ಗೆಳತಿಯಿಂದ ಅತ್ಯಾಚಾರ ಆರೋಪ, ಮನನೊಂದು ಫೇಸ್​ಬುಕ್​ ಲೈವ್​ನಲ್ಲಿಯೇ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಪ್ರಿಯಕರ

ಗೆಳತಿ ಅತ್ಯಾಚಾರ ಆರೋಪ ಮಾಡಿದಳೆಂದು ಪ್ರಿಯಕರನೊಬ್ಬ ಫೇಸ್​ಬುಕ್​ ಲೈವ್​ನಲ್ಲಿಯೇ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಹಾರಾಷ್ಟ್ರದ ನಾಗ್ಪುರದಲ್ಲಿ ನಡೆದಿದೆ. ಮನೀಶ್ ಎನ್ನುವ 38 ವರ್ಷದ ವ್ಯಕ್ತಿಗೆ ಈಗಾಗಲೇ ಮದುವೆಯಾಗಿತ್ತು, ಆದರೂ 19 ವರ್ಷದ ಕಾಜಲ್ ಎಂಬುವವಳನ್ನು ಪ್ರೀತಿ ಮಾಡುತ್ತಿದ್ದ. ಸ್ವಲ್ಪ ದಿನ ಕಳೆದ ನಂತರ ಆಕೆ ಆತನ ಮೇಲೆ ಅತ್ಯಾಚಾರ ಆರೋಪ ಮಾಡಿ ತನ್ನ ಕುಟುಂಬದವರ ಜತೆ ಸೇರಿ ಬ್ಲ್ಯಾಕ್ ಮೇಲೆ ಮಾಡಲು ಆರಂಭಿಸಿದ್ದಳು.

ಗೆಳತಿಯಿಂದ ಅತ್ಯಾಚಾರ ಆರೋಪ, ಮನನೊಂದು ಫೇಸ್​ಬುಕ್​ ಲೈವ್​ನಲ್ಲಿಯೇ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಪ್ರಿಯಕರ
ಮೃತ ಮನಿಷ್Image Credit source: NDTV
Follow us
ನಯನಾ ರಾಜೀವ್
|

Updated on: Sep 14, 2023 | 10:00 AM

ನಾಗ್ಪುರ, ಸೆಪ್ಟೆಂಬರ್ 14:  ಗೆಳತಿ ಅತ್ಯಾಚಾರ ಆರೋಪ ಮಾಡಿದಳೆಂದು ಪ್ರಿಯಕರನೊಬ್ಬ ಫೇಸ್​ಬುಕ್​ ಲೈವ್​ನಲ್ಲಿಯೇ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಹಾರಾಷ್ಟ್ರದ ನಾಗ್ಪುರದಲ್ಲಿ ನಡೆದಿದೆ. ಮನೀಶ್ ಎನ್ನುವ 38 ವರ್ಷದ ವ್ಯಕ್ತಿಗೆ ಈಗಾಗಲೇ ಮದುವೆಯಾಗಿತ್ತು, ಆದರೂ 19 ವರ್ಷದ ಕಾಜಲ್ ಎಂಬುವವಳನ್ನು ಪ್ರೀತಿ ಮಾಡುತ್ತಿದ್ದ. ಸ್ವಲ್ಪ ದಿನ ಕಳೆದ ನಂತರ ಆಕೆ ಆತನ ಮೇಲೆ ಅತ್ಯಾಚಾರ ಆರೋಪ ಮಾಡಿ ತನ್ನ ಕುಟುಂಬದವರ ಜತೆ ಸೇರಿ ಬ್ಲ್ಯಾಕ್ ಮೇಲೆ ಮಾಡಲು ಆರಂಭಿಸಿದ್ದಳು.

ಮನೀಶ್ ಮನನೊಂದು ಸೆಪ್ಟೆಂಬರ್ 10 ರಂದು ಫೇಸ್​ಬುಕ್ ಲೈವ್ ನಲ್ಲಿ ತನ್ನ ಗೆಳತಿ ಹಾಗೂ ಆಕೆಯ ಕುಟುಂಬದವರು ತನ್ನ ಮೇಲೆ ಅತ್ಯಾಚಾರ ಆರೋಪ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾನೆ, ಮತ್ತವರ ಕುಟುಂಬದವರು 5 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದರು, ಹಣವನ್ನು ನೀಡಲು ವಿಫಲವಾದರೆ ಆತನ ವಿರುದ್ಧ ದೂರು ದಾಖಲಿಸುವುದಾಗಿ ಬೆದರಿಕೆ ಹಾಕಿದ್ದರು ಎಂದು ಆತ ಹೇಳಿದ್ದಾನೆ.

ಸೆಪ್ಟೆಂಬರ್ 6 ರಂದು, ಯುವತಿ ತನ್ನ ಮನೆಯಿಂದ ನಾಪತ್ತೆಯಾಗಿದ್ದಾಳೆ ಮತ್ತು ಆಕೆಯ ಕುಟುಂಬ ಸದಸ್ಯರು ಮನೀಷ್ ಜೊತೆ ಓಡಿಹೋದರು ಎಂದು ಆರೋಪಿಸಿದ್ದಾರೆ.

ಮತ್ತಷ್ಟು ಓದಿ: ಕುಡಿದ ಮತ್ತಿನಲ್ಲಿ ಪತ್ನಿಯ ನಂಬರ್ ಕೇಳಿದ ಸ್ನೇಹಿತನ ಮೇಲೆ ಹಲ್ಲೆ,‌ ರೌಡಿಶೀಟರ್ ಮನೆಗೆ ದಾಳಿ

ಮದುವೆಯಾಗಿ ಮೂರು ಮಕ್ಕಳ ತಂದೆಯಾಗಿರುವ 38 ವರ್ಷದ ವ್ಯಕ್ತಿ ಕಿರುಕುಳ ತಾಳಲಾರದೆ ನಾಗಪುರದಲ್ಲಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಆ ವ್ಯಕ್ತಿ ತಾನು ಯುವತಿ ಜತೆಗೆ ದೈಹಿಕ ಸಂಪರ್ಕ ಹೊಂದಿಲ್ಲ ಎಂದು ಲೈವ್​ನಲ್ಲಿ ಹೇಳಿದ್ದಾನೆ. ಫೇಸ್‌ಬುಕ್ ಲೈವ್ ವಿಡಿಯೋ ಹೊರಬಿದ್ದ ನಂತರ ಪೊಲೀಸರು ಶೋಧ ಕಾರ್ಯಾಚರಣೆ ಆರಂಭಿಸಿದ್ದಾರೆ.ವ್ಯಕ್ತಿಯ ಶವವನ್ನು ನದಿಯಿಂದ ವಶಪಡಿಸಿಕೊಳ್ಳಲಾಗಿದ್ದು, ನಾಗಪುರದ ಕಲಮನ ಪೊಲೀಸರು ಪ್ರಕರಣದಲ್ಲಿ ನಾಲ್ವರನ್ನು ಬಂಧಿಸಿದ್ದಾರೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ