ಸೀಲ್ದಾ ರಾಜಧಾನಿ ಎಕ್ಸ್ಪ್ರೆಸ್ ರೈಲಿನಲ್ಲಿ ಪ್ರಯಾಣಿಕರೊಬ್ಬರು ಕೋಚ್ ಅಟೆಂಡೆಂಟ್ ಜತೆ ಜಗಳವಾಡಿ ಬಳಿಕ ಗುಂಡು ಹಾರಿಸಿರುವ ಘಟನೆ ನಡೆದಿದೆ. ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ, ಪ್ರಯಾಣಿಕನನ್ನು 41 ವರ್ಷದ ಹರ್ವಿಂದರ್ ಸಿಂಗ್ ಎಂದು ಗುರುತಿಸಲಾಗಿದ್ದು, ಜಾರ್ಖಂಡ್‌ನ ಧನ್‌ಬಾದ್ ನಿಲ್ದಾಣದಿಂದ ದೆಹಲಿಗೆ ಹೋಗುವ ರೈಲನ್ನು ಹತ್ತಿದ್ದರು. ಈಸ್ಟರ್ನ್ ರೈಲ್ವೇಸ್ ಅಧಿಕಾರಿಗಳ ಪ್ರಕಾರ, ಆರೋಪಿ ಪ್ರಯಾಣಿಕ ಮತ್ತು ಕೋಚ್ ಅಟೆಂಡೆಂಟ್ ನಡುವೆ ವಾಗ್ವಾದ ನಡೆಯಿತು, ನಂತರ ಅವನು ತನ್ನ ಪಿಸ್ತೂಲ್‌ನಿಂದ ಗುಂಡು ಹಾರಿಸಿದ್ದಾನೆ ಎಂದು ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ.
ಯಾರಿಗೂ ಗಾಯವಾಗಿಲ್ಲ. ಅವರನ್ನು ಕೊಡರ್ಮಾದಲ್ಲಿ ಇಳಿಸಿ ರಾಜ್ಯ ಪೊಲೀಸರಿಗೆ ಹಸ್ತಾಂತರಿಸಲಾಯಿತು. ರೈಲಿನೊಳಗೆ ಗುಂಡು ಹಾರಿಸಿದ ವ್ಯಕ್ತಿ ಕುಡಿದ ಅಮಲಿನಲ್ಲಿದ್ದ ಸಾಧ್ಯತೆಗಳನ್ನು ಪರಿಶೀಲಿಸುತ್ತಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ. ಅವರ ರಕ್ತದ ಮಾದರಿಗಳನ್ನು ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಇದೇ ರೀತಿಯ ಘಟನೆ ಜುಲೈನಲ್ಲಿ ನಡೆದಿದ್ದು, ರೈಲ್ವೇ ಪ್ರೊಟೆಕ್ಷನ್ ಫೋರ್ಸ್ (ಆರ್‌ಪಿಎಫ್) ಕಾನ್‌ಸ್ಟೆಬಲ್ ಚಲಿಸುತ್ತಿರುವ ರೈಲಿನೊಳಗೆ ತನ್ನ ಸಹೋದ್ಯೋಗಿಗಳ ಮೇಲೆ ಗುಂಡು ಹಾರಿಸಿ ನಾಲ್ವರನ್ನು ಕೊಂದಿದ್ದರು. ದಹಿಸರ್ ಮತ್ತು ಮೀರಾ ರೋಡ್ ನಿಲ್ದಾಣಗಳ ನಡುವೆ ಜೈಪುರ-ಮುಂಬೈ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್‌ನ B5 ಕೋಚ್‌ನಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಒಬ್ಬ ಪೋಲೀಸ್ ಸೇರಿದಂತೆ ಕನಿಷ್ಠ ನಾಲ್ಕು ಜನರು ಸಾವನ್ನಪ್ಪಿದ್ದರು.
ಮತ್ತಷ್ಟು ಓದಿ: ಹನುಮಕೊಂಡದಲ್ಲಿ ಅತ್ತೆ-ಅಳಿಯನ ಜಗಳ, ಅತ್ತೆಯನ್ನು ಗುಂಡಿಕ್ಕಿ ಕೊಂದ ಕಾನ್‌ಸ್ಟೆಬಲ್ ಅಳಿಮಯ್ಯ
ಜೈಪುರ – ಮುಂಬೈ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್‌ನಲ್ಲಿ ನಡೆದ ದುರದೃಷ್ಟಕರ ಘಟನೆಯಲ್ಲಿ ಕಾನ್‌ಸ್ಟೆಬಲ್ ಚೇತನ್ ಕುಮಾರ್ ಅವರು ತಮ್ಮ ಸಹೋದ್ಯೋಗಿ ಎಸ್ಕಾರ್ಟ್ ಇನ್ ಚಾರ್ಜ್ ಎಎಸ್‌ಐ ಟಿಕಾ ರಾಮ್ ಮೇಲೆ ಗುಂಡು ಹಾರಿಸಿದ್ದರು.
ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ