ಚಿಕ್ಕಮಗಳೂರು: ಶಾಸಕರ ಅಭಿನಂದನಾ ಸಮಾರಂಭದಲ್ಲೇ ಚಾಕು ಇರಿದು ವ್ಯಕ್ತಿ ಕೊಲೆ; ಕಾರಣ ಇಲ್ಲಿದೆ ನೋಡಿ

ಕಾಂಗ್ರೆಸ್ ಶಾಸಕರ ಅಭಿನಂದನಾ ಸಮಾರಂಭದಲ್ಲಿ ಕೊಲೆ ಚಾಕು ಇರಿದು ವ್ಯಕ್ತಿ ಕೊಲೆ ಮಾಡಿದ ಘಟನೆ ಜಿಲ್ಲೆಯ ತರೀಕೆರೆ ಪಟ್ಟಣದಲ್ಲಿ ನಡೆದಿದೆ. ವರುಣ್(28) ಮೃತ ಯುವಕ.

ಚಿಕ್ಕಮಗಳೂರು: ಶಾಸಕರ ಅಭಿನಂದನಾ ಸಮಾರಂಭದಲ್ಲೇ ಚಾಕು ಇರಿದು ವ್ಯಕ್ತಿ ಕೊಲೆ; ಕಾರಣ ಇಲ್ಲಿದೆ ನೋಡಿ
ಕೊಲೆಯಾದ ವ್ಯಕ್ತಿ ವರುಣ್​
Follow us
ಕಿರಣ್ ಹನುಮಂತ್​ ಮಾದಾರ್
|

Updated on: Jun 04, 2023 | 8:36 AM

ಚಿಕ್ಕಮಗಳೂರು: ಕಾಂಗ್ರೆಸ್ ಶಾಸಕರ ಅಭಿನಂದನಾ ಸಮಾರಂಭದಲ್ಲಿ ಕೊಲೆ ಚಾಕು ಇರಿದು ವ್ಯಕ್ತಿ ಕೊಲೆ ಮಾಡಿದ ಘಟನೆ ಜಿಲ್ಲೆಯ ತರೀಕೆರೆ (Tarikere) ಪಟ್ಟಣದಲ್ಲಿ ನಡೆದಿದೆ. ವರುಣ್(28) ಮೃತ ಯುವಕ. ಹೌದು ತರೀಕೆರೆ ಶಾಸಕ ಶ್ರೀನಿವಾಸ್​ಗೆ ಅಭಿಮಾನಿಗಳು ಅಭಿನಂದನಾ ಸಮಾರಂಭ ಏರ್ಪಡಿಸಿದ್ದರು. ಈ ಆರ್ಕೆಸ್ಟ್ರಾದಲ್ಲಿ ಹಾಡು ಬದಲಿಸುವ ವಿಚಾರದಲ್ಲಿ ಕಬಾಬ್ ಮೂರ್ತಿ ಹಾಗೂ ವರುಣ್ ಎಂಬುವವರ ಮಧ್ಯೆ ಗಲಾಟೆಯಾಗಿದೆ. ಈ ವೇಳೆ ಮಾತಿಗೆ ಮಾತು ಬೆಳೆದು ಎರಡು ಗುಂಪುಗಳು ಕೈ ಮಿಲಾಯಿಸುವ ಹಂತಕ್ಕೆ ಹೋಗಿದೆ. ಬಳಿಕ ಆರ್ಕೆಸ್ಟ್ರಾ ಮುಗಿಯುತ್ತಿದ್ದಂತೆ ಕಬಾಬ್ ಮೂರ್ತಿ ವರುಣ್​ಗೆ ಡ್ರ್ಯಾಗರ್​ನಿಂದ ಇರಿದಿದ್ದಾನೆ.

ಇನ್ನು ಈ ವೇಳೆ ಮಂಜು ಹಾಗೂ ಸಂಜು ಎಂಬಿಬ್ಬರ ಕೈ ಹಾಗೂ ಕಾಲಿಗೆ ಚಾಕು ಇರಿತದ ಗಾಯಗಳಾಗಿದೆ. ಇನ್ನು ವರುಣ್​ಗೆ ಹೊಟ್ಟೆಗೆ ಚಾಕು ಇರಿದಿದ್ದರಿಂದ ಸಾವನ್ನಪ್ಪಿದ್ದಾನೆ. ಬಳಿಕ ಸ್ಥಳಕ್ಕೆ ಎಸ್ಪಿ ಉಮಾ ಪ್ರಶಾಂತ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇದನ್ನೂ ಓದಿ:ಗದಗ: ನಾಲ್ಕು ತಿಂಗಳಿಂದ ಶಾಂತವಾಗಿದ್ದ ಅವಳಿ ನಗರದಲ್ಲಿ ಮತ್ತೆ ರಕ್ತದೋಕಳಿ; ಮನೆಗೆ ನುಗ್ಗಿ ಚೂರಿಯಿಂದ ಇರಿದು ವ್ಯಕ್ತಿ ಕೊಲೆ

ನಿಂತಿದ್ದ ಕ್ಯಾಂಟರ್​ಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಗೂಡ್ಸ್ ವಾಹನ; ಓರ್ವ ಸಾವು

ಮಂಡ್ಯ: ಜಿಲ್ಲೆ ಮದ್ದೂರು ತಾಲೂಕಿನ ಚಳ್ಳನಕೆರೆ ಗೇಟ್ ಬಳಿ ನಿಂತಿದ್ದ ಕ್ಯಾಂಟರ್​ಗೆ ಹಿಂಬದಿಯಿಂದ ಬಂದ ಗೂಡ್ಸ್ ವಾಹನ ಡಿಕ್ಕಿ ಹೊಡೆದಿದ್ದು, ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಮತ್ತೊಬ್ಬನಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ಸಾಗಿಸಲಾಗಿದೆ. ಇನ್ನು ಬೆಳಗ್ಗಿನ ಜಾವ ನಿದ್ದೆಯ ಮಂಪರಿನಲ್ಲಿ ಡಿಕ್ಕಿ ಹೊಡೆದಿದೆ ಎಂದು ಹೇಳಲಾಗುತ್ತಿದೆ. ಜೊತೆಗೆ ಅಪಘಾತದ ರಭಸಕ್ಕೆ ವಾಹನ ನಜ್ಜುಗುಜ್ಜು ಆಗಿದೆ. ಸ್ಥಳಕ್ಕೆ ಮದ್ದೂರು ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇನ್ನು ಮೃತ ವ್ಯಕ್ತಿ ಯಾರು ಎಂಬುದು ತಿಳಿದಿಲ್ಲ.

ಇನ್ನಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ