ಕ್ಷುಲ್ಲಕ ಕಾರಣಕ್ಕೆ ಮಾವನನ್ನೇ ಕೊಲೆ ಮಾಡಿದ ಅಳಿಯ

ಅಳಿಯ ಕ್ಷುಲ್ಲಕ ಕಾರಣಕ್ಕೆ ಮಾವನನ್ನೇ ಕೊಲೆ ಮಾಡಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಕನಸವಾಡಿ ಬಳಿ ನಡೆದಿದೆ.

ಕ್ಷುಲ್ಲಕ ಕಾರಣಕ್ಕೆ ಮಾವನನ್ನೇ ಕೊಲೆ ಮಾಡಿದ ಅಳಿಯ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: ವಿವೇಕ ಬಿರಾದಾರ

Updated on:Oct 07, 2022 | 3:56 PM

ದೊಡ್ಡಬಳ್ಳಾಪುರ: ಹೆಣ್ಣು ಕೊಟ್ಟ ಮಾವ ಕಣ್ಣ ಕೊಟ್ಟ ದೇವರಿಗೆ ಸಮ ಅನ್ನುತ್ತಾರೆ. ಆದರೆ ಇಲ್ಲೊಬ್ಬ ಅಳಿಯ ಕ್ಷುಲ್ಲಕ ಕಾರಣಕ್ಕೆ ಮಾವನನ್ನೇ ಕೊಲೆ ಮಾಡಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಕನಸವಾಡಿ ಬಳಿ ನಡೆದಿದೆ. ಆರೋಡಿ ಗ್ರಾಮದ ಸುಬ್ಬರಾಯಪ್ಪ (65) ಕೊಲೆಯಾದ ವ್ಯಕ್ತಿ. ಅಳಿಯ ಪ್ರತಾಪ್ ಕೊಲೆ ಮಾಡಿದ ಆರೋಪಿ. ಪ್ರತಾಪ್​ ಕಳೆದ 6 ತಿಂಗಳಿನಿಂದ ಬೇರೊಬ್ಬರ ಮಹಿಳೆ ಜೊತೆ ಸಂಬಂಧವಿಟ್ಟುಕೊಂಡಿದ್ದಾನೆ ಎಂದು ಪತ್ನಿ ಒಂದೂವರೆ ವರ್ಷದ ಮಗು ಜೊತೆ ತವರು ಮನೆಗೆ ಬಂದು ನೆಲಸಿದ್ದಳು.

ಹೀಗಾಗಿ ಪ್ರತಾಪ್​ ಆಗಾಗ ಮಾವನ ಮನೆಗೆ ಬಂದು ಮಗುವನ್ನು ಕೊಡು, ಕರೆದುಕೊಂಡು ಹೋಗುವೆ ಎಂದು ಪೀಡಿಸುತ್ತಿದ್ದನು. ಆದರೆ ಇದಕ್ಕೆ ಪತ್ನಿ ಮತ್ತು ಮಾವ ಸುಬ್ಬರಾಯಪ್ಪ ಒಪ್ಪಿಲ್ಲ. ಹೀಗಾಗಿ ಒಂದು ಭಾರಿ ಪ್ರತಾಪ್​ ಮಾವವನ್ನು ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ. ಇಂದು ಪ್ರತಾಪ್​ ಮಾವ ಸುಬ್ಬರಾಯಪ್ಪನನ್ನು ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಕೊಲೆ ಮಾಡಿ, ಪೋಟೋ ತೆಗೆದು ಪತ್ನಿಗೆ ಕಳಸಿದ್ದಾನೆ ಪಾಪಿ.

ದೊಡ್ಡಬೆಳವಂಗಲ ಪೊಲೀಸ್​​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೊಡ್ಡಬೆಳವಂಗಲ ಪೊಲೀಸರು ಆರೋಪಿ ಪ್ರತಾಪನನ್ನು ಬಂಧಸಿದ್ದಾರೆ.

ಅನಧಿಕೃತವಾಗಿ ನಿದ್ರಾಜನಕ ಸಿರಪ್ ಮಾರುತ್ತಿದ್ದ ಆರೋಪಿ ಬಂಧನ

ಬೆಂಗಳೂರಿನ ಆಕ್ಸ್​ಫರ್ಡ್​ ಮೈದಾನದ ಬಳಿ ಅನಧಿಕೃತವಾಗಿ ನಿದ್ರಾಜನಕ ಸಿರಪ್ ಮಾರುತ್ತಿದ್ದ ಆರೋಪಿಯನ್ನು ಬೆಂಗಳೂರಿನ ಜೆ.ಪಿ.ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಅಮಾನುಲ್ಲಾ ಬಂಧಿತ ಆರೋಪಿ. ಆರೋಪಿ ಅಮಾನುಲ್ಲಾನಿಂದ 356 ESkuf ಸಿರಪ್ ಬಾಟಲಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಕೊಳೆತ ಸ್ಥಿಯಲ್ಲಿ ಯುವಕನ ಶವ ಪತ್ತೆ ಬೆಳಗಾವಿ: ಚಿಕ್ಕೋಡಿ ತಾಲೂಕಿನ ಕರೋಶಿ ಗ್ರಾಮದ ಹೊರವಲಯದ ಅರಣ್ಯ ಪ್ರದೇಶದಲ್ಲಿ ಕೊಳೆತ ಸ್ಥಿಯಲ್ಲಿ ಯುವಕನ ಶವ ಪತ್ತೆಯಾಗಿದೆ. ಕರೋಶಿ ಗ್ರಾಮದ ಸುನೀಲ್ ಸಾಳುಂಕೆ ಎಂಬ ಯುವಕನ ಶವ ಪತ್ತೆಯಾಗಿದೆ. ಸುನೀಲ್ ಕಳೆದ ರವಿವಾರದಂದು ಮುಂಜಾನೆ ಕೆಲಸಕ್ಕೆಂದು ಹೋಗಿದ್ದನು. ಆದರೆ ಇಂದು ಗ್ರಾಮದ ಹೊರ ವಲಯದಲ್ಲಿ ಶವವಾಗಿ ಪತ್ತೆಯಾಗಿದ್ದಾನೆ.

ಸ್ಥಳಕ್ಕೆ ಚಿಕ್ಕೋಡಿ ಪೊಲೀಸ್ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಚಿಕ್ಕೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:56 pm, Fri, 7 October 22

ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್
ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್
ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್
ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್
ಕೇಂದ್ರ ಸರ್ಕಾರ ನಮಗೆ ಎಲೆಕ್ಟ್ರಿಕ್ ಬಸ್​​ಗಳನ್ನು ನೀಡುತ್ತಿಲ್ಲ: ಸಚಿವ
ಕೇಂದ್ರ ಸರ್ಕಾರ ನಮಗೆ ಎಲೆಕ್ಟ್ರಿಕ್ ಬಸ್​​ಗಳನ್ನು ನೀಡುತ್ತಿಲ್ಲ: ಸಚಿವ
ಉದಯಪುರ ಘೋಷಣೆ ಕೆಲ ರಾಜ್ಯಗಳಲ್ಲಿ ಜಾರಿಯಾಗಿಲ್ಲ: ಸತೀಶ್ ಜಾರಕಿಹೊಳಿ
ಉದಯಪುರ ಘೋಷಣೆ ಕೆಲ ರಾಜ್ಯಗಳಲ್ಲಿ ಜಾರಿಯಾಗಿಲ್ಲ: ಸತೀಶ್ ಜಾರಕಿಹೊಳಿ