದ ಕಾರಣ ಪಟ್ಟಣದ ಅಲಂಕಾರ್ ಲಾಡ್ಜ್‌ನಲ್ಲಿ ತಂಗಿದ್ದಾರೆ. ಈ ವೇಳೆ ಮುನಿರಾಜುವಿಗೆ ಎದೆ ನೋವು ಕಾಣಿಸಿಕೊಂಡಿದೆ. ಕೂಡಲೇ ಹೊಸನಗರ ತಾಲೂಕು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ತೀವ್ರ ಹೃದಯಘಾತದಿಂದ ಮೃತಪಟ್ಟಿರುವುದಾಗಿ ವೈದ್ಯರು ಖಚಿತ ಪಡಿಸಿದ್ದಾರೆ. ಹೊಸನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ದಾಖಲಾಗಿದೆ.

ಕೊಲೆ ಆರೋಪಿ ಮೇಲೆ ಪೊಲೀಸರಿಂದ ಗುಂಡಿನದಾಳಿ

ಕಲಬುರಗಿ: ಕೊಲೆ ಪ್ರಕರಣದ ಆರೋಪಿ ಮೇಲೆ ಪೊಲೀಸರಿಂದ ಗುಂಡಿನದಾಳಿ ಮಾಡಿರುವಂತಹ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಮಂಜುನಾಥಸ್ವಾಮಿ ಮೇಲೆ ಗುಂಡುಹಾರಿಸಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪ್ರಶಾಂತ್ ಕುಂಬಾರ(30) ಮೇಲೆ ಹಾಡಹಗಲೇ ಕಲ್ಲು ಎತ್ತಿಹಾಕಿ ಆರೋಪಿ ಕೊಂದಿದ್ದ. ಪೊಲೀಸರು ಬಂಧಿಸಲು ತೆರಳಿದ್ದಾಗ ಮಾರಕಾಸ್ತ್ರದಿಂದ ಹಲ್ಲೆಗೆ ಯತ್ನಿಸಿದ್ದಾನೆ. ಆತ್ಮರಕ್ಷಣೆಗಾಗಿ ಆರೋಪಿ ಮಂಜುನಾಥಸ್ವಾಮಿ ಮೇಲೆ ಪೊಲೀಸರು ಗುಂಡಿನ ದಾಳಿ ಮಾಡಿದ್ದಾರೆ. ಗಾಯಾಳು ಮಂಜುನಾಥಸ್ವಾಮಿಗೆ ಜಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಕಾನ್ಸ್​ಟೇಬಲ್ ಸಿದ್ರಾಮಯ್ಯಸ್ವಾಮಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಕಲಬುರಗಿ ಚೌಕ್​ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಇದನ್ನೂ ಓದಿ: Chikkaballpura: ಹೆದ್ದಾರಿಯಲ್ಲಿ ವಾಹನ ನಿಲ್ಲಿಸುವುದಕ್ಕೂ ಮುನ್ನ ಈ ಸ್ಟೋರಿ ನೋಡಿ!

3 ಕಾರು 1 ಲಾರಿ‌ ನಡುವೆ ಸರಣಿ ಅಪಘಾತ 

ಉಡುಪಿ: 3 ಕಾರು 1 ಲಾರಿ‌ ನಡುವೆ ಸರಣಿ ಅಪಘಾತವಾಗಿದ್ದು, ಮಗು ಸಹಿತ ಇಬ್ಬರಿಗೆ ಗಾಯಗಳಾಗಿರುವಂತಹ ಘಟನೆ ಕರಾವಳಿ ಬೈಪಾಸ್ ಸಮೀಪ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಈ ದುರ್ಘಟನೆ ಸಂಭವಿಸಿದೆ. ಘಟನೆಯಲ್ಲಿ ಒಂದು ಹೊಸ ಕಾರು ನಜ್ಜುಗುಜ್ಜಾಗಿದ್ದು ಇತರ ವಾಹನಗಳಿಗೂ ಸಾಕಷ್ಟು ಹಾನಿಯಾಗಿದೆ. ಅಪಘಾತದಲ್ಲಿ ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಗಾಯಾಳುಗಳ ಮಾಹಿತಿ ಇನ್ನಷ್ಟೇ ಗೊತ್ತಾಗಬೇಕಿದೆ. ಪೊಲೀಸರು ಸ್ಥಳಕ್ಕೆ ಆಗಮಿಸಿ ಸಂಚಾರ ವ್ಯವಸ್ಥೆ ಸುಗಮಗೊಳಿಸಿದ್ದಾರೆ.

ಬೆಂಗಳೂರಿನಲ್ಲಿ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಯುವತಿ ಶವ ಪತ್ತೆ

ಬೆಂಗಳೂರು: ನಗರದಲ್ಲಿ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಯುವತಿ ಶವ ಪತ್ತೆಯಾಗಿರುವಂತಹ ಘಟನೆ ಯಶವಂತಪುರ ರೈಲ್ವೆ ನಿಲ್ದಾಣದಲ್ಲಿ ನಡೆದಿದೆ. 23 ವರ್ಷದ ಯುವತಿ ಶವ ಎನ್ನಲಾಗುತ್ತಿದೆ. ಗೂಡ್ಸ್ ಪ್ಲಾಟ್​ಫಾರ್ಮ್​ನ ಬಾಕ್ಸ್​ವೊಂದರಲ್ಲಿ ಶವ ಪತ್ತೆಯಾಗಿದ್ದು, ಪ್ಲಾಸ್ಟಿಕ್ ಕವರ್​​ನಲ್ಲಿ ಶವ ಇಟ್ಟು ದುಷ್ಕರ್ಮಿಗಳು ಸೀಲ್ ಮಾಡಿದ್ದಾರೆ. ವಾಸನೆ ಬಂದ ಹಿನ್ನೆಲೆ ಪರಿಶೀಲಿಸಿದಾಗ ಯುವತಿ ಶವ ಪತ್ತೆಯಾಗಿರುವುದು ಬೆಳಕಿಗೆ ಬಂದಿದೆ. ಯಶವಂತಪುರ ರೈಲ್ವೆ ಪೊಲೀಸ್​​​ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಇದನ್ನೂ ಓದಿ: ಬೆಂಗಳೂರಿನ ಕಾಲೇಜೊಂದರಲ್ಲಿ ಹಾಡಹಗಲೇ ಯುವತಿಗೆ ಚಾಕು ಇರಿದು ಕೊಲೆ ಮಾಡಿದ ಯುವಕ: ಪ್ರೀತಿ ಪ್ರೇಮದ ಶಂಕೆ

ಪಾರ್ಟಿ ವೇಳೆ ಕುಡಿದ ಮತ್ತಿನಲ್ಲಿ ಗಲಾಟೆ; ಯುವಕ ಸಾವು

ಚಿಕ್ಕಬಳ್ಳಾಪುರ: ಹೊಸ ವರ್ಷಾಚರಣೆಯ ಸಂಭ್ರಮದಲ್ಲಿ ಪಾರ್ಟಿ ಮಾಡುವ ವೇಳೆ ಕುಡಿದ ಮತ್ತಿನಲ್ಲಿ ಬಿಯರ್​ ಬಾಟಲಿಯಿಂದ ತಲೆಗೆ ಹೊಡೆದು ಯುವಕನ ಕೊಲೆ ಮಾಡಲಾಗಿದೆ. ದೊಡ್ಡ ಗಂಜೂರಿನ ನವೀನ್(28)ಕೊಲೆಯಾದ ದುರ್ದೈವಿ. ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ತಾಲೂಕಿನ ಐಮರೆಡ್ಡಿಹಳ್ಳಿ ಗ್ರಾಮದ ಐಮರೆಡ್ಡಿಹಳ್ಳಿಯ ಮಂಜಮ್ಮ ಡಾಬಾದಲ್ಲಿ ಬಿಯರ್ ಬಾಟಲಿಯಿಂದ ಇರಿದು ಯುವಕನನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Published On - 7:50 pm, Thu, 5 January 23

ಬುಮ್ರಾ ಬೌಲಿಂಗ್​ನಲ್ಲಿ ಸಿಕ್ಸರ್ ಬಾರಿಸಿದ ರವಿ ಬಿಷ್ಣೋಯ್; ವಿಡಿಯೋ
ಬುಮ್ರಾ ಬೌಲಿಂಗ್​ನಲ್ಲಿ ಸಿಕ್ಸರ್ ಬಾರಿಸಿದ ರವಿ ಬಿಷ್ಣೋಯ್; ವಿಡಿಯೋ
ಆಪರೇಷನ್ ಆಗಿದೆ, ಆರೋಗ್ಯ ಸರಿಯಿಲ್ಲ: ವಿನೋದ್ ರಾಜ್​
ಆಪರೇಷನ್ ಆಗಿದೆ, ಆರೋಗ್ಯ ಸರಿಯಿಲ್ಲ: ವಿನೋದ್ ರಾಜ್​
ಭಾರತ-ಪಾಕ್​ ಗಡಿಯಿಂದ Tv9 ಗ್ರೌಂಡ್​ ರಿಪೋರ್ಟ್​: ಸನ್ನದ್ಧವಾಗಿರುವ BSF ಯೋಧ
ಭಾರತ-ಪಾಕ್​ ಗಡಿಯಿಂದ Tv9 ಗ್ರೌಂಡ್​ ರಿಪೋರ್ಟ್​: ಸನ್ನದ್ಧವಾಗಿರುವ BSF ಯೋಧ
ಐಪಿಎಲ್​ನಲ್ಲಿ ವಿಶೇಷ ಮೈಲಿಗಲ್ಲು ಸ್ಥಾಪಿಸಿದ ಸೂರ್ಯ
ಐಪಿಎಲ್​ನಲ್ಲಿ ವಿಶೇಷ ಮೈಲಿಗಲ್ಲು ಸ್ಥಾಪಿಸಿದ ಸೂರ್ಯ
ಡಾ.ರಾಜ್ ಕುಟುಂಬದ ಜೊತೆ ನಾವು ಸದಾ ಇರುತ್ತೇವೆ: ಡಿಕೆ ಶಿವಕುಮಾರ್
ಡಾ.ರಾಜ್ ಕುಟುಂಬದ ಜೊತೆ ನಾವು ಸದಾ ಇರುತ್ತೇವೆ: ಡಿಕೆ ಶಿವಕುಮಾರ್
ನಮ್ಮ ರಕ್ತ ಕುದಿಯುತ್ತಿದೆ: ಪಹಲ್ಗಾಮ್​ ದಾಳಿಗೆ ಶ್ರೀಮುರಳಿ ಪ್ರತಿಕ್ರಿಯೆ
ನಮ್ಮ ರಕ್ತ ಕುದಿಯುತ್ತಿದೆ: ಪಹಲ್ಗಾಮ್​ ದಾಳಿಗೆ ಶ್ರೀಮುರಳಿ ಪ್ರತಿಕ್ರಿಯೆ
ಕರ್ನಾಟಕದಲ್ಲಿ ನೆಲೆಸಿರುವ ಪಾಕ್​ ಪ್ರಜೆಗಳನ್ನು ಹೊರಗೆ ಹಾಕಲು ದಿಟ್ಟ ಹೆಜ್ಜೆ
ಕರ್ನಾಟಕದಲ್ಲಿ ನೆಲೆಸಿರುವ ಪಾಕ್​ ಪ್ರಜೆಗಳನ್ನು ಹೊರಗೆ ಹಾಕಲು ದಿಟ್ಟ ಹೆಜ್ಜೆ
ಕೆನಡಾದ ರಸ್ತೆಯಲ್ಲಿ ಜನರ ಮೇಲೆ ನುಗ್ಗಿದ ಕಾರು, ಹಲವು ಮಂದಿ ಸಾವು
ಕೆನಡಾದ ರಸ್ತೆಯಲ್ಲಿ ಜನರ ಮೇಲೆ ನುಗ್ಗಿದ ಕಾರು, ಹಲವು ಮಂದಿ ಸಾವು
ಪಾಕಿಸ್ತಾನದ ಮೇಲೆ ಯುದ್ಧ: ವರಸೆ ಬದಲಿಸಿದ ಸಿದ್ದರಾಮಯ್ಯ
ಪಾಕಿಸ್ತಾನದ ಮೇಲೆ ಯುದ್ಧ: ವರಸೆ ಬದಲಿಸಿದ ಸಿದ್ದರಾಮಯ್ಯ
ಈ ತಪ್ಪು ತಿದ್ದಿಕೊಳ್ಳದಿದ್ದರೇ ದಕ್ಷಿಣ ಕನ್ನಡಕ್ಕೆ ಅನಾಹುತ: ದೈವರಾಧಕ ಎಚ್ಚರ
ಈ ತಪ್ಪು ತಿದ್ದಿಕೊಳ್ಳದಿದ್ದರೇ ದಕ್ಷಿಣ ಕನ್ನಡಕ್ಕೆ ಅನಾಹುತ: ದೈವರಾಧಕ ಎಚ್ಚರ