ಬೆಂಗಳೂರಿನಲ್ಲಿ ಯುವಕನ ಬರ್ಬರ ಕೊಲೆ, ಪರಿಚಯಸ್ಥರೇ ಹತ್ಯೆ ಮಾಡಿರುವ ಶಂಕೆ

|

Updated on: Dec 15, 2019 | 7:02 AM

ಬೆಂಗಳೂರು: ತಡರಾತ್ರಿ ಬೆಂಗಳೂರಿನಲ್ಲಿ ವ್ಯಕ್ತಿಯೋರ್ವನನ್ನು ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿರುವ ಘಟನೆ ನಡೆದಿದೆ. ಬಸವೇಶ್ವರ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಮಂಜುನಾಥ್ ನಗರದ ಬಾರ್ ಮುಂದೆ ಕೊಲೆ ನಡೆದಿದ್ದು, ಮೃತನು ಅದೇ ಏರಿಯಾದ ಸದಾನಂದ ಎಂದು ತಿಳಿದು ಬಂದಿದೆ. ರಾತ್ರಿ ಬಾರ್​ಗೆ ತೆರಳಿ ಕುಡಿದು ಹೊರಬಂದಿದ್ದವನ್ನು ವ್ಯಕ್ತಿಯೋರ್ವ ಕೊಚ್ಚಿ ಕೊಲೆ ಮಾಡಿದ್ದಾನೆ. ಮೇಲ್ನೋಟಕ್ಕೆ ಪರಿಚಯಸ್ಥರಿಂದಲೇ ಕೊಲೆ ನಡೆದಿರುವ ಶಂಕೆ ವ್ಯಕ್ತವಾಗಿದ್ದು, ವೈಯಕ್ತಿಕ ಕಾರಣಕ್ಕೆ ಕೊಲೆ ನಡೆಸಲಾಗಿದೆ ಎನ್ನಲಾಗಿದೆ. ಬಸವೇಶ್ವರ ನಗರ ಪೊಲೀಸ್​ ಠಾಣೆಯಲ್ಲಿ ಕೇಸ್ ದಾಖಲಾಗಿದ್ದು, ಪೊಲೀಸರು […]

ಬೆಂಗಳೂರಿನಲ್ಲಿ ಯುವಕನ ಬರ್ಬರ ಕೊಲೆ, ಪರಿಚಯಸ್ಥರೇ ಹತ್ಯೆ ಮಾಡಿರುವ ಶಂಕೆ
Follow us on

ಬೆಂಗಳೂರು: ತಡರಾತ್ರಿ ಬೆಂಗಳೂರಿನಲ್ಲಿ ವ್ಯಕ್ತಿಯೋರ್ವನನ್ನು ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿರುವ ಘಟನೆ ನಡೆದಿದೆ. ಬಸವೇಶ್ವರ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಮಂಜುನಾಥ್ ನಗರದ ಬಾರ್ ಮುಂದೆ ಕೊಲೆ ನಡೆದಿದ್ದು, ಮೃತನು ಅದೇ ಏರಿಯಾದ ಸದಾನಂದ ಎಂದು ತಿಳಿದು ಬಂದಿದೆ.

ರಾತ್ರಿ ಬಾರ್​ಗೆ ತೆರಳಿ ಕುಡಿದು ಹೊರಬಂದಿದ್ದವನ್ನು ವ್ಯಕ್ತಿಯೋರ್ವ ಕೊಚ್ಚಿ ಕೊಲೆ ಮಾಡಿದ್ದಾನೆ. ಮೇಲ್ನೋಟಕ್ಕೆ ಪರಿಚಯಸ್ಥರಿಂದಲೇ ಕೊಲೆ ನಡೆದಿರುವ ಶಂಕೆ ವ್ಯಕ್ತವಾಗಿದ್ದು, ವೈಯಕ್ತಿಕ ಕಾರಣಕ್ಕೆ ಕೊಲೆ ನಡೆಸಲಾಗಿದೆ ಎನ್ನಲಾಗಿದೆ. ಬಸವೇಶ್ವರ ನಗರ ಪೊಲೀಸ್​ ಠಾಣೆಯಲ್ಲಿ ಕೇಸ್ ದಾಖಲಾಗಿದ್ದು, ಪೊಲೀಸರು ಘಟನಾ ಸ್ಥಳದ ಸಿಸಿಟಿವಿ ಮತ್ತು ಇತರ ಸಾಕ್ಷಿಗಳ ಆಧಾರದ ಮೇಲೆ ಅರೋಪಿಗಾಗಿ ಬಲೆ ಬೀಸಿದ್ದಾರೆ.

Published On - 6:55 am, Sun, 15 December 19