ರಾಜಸ್ಥಾನ: ಮಗಳ ಕತ್ತು ಸೀಳಿ ಕೊಲೆ ಮಾಡಿ ದೇಹಕ್ಕೆ ಬೆಂಕಿ ಇಟ್ಟ ತಂದೆ

ಮಗಳ ಕತ್ತು ಸೀಳಿ ಕೊಲೆ ಮಾಡಿ, ತಂದೆಯೊಬ್ಬ ಆಕೆಯ ದೇಹಕ್ಕೆ ಬೆಂಕಿ ಇಟ್ಟಿರುವ ಹೃದಯ ವಿದ್ರಾವಕ ಘಟನೆ ರಾಜಸ್ಥಾನದಲ್ಲಿ ನಡೆದಿದೆ. ರಾಜಸ್ಥಾನದ ಪಾಲಿ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ತಲೆಮರೆಸಿಕೊಂಡಿರುವ ಆರೋಪಿಗಳನ್ನು ಬಂಧಿಸುವ ಪ್ರಯತ್ನ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ರಾಜಸ್ಥಾನ: ಮಗಳ ಕತ್ತು ಸೀಳಿ ಕೊಲೆ ಮಾಡಿ ದೇಹಕ್ಕೆ ಬೆಂಕಿ ಇಟ್ಟ ತಂದೆ
ಅಪರಾಧ
Follow us
ನಯನಾ ರಾಜೀವ್
|

Updated on: Nov 29, 2023 | 8:35 AM

ಮಗಳ ಕತ್ತು ಸೀಳಿ ಕೊಲೆ ಮಾಡಿ, ತಂದೆಯೊಬ್ಬ ಆಕೆಯ ದೇಹಕ್ಕೆ ಬೆಂಕಿ ಇಟ್ಟಿರುವ ಹೃದಯ ವಿದ್ರಾವಕ ಘಟನೆ ರಾಜಸ್ಥಾನದಲ್ಲಿ ನಡೆದಿದೆ. ರಾಜಸ್ಥಾನದ ಪಾಲಿ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ತಲೆಮರೆಸಿಕೊಂಡಿರುವ ಆರೋಪಿಗಳನ್ನು ಬಂಧಿಸುವ ಪ್ರಯತ್ನ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿ ಶಿವಲಾಲ್ ಮೇಘವಾಲ್ 12 ವರ್ಷಗಳಿಂದ ಕುಟುಂಬದಿಂದ ಪ್ರತ್ಯೇಕವಾಗಿ ಪಾಲಿನಲ್ಲಿ ವಾಸಿಸುತ್ತಿದ್ದ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಅವರ ಪತ್ನಿ ಮತ್ತು ಮಕ್ಕಳು ಗುಜರಾತ್‌ನಲ್ಲಿ ನೆಲೆಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ತನ್ನ ಕುಟುಂಬದಲ್ಲಿ ಆಗುತ್ತಿರುವ ಭಿನ್ನಾಭಿಪ್ರಾಯಕ್ಕೆಲ್ಲಾ ತನ್ನ ಹಿರಿಯ ಮಗಳು ಕಾರಣ ಎಂದು ಆತ ನಂಬಿದ್ದ ಎಂದು ಸಂಬಂಧಿಕರು ತಿಳಿಸಿದ್ದಾರೆ. ನಿರ್ಮಾ ಸೋಮವಾರ ಪಾಲಿನ ಇಸಲಿ ಗ್ರಾಮಕ್ಕೆ ಮದುವೆ ಸಮಾರಂಭವೊಂದರಲ್ಲಿ ಪಾಲ್ಗೊಳ್ಳಲು ಬಂದಿದ್ದಾಗ ಆಕೆಯ ತಂದೆ ಭೇಟಿಯಾಗಿದ್ದರು. ನಂತರ ಸಂತ್ರಸ್ತೆ ಮತ್ತು ಆಕೆಯ ತಂಗಿಯನ್ನು ಒಂದು ಸ್ಥಳಕ್ಕೆ ಕರೆದುಕೊಂಡು ಹೋಗುವಂತೆ ಕೇಳಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ನಿರ್ಮಾಳೊಂದಿಗೆ ಏಕಾಂತ ಸ್ಥಳಕ್ಕೆ ಹೋದಾಗ ಕಿರಿಯ ಮಗಳಿಗೆ ಅಲ್ಲೇ ಕಾಯುವಂತೆ ಹೇಳಿ, ಮಗಳ ಕತ್ತು ಸೀಳಿ ಕೊಲೆ ಮಾಡಿ ಬಳಿಕ ಪೆಟ್ರೋಲ್ ಹಾಕಿ ಸುಟ್ಟಿದ್ದಾನೆ ಎಂದು ಹೇಳಲಾಗಿದೆ.

ಮತ್ತಷ್ಟು ಓದಿ: ಪ್ರಿಯಕರನೊಂದಿಗೆ ಸೇರಿ ಗಂಡನ ಕೊಲೆ; ಅಪಘಾತವೆಂದು ಬಿಂಬಿಸಲು ಮಾಡಿದ್ದರೂ ಖತರ್ನಾಕ್​ ಪ್ಲ್ಯಾನ್​

ಮೇಘವಾಲ್ ಹಿಂದಿರುಗಿದಾಗ ಆತನ ಕೈಯಲ್ಲಿ ರಕ್ತದ ಕಲೆ ಇರುವುದನ್ನು ಮತ್ತೊಬ್ಬ ಮಗಳು ನೋಡಿದ್ದಾಳೆ. ಬಳಿಕ ಅರ್ಧ ಸುಟ್ಟ ದೇಹವನ್ನು ಕೂಡ ನೋಡಿದ್ದಾಳೆ. ಬಳಿಕ ಪೊಲೀಸರಿಗೆ ಮಾಹಿತಿ ನೀಡಿದ್ದಾಳೆ.

ಆರೋಪಿಯ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 302 (ಕೊಲೆ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಮತ್ತು ಆತನನ್ನು ಬಂಧಿಸುವ ಪ್ರಯತ್ನಗಳು ನಡೆಯುತ್ತಿವೆ ಎಂದು ಅವರು ತಿಳಿಸಿದ್ದಾರೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

‘ನಮ್ಮ ಪ್ರೀತಿಯ ರಾಮು’ ಚಿತ್ರಕ್ಕೆ ದರ್ಶನ್​ಗೆ ಪ್ರಶಸ್ತಿ ಬರಲಿಲ್ಲ ಯಾಕೆ?
‘ನಮ್ಮ ಪ್ರೀತಿಯ ರಾಮು’ ಚಿತ್ರಕ್ಕೆ ದರ್ಶನ್​ಗೆ ಪ್ರಶಸ್ತಿ ಬರಲಿಲ್ಲ ಯಾಕೆ?
ನೀರಿನ ಕೊಡ ಉರಡತಲೇ, ತುಪ್ಪದ ಕೊಡ ಉಕ್ಕತಲೇ ಪರಾಕ್:ಮೈಲಾರಲಿಂಗೇಶ್ವರ ಕಾರ್ಣಿಕ
ನೀರಿನ ಕೊಡ ಉರಡತಲೇ, ತುಪ್ಪದ ಕೊಡ ಉಕ್ಕತಲೇ ಪರಾಕ್:ಮೈಲಾರಲಿಂಗೇಶ್ವರ ಕಾರ್ಣಿಕ
ಗುಂಡಿನ ದಾಳಿ ನಡೆದಾಗ ಚಿಕಿತ್ಸೆಗೆ ಬಾಗಪ್ಪ ₹ 1 ಕೋಟಿ ಖರ್ಚು ಮಾಡಿದ್ದನಂತೆ
ಗುಂಡಿನ ದಾಳಿ ನಡೆದಾಗ ಚಿಕಿತ್ಸೆಗೆ ಬಾಗಪ್ಪ ₹ 1 ಕೋಟಿ ಖರ್ಚು ಮಾಡಿದ್ದನಂತೆ
ವಿಮಾನ ನಿಲ್ದಾಣದಲ್ಲಿ ಮೋದಿಯನ್ನು ತಬ್ಬಿ ಬೀಳ್ಕೊಟ್ಟ ಫ್ರಾನ್ಸ್​ ಅಧ್ಯಕ್ಷ
ವಿಮಾನ ನಿಲ್ದಾಣದಲ್ಲಿ ಮೋದಿಯನ್ನು ತಬ್ಬಿ ಬೀಳ್ಕೊಟ್ಟ ಫ್ರಾನ್ಸ್​ ಅಧ್ಯಕ್ಷ
ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ತನಿಖೆ ಪದದ ವ್ಯಾಖ್ಯಾನ ಬದಲಾದಂತಿದೆ!
ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ತನಿಖೆ ಪದದ ವ್ಯಾಖ್ಯಾನ ಬದಲಾದಂತಿದೆ!
ಉಡುಪಿಗೆ ಬಂದು ದೈವಕ್ಕೆ ಕೈ ಮುಗಿದ ತಮಿಳು ನಟ ವಿಶಾಲ್
ಉಡುಪಿಗೆ ಬಂದು ದೈವಕ್ಕೆ ಕೈ ಮುಗಿದ ತಮಿಳು ನಟ ವಿಶಾಲ್
ಮಾರ್ಸಿಲ್ಲೆಯಲ್ಲಿ ಭಾರತೀಯ ಕಾನ್ಸುಲೇಟ್ ಉದ್ಘಾಟನೆ; ಮೋದಿ, ಮೋದಿ ಘೋಷಣೆ
ಮಾರ್ಸಿಲ್ಲೆಯಲ್ಲಿ ಭಾರತೀಯ ಕಾನ್ಸುಲೇಟ್ ಉದ್ಘಾಟನೆ; ಮೋದಿ, ಮೋದಿ ಘೋಷಣೆ
ಪತ್ನಿಗೆ ಸಿಲ್ಕ್​ ಸೀರೆ ಖರೀದಿಸಿದ ಡಿಕೆ ಶಿವಕುಮಾರ್: ಬೆಲೆ ಎಷ್ಟು ಗೊತ್ತಾ?
ಪತ್ನಿಗೆ ಸಿಲ್ಕ್​ ಸೀರೆ ಖರೀದಿಸಿದ ಡಿಕೆ ಶಿವಕುಮಾರ್: ಬೆಲೆ ಎಷ್ಟು ಗೊತ್ತಾ?
ಫ್ರಾನ್ಸ್​ ಮಹಾಯುದ್ಧದಲ್ಲಿ ಹುತಾತ್ಮರಾದ ಸೈನಿಕರಿಗೆ ಪ್ರಧಾನಿ ಮೋದಿ ನಮನ
ಫ್ರಾನ್ಸ್​ ಮಹಾಯುದ್ಧದಲ್ಲಿ ಹುತಾತ್ಮರಾದ ಸೈನಿಕರಿಗೆ ಪ್ರಧಾನಿ ಮೋದಿ ನಮನ
ದುಷ್ಕೃತ್ಯ ನಿಲ್ಲಿಸಿ ಮುಖ್ಯವಾಹಿನಿಗೆ ಬರುವ ಪ್ರಯತ್ನದಲ್ಲಿದ್ದ ಬಾಗಪ್ಪ
ದುಷ್ಕೃತ್ಯ ನಿಲ್ಲಿಸಿ ಮುಖ್ಯವಾಹಿನಿಗೆ ಬರುವ ಪ್ರಯತ್ನದಲ್ಲಿದ್ದ ಬಾಗಪ್ಪ