ವಿವಾಹಕ್ಕೆ ಉಡುಗೊರೆಯಾಗಿ ಬಂದಿದ್ದ ಹೋಂ ಥಿಯೇಟರ್ ಸ್ಫೋಟ ಇಬ್ಬರು ಸಾವು ಪ್ರಕರಣಕ್ಕೆ ಟ್ವಿಸ್ಟ್​, ಅದರಲ್ಲಿ ಬಾಂಬ್ ಇಟ್ಟಿದ್ದು ಯಾರು?

ವಿವಾಹಕ್ಕೆ ಉಡುಗೊರೆಯಾಗಿ ಬಂದಿದ್ದ ಹೋಂ ಥಿಯೇಟರ್ ಸಿಸ್ಟಂ ಸ್ಫೋಟಗೊಂಡು ನವ ವಿವಾಹಿತ ಹಾಗೂ ಅವರ ಸಹೋದರ ಮೃತಪಟ್ಟಿರುವ ಘಟನೆಗೆ ಸಂಬಂಧಿಸಿದಂತೆ ಮಹತ್ವದ ಮಾಹಿತಿ ಲಭ್ಯವಾಗಿದೆ.

ವಿವಾಹಕ್ಕೆ ಉಡುಗೊರೆಯಾಗಿ ಬಂದಿದ್ದ ಹೋಂ ಥಿಯೇಟರ್ ಸ್ಫೋಟ ಇಬ್ಬರು ಸಾವು ಪ್ರಕರಣಕ್ಕೆ ಟ್ವಿಸ್ಟ್​, ಅದರಲ್ಲಿ ಬಾಂಬ್ ಇಟ್ಟಿದ್ದು ಯಾರು?
ಆರೋಪಿ ಸರ್ಜು
Image Credit source: NDTV

Updated on: Apr 05, 2023 | 7:56 AM

ವಿವಾಹಕ್ಕೆ ಉಡುಗೊರೆಯಾಗಿ ಬಂದಿದ್ದ ಹೋಂ ಥಿಯೇಟರ್ ಸಿಸ್ಟಂ ಸ್ಫೋಟಗೊಂಡು ನವ ವಿವಾಹಿತ ಹಾಗೂ ಅವರ ಸಹೋದರ ಮೃತಪಟ್ಟಿರುವ ಘಟನೆಗೆ ಸಂಬಂಧಿಸಿದಂತೆ ಮಹತ್ವದ ಮಾಹಿತಿ ಲಭ್ಯವಾಗಿದೆ. ಹೋಂ ಥಿಯೇಟರ್ ಸಿಸ್ಟಂನಲ್ಲಿ ಬಾಂಬ್ ಇಟ್ಟಿದ್ದಾಗಿ ನವ ವಿವಾಹಿತೆಯ ಮಾಜಿ ಪ್ರಿಯಕರ ಒಪ್ಪಿಕೊಂಡಿದ್ದಾರೆ. ಮ್ಯೂಸಿಕ್ ಸಿಸ್ಟಂ ಪ್ಲೇ ಮಾಡುತ್ತಿದ್ದಂತೆ ಸ್ಫೋಟ ಸಂಭವಿಸಿತ್ತು, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದರು.
ಹೋಂ ಥಿಯೇಟರ್​ನಲ್ಲಿ ಸ್ಫೋಟಕವನ್ನು ಅಳವಡಿಸಲಾಗಿತ್ತು, ಅದನ್ನು ವಧುವಿನ ಮಾಜಿ ಪ್ರಿಯಕರ ನೀಡಿದ್ದ ಉಡುಗೊರೆಯಾಗಿತ್ತು ಎಂದು ಪೊಲೀಸರಿಂದ ತಿಳಿದುಬಂದಿದೆ. ಛತ್ತೀಸ್‌ಗಢದ ಕಬೀರ್ಧಾಮ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ.

ಸ್ಫೋಟದ ಪರಿಣಾಮ ಹೋಮ್ ಥಿಯೇಟರ್ ವ್ಯವಸ್ಥೆ ಇರಿಸಲಾಗಿದ್ದ ಕೊಠಡಿಯ ಗೋಡೆಗಳು ಮತ್ತು ಛಾವಣಿ ಕುಸಿದು ಬಿದ್ದಿದೆ. 22 ವರ್ಷದ ಹೇಮೇಂದ್ರ ಮೆರಾವಿ ಎಂದು ಗುರುತಿಸಲಾದ ವರ ವೈರ್ ಅನ್ನು ಎಲೆಕ್ಟ್ರಿಕ್ ಬ್ಯಾಂಡ್‌ಗೆ ಜೋಡಿಸಿದ ನಂತರ ಹೋಮ್ ಥಿಯೇಟರ್ ಸಿಸ್ಟಂ ಅನ್ನು ಸ್ವಿಚ್ ಆನ್ ಮಾಡಿದಾಗ, ಭಾರಿ ಸ್ಫೋಟ ಸಂಭವಿಸಿದೆ.

ಮತ್ತಷ್ಟು ಓದಿ: ಹೋಂ ಥಿಯೇಟರ್ ಮ್ಯೂಸಿಕ್ ಸಿಸ್ಟಂ ಸ್ಫೋಟ: ನವ ವಿವಾಹಿತ ಸೇರಿ ಇಬ್ಬರು ಸಾವು, ನಾಲ್ವರಿಗೆ ಗಾಯ

ಆರೋಪಿಯನ್ನು ಸರ್ಜು ಎಂದು ಗುರುತಿಸಲಾಗಿದ್ದು ಪೊಲೀಸರು ಆತನನ್ನು ಬಂಧಿಸಿದ್ದಾರೆ., ಪೊಲೀಸರು ಮದುವೆಯ ಸಮಯದಲ್ಲಿ ಪಡೆದ ಉಡುಗೊರೆಗಳ ಪಟ್ಟಿಯನ್ನು ತನಿಖೆ ಮಾಡಲು ಪ್ರಾರಂಭಿಸಿದಾಗ, ಮ್ಯೂಸಿಕ್ ಸಿಸ್ಟಮ್ ವಧುವಿನ ಮಾಜಿ ಪ್ರೇಮಿಯ ಉಡುಗೊರೆ ಎಂಬುದು ತಿಳಿದುಬಂದಿದೆ. ಪ್ರೇಯಸಿ ಬೇರೊಬ್ಬನನ್ನು ಮದುವೆಯಾಗುತ್ತಿದ್ದಾಳೆ ಎನ್ನುವ ಕೋಪದಿಂದ ಆತ ಈ ಕೆಲಸ ಮಾಡಿದ್ದ ಎಂಬ ಮಾಹಿತಿ ಲಭ್ಯವಾಗಿದೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Loading...
Unable to load recommendations.
Follow Us