ಪತ್ನಿಯನ್ನು ಕೊಂದು ಶವವನ್ನು ಯಮುನಾ ನದಿಯಲ್ಲಿ ಎಸೆದಿದ್ದ ಪತಿ ಅರೆಸ್ಟ್

|

Updated on: Apr 05, 2023 | 7:18 AM

ತನ್ನ ಗ್ರಾಮದ ವ್ಯಕ್ತಿಯೊಂದಿಗೆ ಹೆಂಡತಿ ಅನೈತಿಕ ಸಂಬಂಧವನ್ನು ಹೊಂದಿದ್ದಾಳೆ ಎಂದು ಆರೋಪಿಸಿ, ಪತಿಯೊಬ್ಬ ತನ್ನ ಪತ್ನಿಯನ್ನ ಕತ್ತು ಹಿಸುಕಿ ಕೊಲೆ ಮಾಡಿ, ಬಳಿಕ ಯಮುನಾ ನದಿಗೆ ಎಸೆದಿದ್ದಾನೆ. ಇದೀಗ ಆತನನ್ನ ಪೊಲೀಸರು ಬಂಧಿಸಿದ್ದಾರೆ.

ಪತ್ನಿಯನ್ನು ಕೊಂದು ಶವವನ್ನು ಯಮುನಾ ನದಿಯಲ್ಲಿ ಎಸೆದಿದ್ದ ಪತಿ ಅರೆಸ್ಟ್
ಸಾಂದರ್ಭಿಕ ಚಿತ್ರ
Follow us on

ನೊಯಿಡಾ: ಅನೈತಿಕ ಸಂಬಂಧ ಆರೋಪಿಸಿ ಪತಿಯೊಬ್ಬ ತನ್ನ ಪತ್ನಿಯನ್ನ ಕೊಲೆ ಮಾಡಿ ಇಟ್ಟಿಗೆಗಳಿಂದ ಕಟ್ಟಿ ಯಮುನಾ ನದಿಗೆ ಎಸೆದ ಘಟನೆ ನಡೆದಿದೆ. ಹೌದು ಜೇವರ್ ಪೊಲೀಸ್ ಠಾಣೆ ವ್ಯಾಪ್ತಿಯ ಛತಂಗಾ ಖುರ್ದ್ ಗ್ರಾಮದಲ್ಲಿ ಶ್ರವಣ್ ಮತ್ತು ಉಷಾ ದಂಪತಿಗಳು ವಾಸಿಸುತ್ತಿದ್ದರು. ಸೋಮವಾರ(ಏ.3) ಶ್ರವಣ್ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ತನ್ನ ಹೆಂಡತಿ ಕಾಣೆಯಾದ ಬಗ್ಗೆ ದೂರು ದಾಖಲಿಸಿದ್ದಾರೆ. ಮತ್ತು ಅದೇ ದಿನ ಅಲಿಘರ್‌ನಲ್ಲಿ ಇರುವ ಉಷಾ ಅವರ ಕುಟುಂಬಸ್ಥರು ಕೂಡ ಆಕೆಯ ಪತಿ ಶ್ರವಣ್​ ಉಷಾಳನ್ನ ಕೊಂದಿದ್ದಾರೆ ಎಂದು ಆರೋಪಿಸಿ ಪೊಲೀಸ ಠಾಣೆಯಲ್ಲಿ ದೂರು ದಾಖಲಿಸಿದ್ದರು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪೊಲೀಸ್​ ವಿಚಾರಣೆಯಲ್ಲಿ ತಪ್ಪೊಪ್ಪಿಕೊಂಡ ಪತಿ

ಉಷಾಳ ಕುಟುಂಬಸ್ಥರ ದೂರಿನ ಆಧಾರದ ಮೇಲೆ ಪತಿ ಶ್ರವಣ್​ನನ್ನು ಕಸ್ಟಡಿಗೆ ತೆಗೆದುಕೊಂಡು ವಿಚಾರಿಸಿದಾಗ ಸತ್ಯ ಬಾಯ್ಬಿಟ್ಟಿದ್ದಾನೆ. ಹೌದು ಭಾನುವಾರದ ಮಧ್ಯರಾತ್ರಿ ಪತ್ನಿಯನ್ನು ಕತ್ತು ಹಿಸುಕಿ ಕೊಲೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ. ನಂತರ ಶವವನ್ನು ಗೋಣಿಚೀಲದಲ್ಲಿ ಹಾಕಿ ಅದರೊಳಗೆ ಅನುಮಾನ ಬರದಂತೆ ಕೆಲವು ಇಟ್ಟಿಗೆಗಳನ್ನ ತುಂಬಿ ಯಮುನಾ ನದಿಯಲ್ಲಿ ಎಸೆದಿರುವುದಾಗಿ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಇದನ್ನೂ ಓದಿ:Devanahalli: ಬ್ಯೂಟಿ ಪಾರ್ಲರ್ ಆಂಟಿಗಾಗಿ ಪತ್ನಿಯನ್ನೆ ಕೊಲೆ ಮಾಡಿದನಾ ಗಂಡ? ಮದುವೆಯಾಗಿ ಮಗುವಿದ್ದರೂ ಗಂಡನಿಗೆ ಬೇರೊಂದು ಲವ್ವಿಡವ್ವಿ!

ಕೊಲೆಗೆ ಕಾರಣ

ದಿನಗೂಲಿಗಾರನಾದ ಶ್ರವಣ್ ತನ್ನ ಹೆಂಡತಿಯು ಗ್ರಾಮದ ವ್ಯಕ್ತಿಯೊಂದಿಗೆ ಅನೈತಿಕ ಸಂಬಂಧವನ್ನು ಹೊಂದಿದ್ದಾಳೆ ಎಂದು ಆರೋಪಿಸಿದ್ದು, ಇದೇ ಕಾರಣಕ್ಕೆ ಇಬ್ಬರ ಮಧ್ಯೆ ಆಗಾಗ್ಗೆ ಜಗಳವಾಗುತ್ತಿದ್ದು, ಜಗಳ ವಿಕೋಪಕ್ಕೆ ತಿರುಗಿ ಭಾನುವಾರ ರಾತ್ರಿ ಈ ಕೃತ್ಯ ಎಸೆಗಿದ್ದಾನೆ ಎಂದು ಅಧಿಕಾರಿ ಹೇಳಿದ್ದಾರೆ. ಈ ಕುರಿತು ಮಂಗಳವಾರ ಜೇವರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸೆಕ್ಷನ್ 302 (ಕೊಲೆ) ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಇನ್ನು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ ತಂಡ ಯಮುನಾ ನದಿಯಿಂದ ಮೃತದೇಹವನ್ನು ಹೊರತೆಗೆಯಲು ತೊಡಗಿದ್ದಾರೆ.

ಇನ್ನಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ