ಮನೆಗೇ ಹೋಗಿ ಮಾರಕಾಸ್ತ್ರಗಳಿಂದ ಬರ್ಬರವಾಗಿ ಹತ್ಯೆ ಮಾಡಿ ಎಸ್ಕೇಪ್ ಆದ್ರು
ಬೆಂಗಳೂರು: ಇತ್ತೀಚೆಗಷ್ಟೇ ಜೈಲಿನಿಂದ ಬಿಡುಗಡೆಯಾಗಿದ್ದ ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಹೆಚ್ಎಎಲ್ ಪೊಲೀಸ್ ಠಾಣಾ ವ್ಯಾಪ್ತಿಯ LBS ನಗರದಲ್ಲಿ ನಡೆದಿದೆ. ಅರವಿಂದ್ ಅಲಿಯಾಸ್ ಪಾಗಲ್ ಸೀನ(27) ಕೊಲೆಯಾದ ವ್ಯಕ್ತಿ. LBS ನಗರದ ಬಾಡಿಗೆ ಮನೆಯಲ್ಲಿ ಅರವಿಂದ್ ವಾಸವಿದ್ದ. ಪ್ರಕರಣವೊಂದರಲ್ಲಿ ಜೈಲು ಸೇರಿ ಇತ್ತೀಚೆಗಷ್ಟೇ ಬಿಡುಗಡೆಯಾಗಿದ್ದ. ತಡರಾತ್ರಿ ಬಾಡಿಗೆ ಮನೆಗೇ ಬಂದು ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಹತ್ಯೆಗೈದು ದುಷ್ಕರ್ಮಿಗಳು ಎಸ್ಕೇಪ್ ಆಗಿದ್ದಾರೆ. ಯಾವ ಉದ್ದೇಶದಿಂದ ಕೊಲೆ ಮಾಡಿದ್ದಾರೆ ಎಂದು ಸದ್ಯಕ್ಕೆ ತಿಳಿದುಬಂದಿಲ್ಲ. ಘಟನಾ ಸ್ಥಳಕ್ಕೆ ಹೆಚ್ಎಎಲ್ ಪೊಲೀಸರು […]
ಬೆಂಗಳೂರು: ಇತ್ತೀಚೆಗಷ್ಟೇ ಜೈಲಿನಿಂದ ಬಿಡುಗಡೆಯಾಗಿದ್ದ ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಹೆಚ್ಎಎಲ್ ಪೊಲೀಸ್ ಠಾಣಾ ವ್ಯಾಪ್ತಿಯ LBS ನಗರದಲ್ಲಿ ನಡೆದಿದೆ. ಅರವಿಂದ್ ಅಲಿಯಾಸ್ ಪಾಗಲ್ ಸೀನ(27) ಕೊಲೆಯಾದ ವ್ಯಕ್ತಿ.
LBS ನಗರದ ಬಾಡಿಗೆ ಮನೆಯಲ್ಲಿ ಅರವಿಂದ್ ವಾಸವಿದ್ದ. ಪ್ರಕರಣವೊಂದರಲ್ಲಿ ಜೈಲು ಸೇರಿ ಇತ್ತೀಚೆಗಷ್ಟೇ ಬಿಡುಗಡೆಯಾಗಿದ್ದ. ತಡರಾತ್ರಿ ಬಾಡಿಗೆ ಮನೆಗೇ ಬಂದು ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಹತ್ಯೆಗೈದು ದುಷ್ಕರ್ಮಿಗಳು ಎಸ್ಕೇಪ್ ಆಗಿದ್ದಾರೆ.
ಯಾವ ಉದ್ದೇಶದಿಂದ ಕೊಲೆ ಮಾಡಿದ್ದಾರೆ ಎಂದು ಸದ್ಯಕ್ಕೆ ತಿಳಿದುಬಂದಿಲ್ಲ. ಘಟನಾ ಸ್ಥಳಕ್ಕೆ ಹೆಚ್ಎಎಲ್ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು, ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.
Published On - 12:47 pm, Sun, 7 June 20