ಅಸಭ್ಯ ವರ್ತನೆ ಬಗ್ಗೆ ಪೋಷಕರಿಗೆ ತಿಳಿಸಿದ್ದಕ್ಕೆ ಬಾಲಕಿಗೆ ಚಾಕು ಇರಿದು ಕೊಲೆ; ಆತ್ಮಹತ್ಯೆ ಮಾಡಿಕೊಂಡ ಆರೋಪಿ

ಅಸಭ್ಯ ವರ್ತನೆ ಬಗ್ಗೆ ಪೋಷಕರಿಗೆ ತಿಳಿಸಿದ್ದಕ್ಕೆ ಬಾಲಕಿಗೆ ಚಾಕುವಿನಿಂದ ಇರಿದು ವ್ಯಕ್ತಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬೆಂಗಳೂರು ಉತ್ತರ ತಾಲೂಕು ಜಿಂದಾಲ್ ಕ್ವಾರ್ಟರ್ಸ್‌ನಲ್ಲಿ ನಡೆದಿದೆ.

ಅಸಭ್ಯ ವರ್ತನೆ ಬಗ್ಗೆ ಪೋಷಕರಿಗೆ ತಿಳಿಸಿದ್ದಕ್ಕೆ ಬಾಲಕಿಗೆ ಚಾಕು ಇರಿದು ಕೊಲೆ; ಆತ್ಮಹತ್ಯೆ ಮಾಡಿಕೊಂಡ ಆರೋಪಿ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: ವಿವೇಕ ಬಿರಾದಾರ

Updated on:Aug 21, 2022 | 8:50 PM

ನೆಲಮಂಗಲ: ಅಸಭ್ಯ ವರ್ತನೆ ಬಗ್ಗೆ ಪೋಷಕರಿಗೆ (Parents) ತಿಳಿಸಿದ್ದಕ್ಕೆ ಬಾಲಕಿಗೆ (Girl) ಚಾಕುವಿನಿಂದ ಇರಿದು ವ್ಯಕ್ತಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬೆಂಗಳೂರು (Bengaluru) ಉತ್ತರ ತಾಲೂಕು ಜಿಂದಾಲ್ ಕ್ವಾರ್ಟರ್ಸ್‌ನಲ್ಲಿ ನಡೆದಿದೆ. ಉತ್ತರಾಖಂಡ್‌ (Uttarakanda) ಮೂಲದ 11 ವರ್ಷದ ಖುಷಿ ಕೊಲೆಯಾದ ಬಾಲಕಿ.ಹರಿಯಾಣ ಮೂಲದ ನಂದಕಿಶೋರ್‌ (50) ಕೊಲೆ ಮಾಡಿರುವ ಆರೋಪಿ. ಬಾಲಕಿ ತಂದೆ ಹಾಗೂ ಆರೋಪಿ ನಂದಕಿಶೋರ್‌ ಜಿಂದಾಲ್ ಕಂಪನಿ ನೌಕರಿ ಮಾಡುತ್ತಿದ್ದಾರೆ.

ನಂದಕಿಶೋರ್‌ ಬಾಲಕಿ ಖುಷಿ ಜೊತೆ ಅಸಭ್ಯವಾಗಿ ವರ್ತಿಸಿದ್ದನು. ಈ ಬಗ್ಗೆ ಬಾಲಕಿ ತಮ್ಮ ಪೋಷಕರಿಗೆ ತಿಳಿಸಿದ್ದಳು. ಬಾಲಕಿ ಆರೋಪ ಹಿನ್ನೆಲೆ ಜಿಂದಾಲ್ ಕಂಪನಿ ನಂದಕಿಶೋರ್​​ಗೆ ಕ್ವಾರ್ಟರ್ಸ್‌ ಖಾಲಿ ಮಾಡುವಂತೆ ನೋಟಿಸ್ ನೀಡಿತ್ತು.

ಈ ಸಂಬಂಧ ಬಾಲಕಿಯನ್ನು ಕೊಂದು, ಬಳಿಕ ತಾನೂ ಚಾಕುವಿನಿಂದ ಇರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಆರೋಪಿ  ಚಿಕಿತ್ಸೆ ಚಿಕಿತ್ಸೆ ಫಲಕಾರಿಯಾಗದೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ.  ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹನಿಟ್ರ್ಯಾಪ್​ ಸುಳಿಯಲ್ಲಿ ಸಿಲುಕಿದ ಆರ್​ಎಸ್​ಎಸ್, ಬಿಜೆಪಿ ಮುಖಂಡ; ಚಿನ್ನದ ವ್ಯಾಪಾರಿಯಿಂದ 50 ಲಕ್ಷ ಹಣವನ್ನು ಸುಲಿಗೆ ಮಾಡಿದ ಆರೋಪಿಗಳು

ಮಂಡ್ಯ: ಆರ್​ಎಸ್​ಎಸ್ ಬಿಜೆಪಿ  ಮುಖಂಡ ಹನಿಟ್ರ್ಯಾಪ್ ​ ಸುಳಿಯಲ್ಲಿ ಸಿಲುಕಿ ಹಾಕಿಕೊಂಡಿದ್ದು, 50 ಲಕ್ಷ ಹಣವನ್ನು ಸುಲಿಗೆ ಮಾಡಲಾಗಿದೆ. ಈ ಸಂಬಂಧ ಮಂಡ್ಯದ  ಪಶ್ಚಿಮ ಪೊಲೀಸ್ ಠಾಣೆಗೆ ಪ್ರತಿಷ್ಠಿತ ಚಿನ್ನದ ವ್ಯಾಪಾರಿ ಜಗನ್ನಾಥ ಶೆಟ್ಟಿ ದೂರು ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆ ಬಿಜೆಪಿ ಮುಖಂಡ, ಧಾರ್ಮಿಕ ಪರಿಷತ್ ಸದಸ್ಯ ಜಗನ್ನಾಥ ಶೆಟ್ಟಿ, ಮಂಡ್ಯದ ಶ್ರೀನಿಧಿ ಗೋಲ್ಡ್​ ಮಾಲೀಕರಾಗಿದ್ದಾರೆ.

ಜಗನ್ನಾಥ ಶೆಟ್ಟಿ ಮಂಗಳೂರಿಗೆ ತೆರಳಲು ಮಂಡ್ಯದಲ್ಲಿ ಬಸ್​ಗಾಗಿ ಕಾಯುತ್ತಿದ್ದರು. ಈ ವೇಳೆ ನಾಲ್ವರು ಮೈಸೂರಿಗೆ ಡ್ರಾಪ್​ ಕೊಡುವುದಾಗಿ ಕಾರಿನಲ್ಲಿ ಕರೆದೊಯ್ದಿದ್ದರು. ನಂತರ ಚಿನ್ನದ ಪರೀಕ್ಷೆಗೆಂದು ಅಪಹರಿಸಿದ್ದಾರೆ. ಜಗನ್ನಾಥ ಶೆಟ್ಟಿ ಅವರನ್ನು ಅಪಹರಿಸಿ ಲಾಡ್ಜ್​ ರೂಮ್​ಗೆ ಕರೆದೊಯ್ಯುತ್ತಿದ್ದಾರೆ. ರೂಮ್​ನಲ್ಲಿ ಯುವತಿ ಜೊತೆ ವಿಡಿಯೋ ಚಿತ್ರೀಕರಿಸಿಕೊಂಡು 4 ಕೋಟಿಗೆ ಬೇಡಿಕೆ ಇಟ್ಟಿದ್ದಾರೆ.

ಅಂತಿಮವಾಗಿ ಜಗನ್ನಾಥ ಶೆಟ್ಟಿ 50 ಲಕ್ಷ ರೂಪಾಯಿ ನೀಡಿ ತೆರಳಿದ್ದಾರೆ. ಇಷ್ಟಕ್ಕೆ ಸುಮ್ಮನಾದ ಗ್ಯಾಂಗ್ ಮತ್ತೆ ಹಣಕ್ಕೆ ಬೇಡಿಕೆಯಿಟ್ಟಿದ್ದಾರೆ. ಇದರಿಂದ ಜಗನ್ನಾಥ ಶೆಟ್ಟಿ ದೂರು ನೀಡಿದ್ದಾರೆ. ದೂರಿನ ಆಧಾರದ ಮೇರೆಗೆ ಸಮಾಜ ಸೇವೆ, ಮಾನವ ಹಕ್ಕು ಹೋರಾಟದಲ್ಲಿ ಗುರುತಿಸಿಕೊಂಡಿದ್ದ ಸಲ್ಮಾಬಾನು ಎಂಬುವರನ್ನು ಪಶ್ಚಿಮ ಠಾಣೆ ಪೊಲೀಸರು ಬಂಧಸಿದ್ದಾರೆ.

ಖೋಟಾ ನೋಟು ಚಲಾವಣೆ ಮಾಡುತ್ತಿದ್ದ ಐವರು ಆರೋಪಿಗಳ ಬಂಧನ

ವಿಜಯನಗರ: ಖೋಟಾ ನೋಟು ಚಲಾವಣೆ ಮಾಡುತ್ತಿದ್ದ ಐವರು ಆರೋಪಿಗಳನ್ನು ಹೊಸಪೇಟೆ ಟೌನ್​ ಠಾಣೆ ಪೊಲೀಸರು ಬಂಧಿಸಿದ್ದಾರೆ. 500 ರೂಪಾಯಿ ಮುಖಬೆಲೆಯ 312 ಖೋಟಾ ನೋಟುಗಳ ಜಪ್ತಿ ಮಾಡಲಾಗಿದೆ. ಕುಬೇರಪ್ಪ ತಳವಾರ, ರುದ್ರೇಶ ಎಸ್.ರಾಜೇಶ್, ಪ್ರಕಾಶ, ರವಿ ಬಂಧಿತ ಆರೋಪಿಗಳು.  ಆರೋಪಿಗಳು ವೆಂಕಟೇಶ್ವರ ಲಾಡ್ಜ್​ನಲ್ಲಿ ಖೋಟಾನೋಟು ಚಲಾವಣೆಗೆ ಯತ್ನಿಸಿದ್ದರು. ಹೊಸಪೇಟೆ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Published On - 5:33 pm, Sun, 21 August 22

ಹನುಮಂತನಿಗೆ ಕಳಪೆ ಕೊಟ್ಟ ಮನೆಮಂದಿ, ಜೈಲು ಸೇರಿದ ಹಾಡು ಹಕ್ಕಿ
ಹನುಮಂತನಿಗೆ ಕಳಪೆ ಕೊಟ್ಟ ಮನೆಮಂದಿ, ಜೈಲು ಸೇರಿದ ಹಾಡು ಹಕ್ಕಿ
Video: ಮನೆ ಎದುರು ಮೈಗೆ ಚಾಟಿಯಿಂದ ಹೊಡೆದುಕೊಂಡ ಅಣ್ಣಾಮಲೈ
Video: ಮನೆ ಎದುರು ಮೈಗೆ ಚಾಟಿಯಿಂದ ಹೊಡೆದುಕೊಂಡ ಅಣ್ಣಾಮಲೈ
ಮದುವೆ ಮಂಟಪದಲ್ಲಿ ಕೋಪಗೊಂಡ ಪೂಜಾರಿ, ಮಾಡಿದ್ದೇನು ನೋಡಿ
ಮದುವೆ ಮಂಟಪದಲ್ಲಿ ಕೋಪಗೊಂಡ ಪೂಜಾರಿ, ಮಾಡಿದ್ದೇನು ನೋಡಿ
ಸಂಸತ್ತನ್ನು ನಗೆಗಡಲಲ್ಲಿ ತೇಲಿಸಿದ್ದ ಮನಮೋಹನ್​ ಸಿಂಗ್ ಕಾವ್ಯ! ವಿಡಿಯೋ ನೋಡಿ
ಸಂಸತ್ತನ್ನು ನಗೆಗಡಲಲ್ಲಿ ತೇಲಿಸಿದ್ದ ಮನಮೋಹನ್​ ಸಿಂಗ್ ಕಾವ್ಯ! ವಿಡಿಯೋ ನೋಡಿ
Daily Devotional: ವಾಕಿಂಗ್​ ಮಾಡುವುದರಿಂದ ಏನೆಲ್ಲಾ ಪ್ರಯೋಜನ
Daily Devotional: ವಾಕಿಂಗ್​ ಮಾಡುವುದರಿಂದ ಏನೆಲ್ಲಾ ಪ್ರಯೋಜನ
Daily Horoscope: ಈ ರಾಶಿಯವರ ಉದ್ದೇಶಗಳು ಇಂದು ಈಡೇರಲಿವೆ
Daily Horoscope: ಈ ರಾಶಿಯವರ ಉದ್ದೇಶಗಳು ಇಂದು ಈಡೇರಲಿವೆ
ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್