ಲಿವ್ ಇನ್ ಸಂಗಾತಿಯನ್ನು ಕೊಲೆಗೈದು 35 ತುಂಡು ಮಾಡಿ ಬಿಸಾಡಿದ ಪ್ರಿಯಕರ, ದೆಹಲಿಯಲ್ಲಿ ನಡೆಯಿತು ಆಘಾತಕಾರಿ ಘಟನೆ

ಅಫ್ತಾಬ್ ಅಮೀನ್ ಪೂನಾವಾಲಾ ಮತ್ತು ಲಿವ್ ಇನ್ ಸಂಗಾತಿ ಶ್ರದ್ದಾ ನಡುವೆ ಮೇ 18 ರಂದು  ಜಗಳ ನಡೆದಿದ್ದು ಅಫ್ತಾಬ್, ಶ್ರದ್ದಾಳ ಕತ್ತು ಹಿಸುಕಿ ಕೊಂದಿದ್ದಾನೆ. ನಂತರ ಆಕೆಯ ದೇಹವನ್ನು 35 ತುಂಡುಗಳಾಗಿ ಕತ್ತರಿಸಿ ಅವುಗಳನ್ನು ಇಡಲು ಫ್ರಿಡ್ಜ್ ಖರೀದಿಸಿದ್ದ

ಲಿವ್ ಇನ್ ಸಂಗಾತಿಯನ್ನು ಕೊಲೆಗೈದು 35 ತುಂಡು ಮಾಡಿ ಬಿಸಾಡಿದ ಪ್ರಿಯಕರ, ದೆಹಲಿಯಲ್ಲಿ ನಡೆಯಿತು ಆಘಾತಕಾರಿ ಘಟನೆ
ಶ್ರದ್ಧಾImage Credit source: NDTV
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on:Nov 14, 2022 | 12:54 PM

ದೆಹಲಿ: ವ್ಯಕ್ತಿಯೊಬ್ಬ ತನ್ನ ಲಿವ್-ಇನ್ ಸಂಗಾತಿಯ(live-in partner) ಕತ್ತು ಹಿಸುಕಿ ಕೊಲೆಗೈದು, ಆಕೆಯ ಮೃತದೇಹವನ್ನು 35 ತುಂಡುಗಳಾಗಿ ಕತ್ತರಿಸಿ 18 ದಿನಗಳ ಕಾಲ ದೆಹಲಿಯ(Delhi) ವಿವಿಧ ಪ್ರದೇಶಗಳಲ್ಲಿ ಎಸೆದಿರುವ ಘಟನೆ ನಡೆದಿದೆ  ಎಂದು ಪೊಲೀಸ್ ಮೂಲಗಳು ತಿಳಿಸಿವೆ. ದೇಹದ ಭಾಗಗಳನ್ನು ಬಿಸಾಡಲು ಆತ ಪ್ರತಿದಿನ ಮುಂಜಾನೆ 2 ಗಂಟೆಗೆ ಹೊರಹೋಗುತ್ತಿದ್ದ ಎಂದು ಮೂಲಗಳು ತಿಳಿಸಿವೆ. ಮೂಲಗಳ ಪ್ರಕಾರ,  ಅಫ್ತಾಬ್ ಅಮೀನ್ ಪೂನಾವಾಲಾ ಮತ್ತು ಲಿವ್ ಇನ್ ಸಂಗಾತಿ ಶ್ರದ್ದಾ ನಡುವೆ ಮೇ 18 ರಂದು  ಜಗಳ ನಡೆದಿದ್ದು ಅಫ್ತಾಬ್, ಶ್ರದ್ದಾಳ ಕತ್ತು ಹಿಸುಕಿ ಕೊಂದಿದ್ದಾನೆ. ನಂತರ ಆಕೆಯ ದೇಹವನ್ನು 35 ತುಂಡುಗಳಾಗಿ ಕತ್ತರಿಸಿ ಅವುಗಳನ್ನು ಇಡಲು ಫ್ರಿಡ್ಜ್ ಖರೀದಿಸಿದ್ದ. ನಂತರ 18 ದಿನ ಆತ ಆಕೆಯ ದೇಹದ ತುಂಡುಗಳನ್ನು ದೆಹಲಿಯ ವಿವಿಧ ಭಾಗಗಳಲ್ಲಿ ಬಿಸಾಡಿದ್ದಾನೆ. 26ರ ಹರೆಯದ ಶ್ರದ್ಧಾ ಮುಂಬೈನ ಬಹುರಾಷ್ಟ್ರೀಯ ಕಂಪನಿಯ ಕಾಲ್ ಸೆಂಟರ್‌ನಲ್ಲಿ ಕೆಲಸ ಮಾಡುತ್ತಿದ್ದು ಅಲ್ಲಿ ಆಕೆ ಪೂನಾವಲಾನನ್ನು ಭೇಟಿಯಾಗಿದ್ದಳು. ಇಬ್ಬರೂ ಡೇಟಿಂಗ್ ಮಾಡಲು ಪ್ರಾರಂಭಿಸಿ ನಂತರ ಜತೆಗೆ ಇರಲು ನಿರ್ಧರಿಸಿದ್ದರು. ಆದರೆ ಶ್ರದ್ಧಾಳ ಕುಟುಂಬವು ಈ ಸಂಬಂಧವನ್ನು ಒಪ್ಪದೇ ಇದ್ದಾಗ ಈ ಯುವಜೋಡಿ ದೆಹಲಿಗೆ ಬಂದಿದ್ದರು. ದೆಹಲಿಯ ಮೆಹ್ರೌಲಿಯ ಫ್ಲಾಟ್‌ನಲ್ಲಿ ಅವರಿಬ್ಬರೂ ವಾಸವಾಗಿದ್ದರು,

ಸ್ವಲ್ಪ ಸಮಯದ ನಂತರ, ಶ್ರದ್ಧಾ ತನ್ನ ಕುಟುಂಬದ ಫೋನ್ ಕರೆಗಳಿಗೆ ಪ್ರತಿಕ್ರಿಯಿಸುವುದನ್ನು ನಿಲ್ಲಿಸಿದರು. ನವೆಂಬರ್ 8 ರಂದು ಆಕೆಯ ತಂದೆ ವಿಕಾಸ್ ಮದನ್ ಮಗಳನ್ನು ಭೇಟಿಯಾಗಲು ದೆಹಲಿಗೆ ಬಂದಿದ್ದರು. ಅವರು ಫ್ಲಾಟ್ ತಲುಪಿದಾಗ, ಅದು ಲಾಕ್ ಆಗಿತ್ತು. ಅವರು ಮೆಹ್ರೌಲಿ ಪೊಲೀಸರನ್ನು ಸಂಪರ್ಕಿಸಿ ಅಪಹರಣ ದೂರು ದಾಖಲಿಸಿದ್ದರು.

ಅವರ ದೂರಿನ ಆಧಾರದ ಮೇಲೆ ಪೊಲೀಸರು ಪೂನಾವಾಲಾನನ್ನು ಶನಿವಾರ ಬಂಧಿಸಿದ್ದಾರೆ. ಶ್ರದ್ಧಾ ಆತನನ್ನುಮದುವೆಯಾಗಲು ಬಯಸಿದ್ದರಿಂದ ಇಬ್ಬರೂ ಆಗಾಗ್ಗೆ ಜಗಳವಾಡುತ್ತಿದ್ದರು ಎಂದು ತನಿಖೆಯ ವೇಳೆ ಆತ ಬಹಿರಂಗಪಡಿಸಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಪೊಲೀಸರು ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದು, ಶ್ರದ್ಧಾ ಶವಕ್ಕಾಗಿ ಹುಡುಕಾಟ ನಡೆಸುತ್ತಿದ್ದಾರೆ.

Published On - 12:48 pm, Mon, 14 November 22

ಹಾರ್ದಿಕ್ ಪಾಂಡ್ಯ ತೂಫಾನ್​ಗೆ ಎದುರಾಳಿ ತಂಡ ತತ್ತರ
ಹಾರ್ದಿಕ್ ಪಾಂಡ್ಯ ತೂಫಾನ್​ಗೆ ಎದುರಾಳಿ ತಂಡ ತತ್ತರ
ಇನ್ನು ಮುಂದೆ ಸುಮ್ಮನಿರಲ್ಲ: ಚೈತ್ರಾ-ಮೋಕ್ಷಿತಾಗೆ ತ್ರಿವಿಕ್ರಮ್ ಸವಾಲು
ಇನ್ನು ಮುಂದೆ ಸುಮ್ಮನಿರಲ್ಲ: ಚೈತ್ರಾ-ಮೋಕ್ಷಿತಾಗೆ ತ್ರಿವಿಕ್ರಮ್ ಸವಾಲು
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ