ಕೇರಳದ ಕೊಲ್ಲಂ ಜಿಲ್ಲೆಯಲ್ಲಿ ಇಸ್ರೇಲಿ ಮಹಿಳೆಯೊಬ್ಬರು ಸಾವನ್ನಪ್ಪಿರುವ ಘಟನೆ ಬೆಳಕಿಗೆ ಬಂದಿದೆ. ಅವರ ಮನೆಯಲ್ಲಿಯೇ ಶವ ಪತ್ತೆಯಾಗಿದ್ದು, ಕೊಲೆ ಶಂಕೆ ವ್ಯಕ್ತವಾಗಿದೆ. ಮಹಿಳೆ ಲಿವ್ ಇನ್ ಸಂಗಾತಿಯ ಮೇಲೆ ಅನುಮಾನ ಮೂಡಿದೆ.ಪೊಲೀಸರು ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 302 ರ ಅಡಿಯಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ.
ಪೊಲೀಸರು ನೀಡಿರುವ ಮಾಹಿತಿ ಪ್ರಕಾರ ಆರೋಪಿಯು ಯೋಗ ಶಿಕ್ಷಕ ಎಂದು ತನ್ನನ್ನು ತಾನು ಗುರುತಿಸಿಕೊಂಡಿದ್ದಾನೆ. ಅವರಿಬ್ಬರೂ ಆತ್ಮಹತ್ಯೆ ಮಾಡಿಕೊಳ್ಳಲು ನಿರ್ಧರಿಸಿದ್ದರು. ಈ ನಿರ್ಧಾರದ ಭಾಗವಾಗಿ ಮಹಿಳೆಯ ಕತ್ತು ಸೀಳಿದ್ದಾನೆ. ತನ್ನ ಕುತ್ತಿಗೆ ಹಾಗೂ ಹೊಟ್ಟೆಗೆ ಚಾಕುವಿನಿಂದ ಇರಿದುಕೊಂಡಿದ್ದಾನೆ.
ಸದ್ಯ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪೊಲೀಸರ ಕಣ್ಗಾವಲಿನಲ್ಲಿದ್ದಾನೆ. ಮಹಿಳೆಯ ಕುತ್ತಿಗೆ ಭಾಗವನ್ನು ಹೊರತುಪಡಿಸಿ ಆಕೆಯ ದೇಹದ ಇತರೆ ಭಾಗಗಳಲ್ಲಿ ಚಾಕು ಇರಿತದ ಗಾಯಗಳಿವೆ.
ಮತ್ತಷ್ಟು ಓದಿ: ತುಮಕೂರು: ಇಬ್ಬರು ಮಕ್ಕಳೊಂದಿಗೆ ಕೆರೆಗೆ ಹಾರಿ ತಾಯಿ ಆತ್ಮಹತ್ಯೆಗೆ ಶರಣು
ಗುರುವಾರ ಮಧ್ಯಾಹ್ನ ಈ ಘಟನೆ ನಡೆದಿದೆ ಎನ್ನಲಾಗಿದೆ, ಆರೋಪಿಯ ಸಂಬಂಧಿಯೊಬ್ಬರು ಇಬ್ಬರು ಗಾಯಗೊಂಡಿರುವುದನ್ನು ಕಂಡು ಪೊಲೀಸರಿಗೆ ವಿಷಯ ತಿಳಿಸಿದ್ದಾರೆ.
ಪೊಲೀಸರ ಪ್ರಕಾರ ಮಹಿಳೆ ಖಿನ್ನತೆಗೆ ಒಳಗಾಗಿದ್ದಳು, ಯೋಗಾಭ್ಯಾಸ ಮಾಡಿದರೂ ಕೂಡ ಆರೋಗ್ಯ ಸ್ಥಿತಿ ಹಾಗೆಯೇ ಇತ್ತು ಎನ್ನುವ ವಿಚಾರ ತಿಳಿದುಬಂದಿದೆ. ಆರೋಪಿಯ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ