Crime News: ಹಾಸಿಗೆ ಹಿಡಿದಿದ್ದ 80 ವರ್ಷದ ವೃದ್ಧೆ ಮೇಲೆ ಅತ್ಯಾಚಾರ; ಅಪರಾಧಿಗೆ 12 ವರ್ಷ ಜೈಲು ಶಿಕ್ಷೆ

ದೆಹಲಿಯಲ್ಲಿ ವೃದ್ಧಾಪ್ಯದಿಂದ ಹಾಸಿಗೆ ಹಿಡಿದಿದ್ದ 80 ವರ್ಷದ ಮಹಿಳೆಯ ಮೇಲೆ 2022ರಲ್ಲಿ ಅತ್ಯಾಚಾರ ನಡೆಸಿದ್ದ 30 ವರ್ಷದ ವ್ಯಕ್ತಿಗೆ ನ್ಯಾಯಾಲಯವು 12 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ಅತ್ಯಾಚಾರದಿಂದಾಗಿ ಆ ವೃದ್ಧೆಯ ಮುಖ, ಕೈ ಮತ್ತು ಎದೆಯ ಚರ್ಮ ಸುಲಿದುಹೋಗಿದ್ದು, ದೇಹದಾದ್ಯಂತ ತೀವ್ರ ಗಾಯಗಳಾಗಿತ್ತು.

Crime News: ಹಾಸಿಗೆ ಹಿಡಿದಿದ್ದ 80 ವರ್ಷದ ವೃದ್ಧೆ ಮೇಲೆ ಅತ್ಯಾಚಾರ; ಅಪರಾಧಿಗೆ 12 ವರ್ಷ ಜೈಲು ಶಿಕ್ಷೆ
ಸಾಂದರ್ಭಿಕ ಚಿತ್ರ
Follow us
|

Updated on: Aug 02, 2024 | 8:59 PM

ನವದೆಹಲಿ: 2022ರಲ್ಲಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 80 ವರ್ಷದ ಹಾಸಿಗೆ ಹಿಡಿದ ವೃದ್ಧೆಯ ಮೇಲೆ ಅತ್ಯಾಚಾರ ಎಸಗಿದ ವ್ಯಕ್ತಿಗೆ 12 ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಲಾಗಿದೆ. ಈ ಘಟನೆಯು “ಸಾಮಾಜಿಕ ಮತ್ತು ನೈತಿಕ ಮೌಲ್ಯಗಳಿಗೆ ಹೊಡೆತ” ಎಂದು ನ್ಯಾಯಾಲಯ ತೀರ್ಪು ನೀಡಿದೆ. ತೀಸ್ ಹಜಾರಿ ನ್ಯಾಯಾಲಯದ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಆಂಚಲ್ ಅವರು ವೃದ್ಧೆಯ ಸಾಕ್ಷ್ಯವನ್ನು ಗಮನಿಸಿದ್ದಾರೆ. ತನ್ನನ್ನು ಬಿಟ್ಟುಬಿಡುವಂತೆ ಆಕೆ ಅತ್ಯಾಚಾರಿಯ ಬಳಿ ಮನವಿ ಮಾಡಿದರೂ ಆತ ಸುಮ್ಮನಾಗಲಿಲ್ಲ. ಆ ವೃದ್ಧೆಯ ಕೈಗಳನ್ನು ಕಟ್ಟಿ ಅವನು ತನ್ನ ಲೈಂಗಿಕ ಕಾಮವನ್ನು ಪೂರೈಸಿಕೊಳ್ಳಲು ಈ ಕೃತ್ಯ ಎಸಗಿದ್ದಾನೆ ಎಂದು ಸಾಕ್ಷಿಗಳು ಸಾಬೀತುಪಡಿಸಿವೆ.

ಈ ಘಟನೆಯ ನಂತರ ಆಕೆಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ಆಕೆಯ ಮುಖ, ಕೈ ಮತ್ತು ಎದೆಯ ಮೇಲೆ ಗಾಯಗಳಾಗಿರುವುದು ಕಂಡುಬಂದವು ಎಂದು ನ್ಯಾಯಾಲಯ ತನ್ನ ತೀರ್ಪಿನಲ್ಲಿ ಹೇಳಿದೆ. ಅಪರಾಧಿಯನ್ನು 30 ವರ್ಷದ ಅಂಕಿತ್ ಅಲಿಯಾಸ್ ಮೊಗ್ಲಿ ಎಂದು ಗುರುತಿಸಲಾಗಿದ್ದು, ಈತ ಅತ್ಯಾಚಾರ, ಮನೆ ಅತಿಕ್ರಮಣ, ಕಳ್ಳತನ ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾದವನಾಗಿದ್ದ.

ಇದನ್ನೂ ಓದಿ: Crime News: ಮದುವೆಯಾಗಲು ಒಪ್ಪದ ಯುವತಿಯ ಕತ್ತು ಸೀಳಿ, ಕೊಚ್ಚಿ ಕೊಂದ ಯುವಕ; ಮಹಾರಾಷ್ಟ್ರದಲ್ಲಿ ಭೀಕರ ಕೊಲೆ

ಪ್ರಾಸಿಕ್ಯೂಷನ್ ಪ್ರಕಾರ, ಅಪರಾಧಿಯು ವೃದ್ಧೆಯ ಮನೆಗೆ ಪ್ರವೇಶಿಸಿದಾಗ ಆಕೆ ಅನಾರೋಗ್ಯದಿಂದ ಹಾಸಿಗೆ ಮೇಲೆ ಮಲಗಿದ್ದಳು. ಆತ ವೃದ್ಧೆಯನ್ನು ಥಳಿಸಿ, ಪದೇ ಪದೇ ಅತ್ಯಾಚಾರ ಎಸಗಿದ್ದಾನೆ. ನಂತರ ಆಕೆಯ ಮೊಬೈಲ್ ಕದ್ದು ಪರಾರಿಯಾಗಿದ್ದಾನೆ.

ಈ ಅತ್ಯಾಚಾರದ ಅಪರಾಧಕ್ಕಾಗಿ ನ್ಯಾಯಾಲಯ ಅಪರಾಧಿಗೆ 12 ವರ್ಷಗಳ ಕಠಿಣ ಜೈಲು ಶಿಕ್ಷೆಯನ್ನು ವಿಧಿಸಿತು. ನ್ಯಾಯಾಲಯವು ಮನೆಗೆ ಅತಿಕ್ರಮಣವಾಗಿ ನುಗ್ಗಿದ್ದಕ್ಕೆ 5 ವರ್ಷ ಜೈಲು ಶಿಕ್ಷೆ, ಕಳ್ಳತನಕ್ಕಾಗಿ 1 ವರ್ಷ ಶಿಕ್ಷೆ ಮತ್ತು ನೋವುಂಟು ಮಾಡಿದ್ದಕ್ಕಾಗಿ 6 ತಿಂಗಳು ಶಿಕ್ಷೆ ವಿಧಿಸಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

‘ಕನ್ನಡ ಚಿತ್ರರಂಗಕ್ಕೆ ಸಮಿತಿ ಬೇಡ, ಇದರಿಂದ ಚಿತ್ರರಂಗಕ್ಕೆ ನಷ್ಟ’; ಗೋವಿಂದು
‘ಕನ್ನಡ ಚಿತ್ರರಂಗಕ್ಕೆ ಸಮಿತಿ ಬೇಡ, ಇದರಿಂದ ಚಿತ್ರರಂಗಕ್ಕೆ ನಷ್ಟ’; ಗೋವಿಂದು
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
‘ನನಗೂ ಕೆಟ್ಟ ಅನುಭವ ಆಗಿದೆ’; ನೀತು ಶೆಟ್ಟಿ ನೇರ ಮಾತು
‘ನನಗೂ ಕೆಟ್ಟ ಅನುಭವ ಆಗಿದೆ’; ನೀತು ಶೆಟ್ಟಿ ನೇರ ಮಾತು
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ