ಮಹಿಳೆಗೆ ಮದ್ಯ ಕುಡಿಸಿ ಬೆಳ್ಳಂಬೆಳಗ್ಗೆ ರಸ್ತೆಯಲ್ಲೇ ಅತ್ಯಾಚಾರ

ಮದುವೆಯಾಗುವುದಾಗಿ ನಂಬಿಸಿ ಮದ್ಯ ಕುಡಿಸಿ ಬೆಳ್ಳಂಬೆಳಗ್ಗೆ ಮಹಿಳೆ ಮೇಲೆ ಅತ್ಯಾಚಾರವೆಸಗಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಈ ವಿಷಯದ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಉಜ್ಜಯಿನಿಯ ಕೊಯ್ಲಾ ಫಾಟಕ್ ಬಳಿ ಘಟನೆ ನಡೆದಿದೆ ಎನ್ನಲಾಗುತ್ತಿದೆ.

ಮಹಿಳೆಗೆ ಮದ್ಯ ಕುಡಿಸಿ ಬೆಳ್ಳಂಬೆಳಗ್ಗೆ ರಸ್ತೆಯಲ್ಲೇ ಅತ್ಯಾಚಾರ
ಅಪರಾಧ
Follow us
ನಯನಾ ರಾಜೀವ್
|

Updated on:Sep 06, 2024 | 9:05 AM

ರಸ್ತೆಬದಿಯಲ್ಲಿ ಮಹಿಳೆ ಮೇಲೆ ಅತ್ಯಾಚಾರವೆಸಗಿರುವ ಘಟನೆ ಮಧ್ಯಪ್ರದೇಶದ ಉಜ್ಜಯಿನಿಯಲ್ಲಿ ನಡೆದಿದೆ. ಮಾಹಿತಿ ಪ್ರಕಾರ ಆರೋಪಿ ಮೊದಲು ಮಹಿಳೆಗೆ ಮದ್ಯ ಕುಡಿಸಿ ನಂತರ ಆಕೆಯ ಮೇಲೆ ರಸ್ತೆಯಲ್ಲೇ ಅತ್ಯಾಚಾರವೆಸಗಿ ಅಲ್ಲೇ ಬಿಟ್ಟು ಓಡಿ ಹೋಗಿದ್ದಾನೆ.

ಈ ವಿಷಯದ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಉಜ್ಜಯಿನಿಯ ಕೊಯ್ಲಾ ಫಾಟಕ್ ಬಳಿ ಘಟನೆ ನಡೆದಿದೆ ಎನ್ನಲಾಗುತ್ತಿದೆ. ಘಟನೆಯ ವಿಡಿಯೋ ವೈರಲ್ ಆದ ನಂತರ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ವಿಡಿಯೋ ವೈರಲ್ ಆದ ನಂತರ ಪೊಲೀಸರು ತಕ್ಷಣ ಕ್ರಮ ಕೈಗೊಂಡು ಸಂತ್ರಸ್ತ ಮಹಿಳೆಯ ದೂರಿನ ಆಧಾರದ ಮೇಲೆ ಆರೋಪಿ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಯುವಕ ತನ್ನನ್ನು ಮದುವೆಯಾಗುವುದಾಗಿ ಆಮಿಷ ಒಡ್ಡಿ ನಂತರ ಮದ್ಯ ಕುಡಿಸಿ ನಂತರ ತನ್ನೊಂದಿಗೆ ಅನುಚಿತವಾಗಿ ವರ್ತಿಸಿದ್ದಾನೆ ಎಂದು ಮಹಿಳೆ ಪೊಲೀಸರಿಗೆ ತಿಳಿಸಿದ್ದಾರೆ. ಆರೋಪಿ ಲೋಕೇಶ್ ಎಂದು ಹೇಳಲಾಗಿದ್ದು, ಕೃತ್ಯ ಎಸಗಿ ಅಲ್ಲಿಂದ ಪರಾರಿಯಾಗಿದ್ದಾನೆ.

ಮತ್ತಷ್ಟು ಓದಿ: Crime News: 5 ವರ್ಷದ ಮಗಳಿಗೆ ತಂದೆಯಿಂದಲೇ ಲೈಂಗಿಕ ಕಿರುಕುಳ

ನಂತರ ಮಹಿಳೆಯ ದೂರಿನ ಮೇರೆಗೆ ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ ಎಂದು ಕಾಂಗ್ರೆಸ್ ಹೇಳಿದೆ . ವಿಡಿಯೋ ಆಧರಿಸಿ ಪೊಲೀಸರು ತಕ್ಷಣ ಕ್ರಮ ಕೈಗೊಂಡು ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ಉಜ್ಜಯಿನಿ ಸೆಂಟ್ರಲ್ ಕೊತ್ವಾಲಿ ಪೊಲೀಸ್ ಠಾಣೆಯ ಸಿಎಸ್ ಪಿ ಓಂ ಪ್ರಕಾಶ್ ಮಿಶ್ರಾ ತಿಳಿಸಿದ್ದಾರೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 9:04 am, Fri, 6 September 24

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ