ತುಂಗಭದ್ರಾ ನದಿಯಲ್ಲಿ ವ್ಯಕ್ತಿ ನೀರುಪಾಲು: ಮರಳು ದಂಧೆಗೆ ತೆಗೆದಿದ್ದ ಗುಂಡಿಯಲ್ಲಿ ಮುಳುಗಿ ಸಾವು ಶಂಕೆ

ಮೀನು ಹಿಡಿಯಲು ಹೋದ ವ್ಯಕ್ತಿ ತುಂಗಭದ್ರಾ ನದಿಯಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಹಾವೇರಿ ತಾಲೂಕಿನ ಹಾವನೂರು ಗ್ರಾಮದ ಬಳಿ ನಡೆದಿದೆ.

ತುಂಗಭದ್ರಾ ನದಿಯಲ್ಲಿ ವ್ಯಕ್ತಿ ನೀರುಪಾಲು: ಮರಳು ದಂಧೆಗೆ ತೆಗೆದಿದ್ದ ಗುಂಡಿಯಲ್ಲಿ ಮುಳುಗಿ ಸಾವು ಶಂಕೆ
ತುಂಗಭದ್ರಾ ನದಿಯಲ್ಲಿ ಶವಕ್ಕಾಗಿ ಹುಡುಕಾಟ ಮುಂದುವರಿದಿದೆ
Edited By:

Updated on: Nov 26, 2020 | 11:12 AM

ಹಾವೇರಿ: ಮೀನು ಹಿಡಿಯಲು ಹೋದ ವ್ಯಕ್ತಿ ತುಂಗಭದ್ರಾ ನದಿಯಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಹಾವೇರಿ ತಾಲೂಕಿನ ಹಾವನೂರು ಗ್ರಾಮದ ಬಳಿ ನಡೆದಿದೆ.

ಹೊನ್ನಪ್ಪ ಅನ್ವೇರಿ (30) ಮೃತ ವ್ಯಕ್ತಿಯಾಗಿದ್ದು, ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕಿನ ಹನುಮಾಪುರ ಗ್ರಾಮದ ನಿವಾಸಿಯಾಗಿರುವ ಹೊನ್ನಪ್ಪ ತುಂಗಭದ್ರಾ ನದಿಯಲ್ಲಿ ಮೀನು ಹಿಡಿಯಲು ತೆರಳಿದ್ದರು. ಈ ವೇಳೆ ನದಿಯಲ್ಲಿ ಅಕ್ರಮ‌ ಮರಳು ದಂಧೆಗೆ ತೆಗೆದಿರುವ ಗುಂಡಿಯಲ್ಲಿ ಮುಳುಗಿ ಹೊನ್ನಪ್ಪ ಮೃತಪಟ್ಟಿರಬಹುದು ಎಂದು ಶಂಕಿಸಲಾಗಿದೆ.

ಗುತ್ತಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಆಗಮಿಸಿದ ಗುತ್ತಲ ಪೊಲೀಸ್ ಠಾಣೆಯ ಅಧಿಕಾರಿಗಳು ಪರಿಶೀಲನೆ ನಡೆಸಿದರು.

ಅಲ್ಲದೆ ನೀರು ಪಾಲಾದ ಹೊನ್ನಪ್ಪನ ಶವಪತ್ತೆಗಾಗಿ ಶೋಧಕಾರ್ಯ ಮುಂದುವರೆದಿದೆ.

Published On - 11:11 am, Thu, 26 November 20

pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us