ಬೆಂಗಳೂರಿನಲ್ಲಿ ಯುವಕನ ಬರ್ಬರ ಕೊಲೆ, ಪರಿಚಯಸ್ಥರೇ ಹತ್ಯೆ ಮಾಡಿರುವ ಶಂಕೆ
ಬೆಂಗಳೂರು: ತಡರಾತ್ರಿ ಬೆಂಗಳೂರಿನಲ್ಲಿ ವ್ಯಕ್ತಿಯೋರ್ವನನ್ನು ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿರುವ ಘಟನೆ ನಡೆದಿದೆ. ಬಸವೇಶ್ವರ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಮಂಜುನಾಥ್ ನಗರದ ಬಾರ್ ಮುಂದೆ ಕೊಲೆ ನಡೆದಿದ್ದು, ಮೃತನು ಅದೇ ಏರಿಯಾದ ಸದಾನಂದ ಎಂದು ತಿಳಿದು ಬಂದಿದೆ. ರಾತ್ರಿ ಬಾರ್ಗೆ ತೆರಳಿ ಕುಡಿದು ಹೊರಬಂದಿದ್ದವನ್ನು ವ್ಯಕ್ತಿಯೋರ್ವ ಕೊಚ್ಚಿ ಕೊಲೆ ಮಾಡಿದ್ದಾನೆ. ಮೇಲ್ನೋಟಕ್ಕೆ ಪರಿಚಯಸ್ಥರಿಂದಲೇ ಕೊಲೆ ನಡೆದಿರುವ ಶಂಕೆ ವ್ಯಕ್ತವಾಗಿದ್ದು, ವೈಯಕ್ತಿಕ ಕಾರಣಕ್ಕೆ ಕೊಲೆ ನಡೆಸಲಾಗಿದೆ ಎನ್ನಲಾಗಿದೆ. ಬಸವೇಶ್ವರ ನಗರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದ್ದು, ಪೊಲೀಸರು […]
ಬೆಂಗಳೂರು: ತಡರಾತ್ರಿ ಬೆಂಗಳೂರಿನಲ್ಲಿ ವ್ಯಕ್ತಿಯೋರ್ವನನ್ನು ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿರುವ ಘಟನೆ ನಡೆದಿದೆ. ಬಸವೇಶ್ವರ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಮಂಜುನಾಥ್ ನಗರದ ಬಾರ್ ಮುಂದೆ ಕೊಲೆ ನಡೆದಿದ್ದು, ಮೃತನು ಅದೇ ಏರಿಯಾದ ಸದಾನಂದ ಎಂದು ತಿಳಿದು ಬಂದಿದೆ.
ರಾತ್ರಿ ಬಾರ್ಗೆ ತೆರಳಿ ಕುಡಿದು ಹೊರಬಂದಿದ್ದವನ್ನು ವ್ಯಕ್ತಿಯೋರ್ವ ಕೊಚ್ಚಿ ಕೊಲೆ ಮಾಡಿದ್ದಾನೆ. ಮೇಲ್ನೋಟಕ್ಕೆ ಪರಿಚಯಸ್ಥರಿಂದಲೇ ಕೊಲೆ ನಡೆದಿರುವ ಶಂಕೆ ವ್ಯಕ್ತವಾಗಿದ್ದು, ವೈಯಕ್ತಿಕ ಕಾರಣಕ್ಕೆ ಕೊಲೆ ನಡೆಸಲಾಗಿದೆ ಎನ್ನಲಾಗಿದೆ. ಬಸವೇಶ್ವರ ನಗರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದ್ದು, ಪೊಲೀಸರು ಘಟನಾ ಸ್ಥಳದ ಸಿಸಿಟಿವಿ ಮತ್ತು ಇತರ ಸಾಕ್ಷಿಗಳ ಆಧಾರದ ಮೇಲೆ ಅರೋಪಿಗಾಗಿ ಬಲೆ ಬೀಸಿದ್ದಾರೆ.
Published On - 6:55 am, Sun, 15 December 19