ರಾತ್ರಿ ತಡವಾಗಿ ಮನೆಗೆ ಬರುವ ವಿಚಾರದಲ್ಲಿ ದಂಪತಿ ನಡುವೆ ಜಗಳ, ಪತ್ನಿಗೆ ಚೂರಿಯಲ್ಲಿ ಇರಿದು 3ನೇ ಮಹಡಿಯಿಂದ ಹಾರಿದ ಪತಿ

ರಾತ್ರಿ ತಡವಾಗಿ ಮನೆಗೆ ಬರುವ ವಿಚಾರದಲ್ಲಿ ದಂಪತಿ ಮಧ್ಯೆ ನಡೆದ ಜಗಳದಲ್ಲಿ ವ್ಯಕ್ತಿಯೊಬ್ಬ ಪತ್ನಿಗೆ ಚೂರಿಯಲ್ಲಿ ಇರಿದು ಬಳಿಕ ತಾನು 3ನೇ ಮಹಡಿಯಿಂದ ಹಾರಿರುವ ಘಟನೆ ಲಕ್ನೋದಲ್ಲಿ ನಡೆದಿದೆ. ಆರೋಪಿಯನ್ನು ಆದಿತ್ಯ ಕಪೂರ್ ಎಂದು ಗುರುತಿಸಲಾಗಿದ್ದು, ಆತ ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ.

ಸಾವುImage Credit source: India Today
Follow us
ನಯನಾ ರಾಜೀವ್
|

Updated on: Nov 05, 2023 | 2:10 PM

ರಾತ್ರಿ ತಡವಾಗಿ ಮನೆಗೆ ಬರುವ ವಿಚಾರದಲ್ಲಿ ದಂಪತಿ ಮಧ್ಯೆ ನಡೆದ ಜಗಳದಲ್ಲಿ ವ್ಯಕ್ತಿಯೊಬ್ಬ ಪತ್ನಿಗೆ ಚೂರಿಯಲ್ಲಿ ಇರಿದು ಬಳಿಕ ತಾನು 3ನೇ ಮಹಡಿಯಿಂದ ಹಾರಿರುವ ಘಟನೆ ಲಕ್ನೋದಲ್ಲಿ ನಡೆದಿದೆ. ಆರೋಪಿಯನ್ನು ಆದಿತ್ಯ ಕಪೂರ್ ಎಂದು ಗುರುತಿಸಲಾಗಿದ್ದು, ಆತ ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ.

ಈ ಘರ್ಷಣೆಗೆ ಇಬ್ಬರು ಮಕ್ಕಳು ಸಾಕ್ಷಿಯಾಗಿದ್ದಾರೆ, ಪರಿಸ್ಥಿತಿಯನ್ನು ನಿಯಂತ್ರಿಸಲು ಹಾಗೂ ತಮ್ಮನ್ನು ರಕ್ಷಿಸಿಕೊಳ್ಳುವ ಪ್ರಯತ್ನದಲ್ಲಿ ತಾಯಿಯ ಹತ್ಯೆಯ ನಂತರ ತಂದೆಯನ್ನು ಕೋಣೆಯಲ್ಲಿ ಕೂಡಿಹಾಕಲು ಪ್ರಯತ್ನಿಸಿದ್ದರು.

ಆದಿತ್ಯ ಅವರು ತಮ್ಮ ಅಪಾರ್ಟ್‌ಮೆಂಟ್‌ನ ಮೂರನೇ ಮಹಡಿಯಿಂದ ಜಿಗಿದಿದ್ದು, ತೀವ್ರ ಗಾಯಗಳಾಗಿದ್ದು, ನಂತರ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಕ್ಕಳು ತಮ್ಮ ತಂದೆಯ ಕೃತ್ಯವನ್ನು ಪೊಲೀಸರಿಗೆ ತಿಳಿಸಿದ್ದಾರೆ.

ಮತ್ತಷ್ಟು ಓದಿ:ಮಂಗಳೂರು: ಮಹಿಳೆಯ ಶವ ಪತ್ತೆ ಪ್ರಕರಣಕ್ಕೆ ಟ್ವಿಸ್ಟ್, ಪತ್ನಿಯ ಕತ್ತು ಹಿಸುಕಿ ಬಾವಿಗೆ ಎಸೆದ ಪತಿ

ಆದಿತ್ಯ ಈ ಹಿಂದೆ ಹಲವು ಬಾರಿ ಆತ್ಮಹತ್ಯೆಗೆ ಯತ್ನಿಸಿದ್ದ ಮತ್ತು ಆಗಾಗ್ಗೆ ಪತ್ನಿಯೊಂದಿಗೆ ಜಗಳವಾಡುತ್ತಿದ್ದ ಎಂದು ಮಕ್ಕಳು ತಿಳಿಸಿದ್ದಾರೆ.

ಅಡುಗೆ ಮಾಡುವ ವಿಚಾರವಾಗಿ ಪತ್ನಿಯನ್ನು ಕೊಂದ ಪತಿ, ಮತ್ತೊಂದು ಘಟನೆ ಒಡಿಶಾದ ಗಂಜಾಂ ಜಿಲ್ಲೆಯಲ್ಲಿ ಅಡುಗೆ ಮಾಡುವ ವಿಧಾನದ ವಿವಾದದ ಕಾರಣದಿಂದ ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನು ಕೊಲೆ ಮಾಡಿದ ಶಂಕೆಯ ಮೇಲೆ ಆತನನ್ನು ಬಂಧಿಸಲಾಗಿದೆ.

ಆತ ಕಟ್ಟಿಗೆ ಒಲೆಯಲ್ಲಿ ಅಡುವೆ ಮಾಡುವಂತೆ ಕೇಳಿದ್ದ ಆದರೆ ಸಿಲಿಂಡರ್ ಬಳಸಿ ಆಕೆ ಅಡುಗೆ ಮಾಡಿದ್ದಳು, ಅದರಿಂದ ವಿವಾದ ಹುಟ್ಟಿಕೊಂಡಿತ್ತು. ಮಾಹಿತಿ ಪಡೆದ ಪೊಲೀಸರು ಆಸ್ಪತ್ರೆಗೆ ಆಗಮಿಸಿ ಮರಣೋತ್ತರ ಪರೀಕ್ಷೆ ನಡೆಸಿ ಮಿಥುನ್‌ನನ್ನು ವಶಕ್ಕೆ ಪಡೆದಿದ್ದು, ಅಪರಾಧಕ್ಕೆ ಬಳಸಿದ ಆಯುಧವನ್ನೂ ವಶಪಡಿಸಿಕೊಂಡಿದ್ದಾರೆ. ಪೊಲೀಸ್ ಪ್ರಕರಣದ ಜೊತೆಗೆ, ಮಿಥುನ್ ಮತ್ತು ಅವನ ಕುಟುಂಬವು ತನಗೆ ಬಹಳ ಸಮಯದಿಂದ ಚಿತ್ರಹಿಂಸೆ ನೀಡಿದ್ದರು ಎಂದು ಲಿಲಿ ಪೋಷಕರು ಆರೋಪಿಸಿದ್ದಾರೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು

ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ

ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್

ತನ್ನ ತಂದೆ ಬಗ್ಗೆ ಮಾತಾಡಿದ ಬಿಜೆಪಿ ನಾಯಕನ ಹೇಳಿಕೆಗೆ ಕಣ್ಣೀರು ಹಾಕಿದ ಅತಿಶಿ

ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್

ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ

ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ

ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ

ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು

ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ