AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೈಲಿನ ಕೋಚ್ ಅಟೆಂಡೆಂಟ್ ಜತೆ ಜಗಳವಾಡಿ, ಗುಂಡು ಹಾರಿಸಿದ ಪ್ರಯಾಣಿಕ

ಜಾರ್ಖಂಡ್​ನ ಸೀಲ್ದಾ ರಾಜಧಾನಿ ಎಕ್ಸ್​ಪ್ರೆಸ್ ರೈಲಿನಲ್ಲಿ ಪ್ರಯಾಣಿಕರೊಬ್ಬರು ಕೋಚ್ ಅಟೆಂಡೆಂಟ್ ಜತೆ ಜಗಳವಾಡಿ ಬಳಿಕ ಗುಂಡು ಹಾರಿಸಿರುವ ಘಟನೆ ನಡೆದಿದೆ. ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ, ಪ್ರಯಾಣಿಕನನ್ನು 41 ವರ್ಷದ ಹರ್ವಿಂದರ್ ಸಿಂಗ್ ಎಂದು ಗುರುತಿಸಲಾಗಿದ್ದು, ಜಾರ್ಖಂಡ್‌ನ ಧನ್‌ಬಾದ್ ನಿಲ್ದಾಣದಿಂದ ದೆಹಲಿಗೆ ಹೋಗುವ ರೈಲನ್ನು ಹತ್ತಿದ್ದರು. ಈಸ್ಟರ್ನ್ ರೈಲ್ವೇಸ್ ಅಧಿಕಾರಿಗಳ ಪ್ರಕಾರ, ಆರೋಪಿ ಪ್ರಯಾಣಿಕ ಮತ್ತು ಕೋಚ್ ಅಟೆಂಡೆಂಟ್ ನಡುವೆ ವಾಗ್ವಾದ ನಡೆಯಿತು, ನಂತರ ಅವನು ತನ್ನ ಪಿಸ್ತೂಲ್‌ನಿಂದ ಗುಂಡು ಹಾರಿಸಿದ್ದಾನೆ ಎಂದು ಹಿಂದೂಸ್ತಾನ್ ಟೈಮ್ಸ್​ ವರದಿ ಮಾಡಿದೆ.

ರೈಲಿನ ಕೋಚ್ ಅಟೆಂಡೆಂಟ್ ಜತೆ ಜಗಳವಾಡಿ, ಗುಂಡು ಹಾರಿಸಿದ ಪ್ರಯಾಣಿಕ
ರೈಲು
ನಯನಾ ರಾಜೀವ್
|

Updated on: Oct 13, 2023 | 9:15 AM

Share

ಸೀಲ್ದಾ ರಾಜಧಾನಿ ಎಕ್ಸ್​ಪ್ರೆಸ್ ರೈಲಿನಲ್ಲಿ ಪ್ರಯಾಣಿಕರೊಬ್ಬರು ಕೋಚ್ ಅಟೆಂಡೆಂಟ್ ಜತೆ ಜಗಳವಾಡಿ ಬಳಿಕ ಗುಂಡು ಹಾರಿಸಿರುವ ಘಟನೆ ನಡೆದಿದೆ. ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ, ಪ್ರಯಾಣಿಕನನ್ನು 41 ವರ್ಷದ ಹರ್ವಿಂದರ್ ಸಿಂಗ್ ಎಂದು ಗುರುತಿಸಲಾಗಿದ್ದು, ಜಾರ್ಖಂಡ್‌ನ ಧನ್‌ಬಾದ್ ನಿಲ್ದಾಣದಿಂದ ದೆಹಲಿಗೆ ಹೋಗುವ ರೈಲನ್ನು ಹತ್ತಿದ್ದರು. ಈಸ್ಟರ್ನ್ ರೈಲ್ವೇಸ್ ಅಧಿಕಾರಿಗಳ ಪ್ರಕಾರ, ಆರೋಪಿ ಪ್ರಯಾಣಿಕ ಮತ್ತು ಕೋಚ್ ಅಟೆಂಡೆಂಟ್ ನಡುವೆ ವಾಗ್ವಾದ ನಡೆಯಿತು, ನಂತರ ಅವನು ತನ್ನ ಪಿಸ್ತೂಲ್‌ನಿಂದ ಗುಂಡು ಹಾರಿಸಿದ್ದಾನೆ ಎಂದು ಹಿಂದೂಸ್ತಾನ್ ಟೈಮ್ಸ್​ ವರದಿ ಮಾಡಿದೆ.

ಯಾರಿಗೂ ಗಾಯವಾಗಿಲ್ಲ. ಅವರನ್ನು ಕೊಡರ್ಮಾದಲ್ಲಿ ಇಳಿಸಿ ರಾಜ್ಯ ಪೊಲೀಸರಿಗೆ ಹಸ್ತಾಂತರಿಸಲಾಯಿತು. ರೈಲಿನೊಳಗೆ ಗುಂಡು ಹಾರಿಸಿದ ವ್ಯಕ್ತಿ ಕುಡಿದ ಅಮಲಿನಲ್ಲಿದ್ದ ಸಾಧ್ಯತೆಗಳನ್ನು ಪರಿಶೀಲಿಸುತ್ತಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ. ಅವರ ರಕ್ತದ ಮಾದರಿಗಳನ್ನು ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದೇ ರೀತಿಯ ಘಟನೆ ಜುಲೈನಲ್ಲಿ ನಡೆದಿದ್ದು, ರೈಲ್ವೇ ಪ್ರೊಟೆಕ್ಷನ್ ಫೋರ್ಸ್ (ಆರ್‌ಪಿಎಫ್) ಕಾನ್‌ಸ್ಟೆಬಲ್ ಚಲಿಸುತ್ತಿರುವ ರೈಲಿನೊಳಗೆ ತನ್ನ ಸಹೋದ್ಯೋಗಿಗಳ ಮೇಲೆ ಗುಂಡು ಹಾರಿಸಿ ನಾಲ್ವರನ್ನು ಕೊಂದಿದ್ದರು. ದಹಿಸರ್ ಮತ್ತು ಮೀರಾ ರೋಡ್ ನಿಲ್ದಾಣಗಳ ನಡುವೆ ಜೈಪುರ-ಮುಂಬೈ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್‌ನ B5 ಕೋಚ್‌ನಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಒಬ್ಬ ಪೋಲೀಸ್ ಸೇರಿದಂತೆ ಕನಿಷ್ಠ ನಾಲ್ಕು ಜನರು ಸಾವನ್ನಪ್ಪಿದ್ದರು.

ಮತ್ತಷ್ಟು ಓದಿ: ಹನುಮಕೊಂಡದಲ್ಲಿ ಅತ್ತೆ-ಅಳಿಯನ ಜಗಳ, ಅತ್ತೆಯನ್ನು ಗುಂಡಿಕ್ಕಿ ಕೊಂದ ಕಾನ್‌ಸ್ಟೆಬಲ್ ಅಳಿಮಯ್ಯ

ಜೈಪುರ – ಮುಂಬೈ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್‌ನಲ್ಲಿ ನಡೆದ ದುರದೃಷ್ಟಕರ ಘಟನೆಯಲ್ಲಿ ಕಾನ್‌ಸ್ಟೆಬಲ್ ಚೇತನ್ ಕುಮಾರ್ ಅವರು ತಮ್ಮ ಸಹೋದ್ಯೋಗಿ ಎಸ್ಕಾರ್ಟ್ ಇನ್ ಚಾರ್ಜ್ ಎಎಸ್‌ಐ ಟಿಕಾ ರಾಮ್ ಮೇಲೆ ಗುಂಡು ಹಾರಿಸಿದ್ದರು.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ