ಕುಡಿದ ಮತ್ತಿನಲ್ಲಿ ಜೊತೆಗಿದ್ದವನ ಕೊಲೆ: ಆರೋಪಿ ಅರೆಸ್ಟ್​

ಕುಡಿದ ಮತ್ತಿನಲ್ಲಿ ತನ್ನ ಜೊತೆಗಿದ್ದವನನ್ನೇ ವ್ಯಕ್ತಿಯೋರ್ವ ಮರ್ಡರ್​ ಮಾಡಿರುವ ಘಟನೆ ಬೆಂಗಳೂರಿನ ಮಾರತಹಳ್ಳಿ ಸರ್ವಿಸ್ ರಸ್ತೆಯಲ್ಲಿ ನಡೆದಿದೆ. ಇಬ್ಬರ ನಡುವಿನ ಜಗಳ ವಿಕೋಪಕ್ಕೆ ಹೋದ ಕಾರಣ ಹರಿತವಾದ ಆಯುಧದಿಂದ ಇರಿದು ಕೊಲೆ ಮಾಡಲಾಗಿದೆ. ಆರೋಪಿ ಮತ್ತು ಕೊಲೆಯಾದ ವ್ಯಕ್ತಿ ಇಬ್ಬರೂ ಮಾರತ್​​ಹಳ್ಳಿ ಭಾಗದಲ್ಲಿ ಕೂಲಿ ಕೆಲಸ ಮಾಡಿಕೊಂಡಿದ್ದರು ಎಂಬ ವಿಷಯ ತನಿಖೆ ವೇಳೆ ಗೊತ್ತಾಗಿದೆ.

ಕುಡಿದ ಮತ್ತಿನಲ್ಲಿ ಜೊತೆಗಿದ್ದವನ ಕೊಲೆ: ಆರೋಪಿ ಅರೆಸ್ಟ್​
ಕುಡಿದ ಮತ್ತಲ್ಲಿ ಕೊಲೆ

Updated on: Oct 05, 2025 | 7:57 AM

ಬೆಂಗಳೂರು, ಅಕ್ಟೋಬರ್​ 05: ಕುಡಿದ ಮತ್ತಿನಲ್ಲಿ ಜೊತೆಗಿದ್ದವನನ್ನೇ ವ್ಯಕ್ತಿಯೋರ್ವ ಕೊಲೆ (Murder) ಮಾಡಿರುವ ಘಟನೆ ಬೆಂಗಳೂರಿನ ಮಾರತಹಳ್ಳಿ ಸರ್ವಿಸ್ ರಸ್ತೆಯಲ್ಲಿ ನಡೆದಿದೆ. ರಾಯಚೂರು ಮೂಲದ ಮಹದೇವ(65) ಕೊಲೆಯಾದ ವ್ಯಕ್ತಿಯಾಗಿದ್ದು, ಆರೋಪಿಯಾಗಿರೋ ತಮಿಳುನಾಡಿನ ತಾಂಜಾವೂರು ಮೂಲದ ರಾಜು ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಕುಡಿದ ಮತ್ತಿನಲ್ಲಿ ನಡೆದ ಜಗಳ ವಿಕೋಪಕ್ಕೆ ಹೋಗಿ ಮರ್ಡರ್​ ನಡೆದಿದೆ ಎನ್ನಲಾಗಿದೆ.

ಕುಡಿದ ಮತ್ತಿನಲ್ಲಿದ್ದ ಆರೋಪಿ ರಾಜು, ಜಗಳದ ವೇಳೆ ಮಹದೇವ ಹೊಟ್ಟೆಗೆ ಹರಿತವಾದ ಆಯುಧದಿಂದ ಇರಿದಿದ್ದಾನೆ. ಈ ವೇಳೆ ಗಂಭೀರ ಗಾಯಗೊಂಡ ಮಹದೇವ ಪ್ರಾಣ ಬಿಟ್ಟಿದ್ದು, ಸ್ಥಳಕ್ಕೆ ವೈಟ್​ ಫೀಲ್ಡ್​ ಡಿಸಿಪಿ ಪರಶುರಾಮ್ ಭೇಟಿ, ಪರಿಶೀಲನೆ ನಡೆಸಿದ್ದಾರೆ. ಘಟನೆ ಸಂಬಂಧ ಆರೋಪಿಯನ್ನ ಪೊಲೀಸರು ವಶಕ್ಕೆ ಪಡೆದಿದ್ದು, ಮರಣೋತ್ತರ ಪರೀಕ್ಷೆಗೆ ಮೃತದೇಹವನ್ನ ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದೆ. ಮಾರತ್​​ಹಳ್ಳಿ ಪೊಲೀಸ್​​​ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ. ಆರೋಪಿ ಮತ್ತು ಕೊಲೆಯಾದ ವ್ಯಕ್ತಿ ಇಬ್ಬರೂ ಮಾರತಹಳ್ಳಿ ಭಾಗದಲ್ಲಿ ಕೂಲಿ ಕೆಲಸ ಮಾಡಿಕೊಂಡಿದ್ದರು ಎಂಬ ವಿಷಯ ತನಿಖೆ ವೇಳೆ ಗೊತ್ತಾಗಿದೆ.

ಇದನ್ನೂ ಓದಿ: ಬೆಂಗಳೂರಿನ ನಿರ್ಮಾಣ ಹಂತದ ಕಟ್ಟಡದಲ್ಲಿ ಅಸ್ತಿಪಂಜರ ಪತ್ತೆ

ಬೇಕರಿಯಲ್ಲಿ ವಿದ್ಯುತ್​ ಶಾರ್ಟ್​ ಸರ್ಕ್ಯೂಟ್​

ಶಾರ್ಟ್​ ಸರ್ಕ್ಯೂಟ್​ನಿಂದ ಬೇಕರಿ ಬೆಂಕಿಗಾಹುತಿ

ವಿದ್ಯುತ್​ ಶಾರ್ಟ್​ ಸರ್ಕ್ಯೂಟ್​ ನಿಂದ ಬೇಕರಿ ಬೆಂಕಿಗೆ ಆಹುತಿಯಾಗಿರುವ ಘಟನೆ ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ತಳುವಗೇರಿಯಲ್ಲಿ ನಡೆದಿದೆ. ನಿಂಗನಗೌಡ ಪಾಟೀಲ ಎಂಬುವವರಿಗೆ ಸೇರಿದ ಶರಣಬಸವೇಶ್ವರ ಬೇಕರಿಯಲ್ಲಿ ಅವಘಡ ನಡೆದಿದ್ದು, ಬೇಕರಿಯಲ್ಲಿದ್ದ ಯಂತ್ರಗಳು, ತಿನಿಸುಗಳು ಬೆಂಕಿಯಲ್ಲಿ ಸುಟ್ಟು ಕರಕಲಾಗಿವೆ. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದು, ಕುಷ್ಟಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.