ಉತ್ತರ ಪ್ರದೇಶ: ಒಂದು ವರ್ಷದ ಮಗುವಿನ ಮೇಲೆ ಅತ್ಯಾಚಾರ

|

Updated on: Feb 18, 2024 | 11:45 AM

ಉತ್ತರ ಪ್ರದೇಶದ ಬಹ್ರೈಚ್‌ನಲ್ಲಿ ಶನಿವಾರ ಒಂದು ವರ್ಷದ ಬಾಲಕಿಯ ಮೇಲೆ 50 ವರ್ಷದ ವ್ಯಕ್ತಿಯೊಬ್ಬ ಅತ್ಯಾಚಾರವೆಸಗಿದ್ದಾನೆ. ವ್ಯಕ್ತಿಯನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಉತ್ತರ ಪ್ರದೇಶ: ಒಂದು ವರ್ಷದ ಮಗುವಿನ ಮೇಲೆ ಅತ್ಯಾಚಾರ
ಮಗು
Image Credit source: Picjumbo
Follow us on

ಒಂದು ವರ್ಷದ ಮಗುವಿನ ಮೇಲೆ ಅತ್ಯಾಚಾರವೆಸಗಿರುವ ಆತಂಕಕಾರಿ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. 50 ವರ್ಷದ ವ್ಯಕ್ತಿಯೊಬ್ಬ ಒಂದು ವರ್ಷದ ಮಗುವಿನ ಮೇಲೆ ಅತ್ಯಾಚಾರವೆಸಗಿದ್ದಾನೆ. ಉತ್ತರ ಪ್ರದೇಶದ ಬಹ್ರೈಚ್​ನಲ್ಲಿ ಘಟನೆ ನಡೆದಿದ್ದು, ಪೊಲೀಸರು ಆತನನ್ನು ಬಂಧಿಸಿದ್ದಾರೆ. ನನ್ಪಾರಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ವೃಂದಾ ಶುಕ್ಲಾ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಘಟನೆಯ ಬಗ್ಗೆ ಮಾಹಿತಿ ಬಂದ ಕೂಡಲೇ ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆ ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ ಎಂದು ತಿಳಿಸಿದರು. ಮಗುವನ್ನು ಮೊದಲು ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ಕರೆದೊಯ್ಯಲಾಯಿತು. ಅದರ ಸ್ಥಿತಿ ಸ್ಥಿರವಾಗಿದ್ದರೂ, ಮಕ್ಕಳ ವೈದ್ಯರಿಂದ ಸಂಪೂರ್ಣ ಪರೀಕ್ಷೆಗಾಗಿ ಲಕ್ನೋಗೆ ಕಳುಹಿಸಲಾಗಿದೆ ಎಂದು ಶುಕ್ಲಾ ಹೇಳಿದರು.

ಮತ್ತಷ್ಟು ಓದಿ: ಕೊಪ್ಪಳದಲ್ಲಿ ಮಹಿಳೆ ಮೇಲೆ ಅತ್ಯಾಚಾರ: ವಿಡಿಯೋ ವೈರಲ್, 16 ಜನರ ವಿರುದ್ಧ ಎಫ್​ಐಆರ್

ಮುಂಬೈ: 4 ವರ್ಷದ ಮಗುವಿನ ಮೇಲೆ ಅತ್ಯಾಚಾರ
ಮುಂಬೈನಲ್ಲಿ ಎರಡು ಪ್ರತ್ಯೇಕ ಅತ್ಯಾಚಾರ ಪ್ರಕರಣಗಳು ಬೆಳಕಿಗೆ ಬಂದಿವೆ. ವಡಾಲಾ ಟಿಟಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಒಂದು ಪ್ರಕರಣ ಬೆಳಕಿಗೆ ಬಂದಿದ್ದು, ಇನ್ನೊಂದು ಪ್ರಕರಣ ಮುಂಬೈನ ಅಂಟಾಪ್ ಹಿಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮುಂಬೈನ ವಡಾಲಾ ಟಿಟಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 4 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ನಡೆದಿದ್ದು, ಬಾಲಕಿಯ ತಾಯಿ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು 23 ವರ್ಷದ ಆರೋಪಿ ವಿರುದ್ಧ ಸೆಕ್ಷನ್ 376 ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಆತನನ್ನು ಐಪಿಸಿ ಮತ್ತು ಪೋಕ್ಸೋ ಕಾಯ್ದೆಯಡಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಇದಾದ ಬಳಿಕ ನ್ಯಾಯಾಲಯ ಆರೋಪಿಯನ್ನು ಪೊಲೀಸ್ ಕಸ್ಟಡಿಗೆ ನೀಡಿದೆ. ವಡಾಲಾ ಟಿಟಿ ಪೊಲೀಸ್ ಠಾಣೆಯಿಂದ ಬಂದ ಮಾಹಿತಿಯ ಪ್ರಕಾರ, ಮಗು ಒಂಟಿಯಾಗಿರುವುದನ್ನು ನೋಡಿದ ಆರೋಪಿ ಅವಳನ್ನು ಕಾರ್ಖಾನೆಗೆ ಕರೆದೊಯ್ದು ಮೇಲೆ ಅತ್ಯಾಚಾರ ಎಸಗಿದ್ದಾರೆ.

ಸಂತ್ರಸ್ತೆಯ ತಾಯಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ದೂರಿನ ಆಧಾರದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆರೋಪಿ ಸಂತ್ರಸ್ತ ಬಾಲಕಿಗೆ ಪರಿಚಿತನಾಗಿದ್ದು, ಇದರ ಲಾಭ ಪಡೆದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

 

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ