ಬೆಂಗಳೂರು: ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಹತ್ಯೆ; ಹೆಂಡತಿಯೇ ಸುಪಾರಿ ನೀಡಿದ ಶಂಕೆ

ಎರಡು ತಿಂಗಳಿನಿಂದ ಇಬ್ಬರ ನಡುವೆ ಪ್ರತಿನಿತ್ಯ ಗಲಾಟೆಗಳಾಗುತ್ತಿದ್ದವು. ಎಷ್ಟೋ ಬಾರಿ ಗಲಾಟೆ ತಾರಕಕ್ಕೆ ಹೋಗುತ್ತಿದ್ದ ಕಾರಣ ಎರಡು, ಮೂರು ಸಲ ಇಬ್ಬರಿಗೂ ಪೊಲೀಸರೇ ಎಚ್ಚರಿಕೆ ನೀಡಿದ್ದರು. ಆದರೂ, ಮನೆ ಬಳಿ ಗಲಾಟೆ ಆಗುತ್ತಿತ್ತು. ಇದರಿಂದಾಗಿ ಬೇಸತ್ತ ಎರಡನೇ ಹೆಂಡತಿ ಸುಪಾರಿ ನೀಡಿ ಕೊಲೆ ಮಾಡಿಸಿರಬಹುದು ಎಂದು ಅನುಮಾನಿಸಲಾಗುತ್ತಿದೆ.

ಬೆಂಗಳೂರು: ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಹತ್ಯೆ; ಹೆಂಡತಿಯೇ ಸುಪಾರಿ ನೀಡಿದ ಶಂಕೆ
ಹತ್ಯೆಯಾದ ವ್ಯಕ್ತಿ
Follow us
TV9 Web
| Updated By: Skanda

Updated on: Jul 03, 2021 | 7:25 AM

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ವ್ಯಕ್ತಿಯೊಬ್ಬರ ಬರ್ಬರ ಹತ್ಯೆ ಆಗಿದೆ. ಕಾವಲ್​ಭೈರಸಂದ್ರದ ಅಂಬೇಡ್ಕರ್ ಕಾಲೇಜು ಬಳಿ ದುಷ್ಕೃತ್ಯ ನಡೆದಿದ್ದು, ಮಾರಕಾಸ್ತ್ರಗಳಿಂದ ಕೊಚ್ಚಿ ಕೃಷ್ಣಮೂರ್ತಿ(30) ಎನ್ನುವವರನ್ನು ನಿರ್ದಯವಾಗಿ ಕೊಲೆ ಮಾಡಲಾಗಿದೆ. ಟೈಲ್ಸ್​ ಕೆಲಸ ಮಾಡುತ್ತಿದ್ದ ಕೃಷ್ಣಮೂರ್ತಿ ಮೊದಲ ಹೆಂಡತಿಯನ್ನು ತೊರೆದು ಮತ್ತೊಂದು ಮದುವೆಯಾಗಿದ್ದರು. ಆದರೆ, ಮದ್ಯದ ಅಮಲಲ್ಲಿ ಎರಡನೇ ಹೆಂಡತಿಯ ಜತೆಗೂ ಕಿರಿಕಿರಿ ಮಾಡಿಕೊಂಡಿದ್ದರು. ನಿತ್ಯವೂ ಮದ್ಯ ಸೇವಿಸಿ ಮನೆಯ ಬಳಿ ಬಂದು ಗಲಾಟೆ ಮಾಡುತ್ತಿದ್ದ ಕಾರಣ ಅದರಿಂದ ಬೇಸತ್ತ ಎರಡನೇ ಹೆಂಡತಿಯೇ ಕೊಲೆ ಮಾಡಿಸಿದರಾ ಎಂಬ ಶಂಕೆ ಇದೀಗ ವ್ಯಕ್ತವಾಗುತ್ತಿದೆ.

ನಿತ್ಯವೂ ಮದ್ಯ ಸೇವಿಸಿ ಬಂದು ಗಲಾಟೆ ಮಾಡುತ್ತಿದ್ದ ಕೃಷ್ಣಮೂರ್ತಿ, ಎರಡನೇ ಹೆಂಡತಿ ಜತೆಗೆ ಅಷ್ಟೇನು ಉತ್ತಮ ಸಂಬಂಧ ಹೊಂದಿರಲಿಲ್ಲ. ಎರಡು ತಿಂಗಳಿನಿಂದ ಇಬ್ಬರ ನಡುವೆ ಪ್ರತಿನಿತ್ಯ ಗಲಾಟೆಗಳಾಗುತ್ತಿದ್ದವು. ಎಷ್ಟೋ ಬಾರಿ ಗಲಾಟೆ ತಾರಕಕ್ಕೆ ಹೋಗುತ್ತಿದ್ದ ಕಾರಣ ಎರಡು, ಮೂರು ಸಲ ಇಬ್ಬರಿಗೂ ಪೊಲೀಸರೇ ಎಚ್ಚರಿಕೆ ನೀಡಿದ್ದರು. ಆದರೂ, ಮನೆ ಬಳಿ ಗಲಾಟೆ ಆಗುತ್ತಿತ್ತು. ಇದರಿಂದಾಗಿ ಬೇಸತ್ತ ಎರಡನೇ ಹೆಂಡತಿ ಸುಪಾರಿ ನೀಡಿ ಕೊಲೆ ಮಾಡಿಸಿರಬಹುದು ಎಂದು ಅನುಮಾನಿಸಲಾಗುತ್ತಿದೆ.

ಕೃಷ್ಣಮೂರ್ತಿಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆಗೈಯಲಾಗಿದ್ದು, ಕಾವಲ್​ಭೈರಸಂದ್ರದ ಅಂಬೇಡ್ಕರ್ ಕಾಲೇಜು ಮುಂಭಾಗದಲ್ಲಿಯೇ ದುರ್ಘಟನೆ ಸಂಭವಿಸಿದೆ. 2-3 ಜನ ದುಷ್ಕರ್ಮಿಗಳಿಂದ ಕೃತ್ಯ ನಡೆದಿದೆ ಎನ್ನಲಾಗಿದ್ದು, ಡಿ.ಜೆ.ಹಳ್ಳಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಎರಡನೇ ಹೆಂಡತಿ ಮೇಲೆಯೇ ಅನುಮಾನ ದಟ್ಟವಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

ಬರೋಬ್ಬರಿ 300 ಕೋಟಿ ರೂಪಾಯಿ ಮೌಲ್ಯದ ಹೆರಾಯಿನ್ ವಶಕ್ಕೆ ಮುಂಬೈ: ಮಹಾರಾಷ್ಟ್ರದ ನವಿ ಮುಂಬೈನ ನೆಹರು ಪೋರ್ಟ್ ಟ್ರಸ್ಟ್​ನಲ್ಲಿ ಬರೋಬ್ಬರಿ 300 ಕೋಟಿ ರೂಪಾಯಿ ಮೌಲ್ಯದ ಮಾದಕ ದ್ರವ್ಯ ಪತ್ತೆಯಾಗಿದೆ. ಜವಾಹರ್‌ಲಾಲ್ ನೆಹರು ಪೋರ್ಟ್ ಟ್ರಸ್ಟ್‌ನಲ್ಲಿ ಮಾದಕ ವಸ್ತು ಸಿಕ್ಕಿದ್ದು, ಒಟ್ಟು 290 ಕೆಜಿ ತೂಕದ ಹೆರಾಯಿನ್​ ಲಭ್ಯವಾಗಿದೆ. ಅದರ ಒಟ್ಟು ಮೌಲ್ಯ ಸುಮಾರು 300 ಕೋಟಿ ರೂಪಾಯಿ ಎನ್ನಲಾಗಿದ್ದು, ಇಬ್ಬರನ್ನು ವಶಕ್ಕೆ ಪಡೆದ ಡಿಆರ್‌ಐ ಅಧಿಕಾರಿಗಳು ಹೆಚ್ಚಿನ ವಿಚಾರಣೆ ಕೈಗೆತ್ತಿಕೊಂಡಿದ್ದಾರೆ.

ಇದನ್ನೂ ಓದಿ: Rekha Kadiresh: ರೇಖಾ ಕದಿರೇಶ್ ಕೊಲೆ ಪ್ರಕರಣದ ಆಘಾತಕಾರಿ ಮಾಹಿತಿ, ಹಂತಕರು ಒಟ್ಟು ಮೂರು ಹತ್ಯೆಗೆ ಸ್ಕೆಚ್​ ಹಾಕಿದ್ದರಂತೆ! 

Rekha Kadiresh Murder ರೇಖಾ ನಾದಿನಿ ಮಾಲಾಳ ಹಿಸ್ಟರಿ ರೀ ಓಪನ್.. ಜೋಪಡಿ ರಾಜೇಂದ್ರ ಕೊಲೆಯಲ್ಲೂ ಈಕೆ ಆರೋಪಿ

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್