ರಾಜಸ್ಥಾನ: ಮಗಳ ಕತ್ತು ಸೀಳಿ ಕೊಲೆ ಮಾಡಿ ದೇಹಕ್ಕೆ ಬೆಂಕಿ ಇಟ್ಟ ತಂದೆ

|

Updated on: Nov 29, 2023 | 8:35 AM

ಮಗಳ ಕತ್ತು ಸೀಳಿ ಕೊಲೆ ಮಾಡಿ, ತಂದೆಯೊಬ್ಬ ಆಕೆಯ ದೇಹಕ್ಕೆ ಬೆಂಕಿ ಇಟ್ಟಿರುವ ಹೃದಯ ವಿದ್ರಾವಕ ಘಟನೆ ರಾಜಸ್ಥಾನದಲ್ಲಿ ನಡೆದಿದೆ. ರಾಜಸ್ಥಾನದ ಪಾಲಿ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ತಲೆಮರೆಸಿಕೊಂಡಿರುವ ಆರೋಪಿಗಳನ್ನು ಬಂಧಿಸುವ ಪ್ರಯತ್ನ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ರಾಜಸ್ಥಾನ: ಮಗಳ ಕತ್ತು ಸೀಳಿ ಕೊಲೆ ಮಾಡಿ ದೇಹಕ್ಕೆ ಬೆಂಕಿ ಇಟ್ಟ ತಂದೆ
ಅಪರಾಧ
Follow us on

ಮಗಳ ಕತ್ತು ಸೀಳಿ ಕೊಲೆ ಮಾಡಿ, ತಂದೆಯೊಬ್ಬ ಆಕೆಯ ದೇಹಕ್ಕೆ ಬೆಂಕಿ ಇಟ್ಟಿರುವ ಹೃದಯ ವಿದ್ರಾವಕ ಘಟನೆ ರಾಜಸ್ಥಾನದಲ್ಲಿ ನಡೆದಿದೆ.
ರಾಜಸ್ಥಾನದ ಪಾಲಿ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ತಲೆಮರೆಸಿಕೊಂಡಿರುವ ಆರೋಪಿಗಳನ್ನು ಬಂಧಿಸುವ ಪ್ರಯತ್ನ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿ ಶಿವಲಾಲ್ ಮೇಘವಾಲ್ 12 ವರ್ಷಗಳಿಂದ ಕುಟುಂಬದಿಂದ ಪ್ರತ್ಯೇಕವಾಗಿ ಪಾಲಿನಲ್ಲಿ ವಾಸಿಸುತ್ತಿದ್ದ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಅವರ ಪತ್ನಿ ಮತ್ತು ಮಕ್ಕಳು ಗುಜರಾತ್‌ನಲ್ಲಿ ನೆಲೆಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ತನ್ನ ಕುಟುಂಬದಲ್ಲಿ ಆಗುತ್ತಿರುವ ಭಿನ್ನಾಭಿಪ್ರಾಯಕ್ಕೆಲ್ಲಾ ತನ್ನ ಹಿರಿಯ ಮಗಳು ಕಾರಣ ಎಂದು ಆತ ನಂಬಿದ್ದ ಎಂದು ಸಂಬಂಧಿಕರು ತಿಳಿಸಿದ್ದಾರೆ.
ನಿರ್ಮಾ ಸೋಮವಾರ ಪಾಲಿನ ಇಸಲಿ ಗ್ರಾಮಕ್ಕೆ ಮದುವೆ ಸಮಾರಂಭವೊಂದರಲ್ಲಿ ಪಾಲ್ಗೊಳ್ಳಲು ಬಂದಿದ್ದಾಗ ಆಕೆಯ ತಂದೆ ಭೇಟಿಯಾಗಿದ್ದರು. ನಂತರ ಸಂತ್ರಸ್ತೆ ಮತ್ತು ಆಕೆಯ ತಂಗಿಯನ್ನು ಒಂದು ಸ್ಥಳಕ್ಕೆ ಕರೆದುಕೊಂಡು ಹೋಗುವಂತೆ ಕೇಳಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ನಿರ್ಮಾಳೊಂದಿಗೆ ಏಕಾಂತ ಸ್ಥಳಕ್ಕೆ ಹೋದಾಗ ಕಿರಿಯ ಮಗಳಿಗೆ ಅಲ್ಲೇ ಕಾಯುವಂತೆ ಹೇಳಿ, ಮಗಳ ಕತ್ತು ಸೀಳಿ ಕೊಲೆ ಮಾಡಿ ಬಳಿಕ ಪೆಟ್ರೋಲ್ ಹಾಕಿ ಸುಟ್ಟಿದ್ದಾನೆ ಎಂದು ಹೇಳಲಾಗಿದೆ.

ಮತ್ತಷ್ಟು ಓದಿ: ಪ್ರಿಯಕರನೊಂದಿಗೆ ಸೇರಿ ಗಂಡನ ಕೊಲೆ; ಅಪಘಾತವೆಂದು ಬಿಂಬಿಸಲು ಮಾಡಿದ್ದರೂ ಖತರ್ನಾಕ್​ ಪ್ಲ್ಯಾನ್​

ಮೇಘವಾಲ್ ಹಿಂದಿರುಗಿದಾಗ ಆತನ ಕೈಯಲ್ಲಿ ರಕ್ತದ ಕಲೆ ಇರುವುದನ್ನು ಮತ್ತೊಬ್ಬ ಮಗಳು ನೋಡಿದ್ದಾಳೆ. ಬಳಿಕ ಅರ್ಧ ಸುಟ್ಟ ದೇಹವನ್ನು ಕೂಡ ನೋಡಿದ್ದಾಳೆ. ಬಳಿಕ ಪೊಲೀಸರಿಗೆ ಮಾಹಿತಿ ನೀಡಿದ್ದಾಳೆ.

ಆರೋಪಿಯ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 302 (ಕೊಲೆ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಮತ್ತು ಆತನನ್ನು ಬಂಧಿಸುವ ಪ್ರಯತ್ನಗಳು ನಡೆಯುತ್ತಿವೆ ಎಂದು ಅವರು ತಿಳಿಸಿದ್ದಾರೆ.

 

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ