ಮೈಸೂರು: ಪರ ಪುರಷನೊಂದಿಗೆ ಓಡಿಹೋಗಿದ್ದ ಹೆಂಡ್ತಿಯ ಶಿರಚ್ಛೇದ ಮಾಡಿದ ಪತಿ

ಏಳು ವರ್ಷಗಳ ಹಿಂದಷ್ಟೇ ದೇವರಾಜು ಎನ್ನುವಾತ ಸಂಬಂಧಿ ತೇಜುಳನ್ನು ಮದುವೆಯಾಗಿದ್ದ. ಆರಂಭದಲ್ಲೇ ಸಂಸಾರ ಚೆನ್ನಾಗಿತ್ತು. ಆದರೆ, ಇತ್ತೀಚೆಗೆ ತೇಜು ಹಾದಿ ತಪ್ಪಿ ಪರ ಪುರಷನೊಂದಿಗೆ ಲವ್ವಿಡವ್ವಿ ಇಟ್ಟುಕೊಂಡಿದ್ದಳು. ಅಲ್ಲದೇ ಗಂಡ ಹಾಗೂ ಇಬ್ಬರು ಮಕ್ಕಳನ್ನ ಬಿಟ್ಟು ಪ್ರಿಯಕರನೊಂದಿಗೆ ಓಡಿಹೋಗಿದ್ದಳು. ಇದರಿಂದ ಬೇಸತ್ತಿದ್ದ ದೇವರಾಜ್ ಇದೀಗ ಪತ್ನಿಯ ಶಿರಚ್ಛೇದ ಮಾಡಿ ಬರ್ಬರವಾಗಿ ಹತ್ಯೆ ಮಾಡಿದ್ದಾನೆ. ಬಳಿಕ ಪೊಲೀಸ್ ಠಾಣೆಗೆ ಹೋಗಿದ್ದಾನೆ.

ಮೈಸೂರು: ಪರ ಪುರಷನೊಂದಿಗೆ ಓಡಿಹೋಗಿದ್ದ ಹೆಂಡ್ತಿಯ ಶಿರಚ್ಛೇದ ಮಾಡಿದ ಪತಿ
ಹೆಂಡ್ತಿಯ ಶಿರಚ್ಛೇದ ಮಾಡಿದ ಪತಿ
Follow us
ದಿಲೀಪ್​, ಚೌಡಹಳ್ಳಿ
| Updated By: ರಮೇಶ್ ಬಿ. ಜವಳಗೇರಾ

Updated on: Jan 15, 2025 | 10:17 PM

ಮೈಸೂರು, (ಜನವರಿ 15): ಪರಪುರಷನೊಂದಿಗೆ ಅನೈತಿಕ ಸಂಬಂಧ ಹೊಂದಿದ್ದ ಪತ್ನಿಯನ್ನು ಪತಿ ಬರ್ಬರವಾಗಿ ಹತ್ಯೆಗೈದು ಪೊಲೀಸರಿಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲೂಕಿನ ಕಣಿಯನಹುಂಡಿಯಲ್ಲಿ ನಡೆದಿದೆ. ತೇಜು (26) ಪತಿಯಿಂದಲೇ ಕೊಲೆಯಾದ ಪತ್ನಿ. ಕಳೆದ ಏಳು ವರ್ಷಗಳ ಹಿಂದೆ ದೇವರಾಜ್ ಎನ್ನುವಾತ ಸಂಬಂಧಿಯಾಗಿದ್ದ ತೇಜಳನ್ನು ಮದುವೆಯಾಗಿದ್ದ. ಇಬ್ಬರಿಗೆ ಎರಡು ಮಕ್ಕಳು ಸಹ ಇವೆ. ಆದರೂ ತೇಜ ಪರಪುರಷನೊಂದಿಗೆ ಸಂಬಂಧ ಇಟ್ಟುಕೊಂಡಿದ್ದಳು. ಸಾಲದಕ್ಕೆ ಗಂಡ ಮಕ್ಕಳನ್ನು ಬಿಟ್ಟು ಪ್ರಿಯಕರನ ಜತೆ ಮನೆ ಬಿಟ್ಟು ಓಡಿಹೋಗಿದ್ದಳು. ಬಳಿಕ ರಾಜೀ ಸಂದಾನ ಮಾಡಿ ವಾರದ ಹಿಂದೆ ಅಷ್ಟೇ ಪತಿ ದೇವರಾಜ್ ಪತ್ನಿಯನ್ನು ಮನೆ ಸೇರಿಸಿಕೊಂಡಿದ್ದ. ಆದರೂ ದೇವರಾಜ್​ಗೆ ಊರಿನಲ್ಲಿ ತಲೆ ಎತ್ತಿ ಓಡಾಡದಂತಾಗಿದ್ದು, ಇದೇ ಕೋಪದಲ್ಲಿ ಹೆಂಡ್ತಿ ಕತ್ತು ಕೊಯ್ದು ಕೊಲೆ ಮಾಡಿದ್ದಾನೆ. ಬಳಿಕ ತಾನೇ ಪೊಲೀಸರಿಗೆ ಶರಣಾಗಿದ್ದಾನೆ.

26 ವರ್ಷದ ತೇಜು ಹಾಗೂ ದೇವರಾಜ್​ ಸಂಬಂಧಿಗಳಾಗಿದ್ದು, ಏಳು ವರ್ಷದ ಹಿಂದೆ ಅಷ್ಟೇ ಮದುವೆಯಾಗಿದ್ದರು. ದೇವರಾಜು ತೇಜು ದಂಪತಿಗೆ ಇಬ್ಬರು ಮಕ್ಕಳು ಸಹ ಇದ್ದರು. ಆದ್ರೆ, ತೇಜು ಬೇರೆ ವ್ಯಕ್ತಿ ಜೊತೆ ಲವ್ವಿಡವ್ವಿ ಇಟ್ಟುಕೊಂಡಿದ್ದು, ಬಳಿಕ ಗಂಡ ಹಾಗೂ ಮಕ್ಕಳನ್ನು ಬಿಟ್ಟು ಪ್ರಿಯಕರನೊಂದಿಗೆ ಮನೆ ಬಿಟ್ಟು ಓಡಿಹೋಗಿದ್ದಳು. ಇದರಿಂದ ಪತಿ ದೇವರಾಜ್​ಗೆ ಊರಿನಲ್ಲಿ ಒಂದು ತರ ಮರ್ಯಾದೆ ಹೋದಂತಾಗಿತ್ತು.

ಇದನ್ನೂ ಓದಿ: ಹುಬ್ಬಳ್ಳಿ: ಪ್ರೇಯಸಿಯ ಖಾಸಗಿ ವಿಡಿಯೋ, ಫೋಟೋ ಶೇರ್ ಮಾಡಿ ಪ್ರಿಯಕರ ಆತ್ಮಹತ್ಯೆ

ಬಳಿಕ ರಾಜೀ ಪಂಚಾಯಿತಿ ಮಾಡಿ ಕಳೆದ ವಾರದ ಹಿಂದೆ ಅಷ್ಟೇ ದೇವರಾಜ್, ಪತ್ನಿ ತೇಜಳನ್ನು ಮನೆ ಸೇರಿಸಿಕೊಂಡಿದ್ದ. ಆದರೂ ಪತ್ನಿ ಮಾಡಿದ ಕೆಲಸದಿಂದ ದೇವರಾಜ್​ಗೆ ಕುದಿಯುತ್ತಿತ್ತು. ಊರಿನಲ್ಲಿ ಮರ್ಯಾದೆ ಕಳೆದುಬಿಟ್ಟಳು ಎಂಬ ಸಿಟ್ಟಿನಲ್ಲಿದ್ದ. ಅದೇ ವಿಚಾರದಲ್ಲಿ ಇಂದು (ಜನವರಿ 15) ಮಧ್ಯಾಹ್ನ ಇಬ್ಬರ ನಡುವೆ ಗಲಾಟೆಯಾಗಿದೆ. ಮೊದಲೇ ಕೋಪದಲ್ಲಿದ್ದ ದೇವರಾಜ್​, ಮಚ್ಚಿನಿಂದ ತೇಜಳ ಕತ್ತುಕೊಯ್ದು ಬರ್ಬರವಾಗಿ ಹತ್ಯೆ ಮಾಡಿದ್ದಾನೆ.

ಕೊಲೆ ಮಾಡಿದ ದೇವರಾಜ್​ ತಾನೇ ನೇರವಾಗಿ ಪೊಲೀಸ್ ಠಾಣೆಗೆ ತೆರಳಿ ಶರಣಾಗಿದ್ದಾನೆ. ಈ ಸಂಬಂಧ ಹೆಚ್‌ಡಿ ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತಾಯಿ ಮಸಣ ಸೇರಿದ್ದರೆ, ತಂದೆ ಜೈಲು ಪಾಲಾಗಿದ್ದರಿಂದ ಎರಡು ಮಕ್ಕಳು ಅನಾಥವಾಗಿವೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ತಂದೆಯ ರೀತಿ ಆಶೀರ್ವಾದ ಮಾಡಿದ್ದರು: ಸರಿಗಮ ವಿಜಿ ನಿಧನಕ್ಕೆ ತರುಣ್ ಸಂತಾಪ
ತಂದೆಯ ರೀತಿ ಆಶೀರ್ವಾದ ಮಾಡಿದ್ದರು: ಸರಿಗಮ ವಿಜಿ ನಿಧನಕ್ಕೆ ತರುಣ್ ಸಂತಾಪ
ಬಹಳ ಎಚ್ಚರವಹಿಸಬೇಕೆಂದು ಹೇಳುತ್ತಾರೆ ಪ್ರಯಾಗ್​ರಾಜ್​ಗೆ ಬಂದಿರುವ ಕನ್ನಡಿಗ
ಬಹಳ ಎಚ್ಚರವಹಿಸಬೇಕೆಂದು ಹೇಳುತ್ತಾರೆ ಪ್ರಯಾಗ್​ರಾಜ್​ಗೆ ಬಂದಿರುವ ಕನ್ನಡಿಗ
ಕೊಪ್ಪಳ ಗವಿಮಠದ ಅಜ್ಜನ ಜಾತ್ರೆಗೆ ಹರಿದು ಬಂದ ಜನ ಸಾಗರದ ವಿಡಿಯೋ ನೋಡಿ
ಕೊಪ್ಪಳ ಗವಿಮಠದ ಅಜ್ಜನ ಜಾತ್ರೆಗೆ ಹರಿದು ಬಂದ ಜನ ಸಾಗರದ ವಿಡಿಯೋ ನೋಡಿ
ಯಡಿಯೂರಪ್ಪ ಕಾಲಿಗೆ ಚಕ್ರ ಕಟ್ಟಿಕೊಂಡು ಪಕ್ಷ ಸಂಘಟನೆ ಮಾಡಿದ್ದಾರೆ: ಬಿವೈವಿ
ಯಡಿಯೂರಪ್ಪ ಕಾಲಿಗೆ ಚಕ್ರ ಕಟ್ಟಿಕೊಂಡು ಪಕ್ಷ ಸಂಘಟನೆ ಮಾಡಿದ್ದಾರೆ: ಬಿವೈವಿ
ಮೂಕ ಪ್ರಾಣಿಯ ಕೆಚ್ಚಲು ಕೊಯ್ಯುವುದು ತಾಯಿಗೆ ದ್ರೋಗ ಬಗೆದಂತೆ: ತನ್ವೀರ್ ಸೇಟ
ಮೂಕ ಪ್ರಾಣಿಯ ಕೆಚ್ಚಲು ಕೊಯ್ಯುವುದು ತಾಯಿಗೆ ದ್ರೋಗ ಬಗೆದಂತೆ: ತನ್ವೀರ್ ಸೇಟ
ಆರತಿ ಉಕ್ಕಡಕ್ಕೆ ಭೇಟಿ ನೀಡಿದ ದರ್ಶನ್; ಅಹಲ್ಯ ದೇವಿಗೆ ವಿಶೇಷ ಪೂಜೆ
ಆರತಿ ಉಕ್ಕಡಕ್ಕೆ ಭೇಟಿ ನೀಡಿದ ದರ್ಶನ್; ಅಹಲ್ಯ ದೇವಿಗೆ ವಿಶೇಷ ಪೂಜೆ
ನವಿ ಮುಂಬೈನಲ್ಲಿ ಏಷ್ಯಾದ 2ನೇ ದೊಡ್ಡ ಇಸ್ಕಾನ್ ದೇವಾಲಯ ಉದ್ಘಾಟಿಸಿದ ಮೋದಿ
ನವಿ ಮುಂಬೈನಲ್ಲಿ ಏಷ್ಯಾದ 2ನೇ ದೊಡ್ಡ ಇಸ್ಕಾನ್ ದೇವಾಲಯ ಉದ್ಘಾಟಿಸಿದ ಮೋದಿ
ದೇವರಾಜ ಮಾರ್ಕೆಟ್ ಡೆಮಾಲಿಶ್ ಮಾಡಲು ನ್ಯಾಯಾಲಯ ಆದೇಶಿಸಿದೆ: ಮಹದೇವಪ್ಪ
ದೇವರಾಜ ಮಾರ್ಕೆಟ್ ಡೆಮಾಲಿಶ್ ಮಾಡಲು ನ್ಯಾಯಾಲಯ ಆದೇಶಿಸಿದೆ: ಮಹದೇವಪ್ಪ
ಮಹಾಕುಂಭದಲ್ಲಿ ಭಕ್ತಸಾಗರ; ಕಣ್ಸೆಳೆಯುತ್ತಿದೆ ವಿಹಂಗಮ ನೋಟ
ಮಹಾಕುಂಭದಲ್ಲಿ ಭಕ್ತಸಾಗರ; ಕಣ್ಸೆಳೆಯುತ್ತಿದೆ ವಿಹಂಗಮ ನೋಟ
ನಾಳೆಯಲ್ಲ, ಮುಂದಿನ ಸಂಪುಟ ಸಭೆಯಲ್ಲಿ ಜಾತಿಗಣತಿ ವರದಿ ಮಂಡನೆ: ಸಿದ್ದರಾಮಯ್ಯ
ನಾಳೆಯಲ್ಲ, ಮುಂದಿನ ಸಂಪುಟ ಸಭೆಯಲ್ಲಿ ಜಾತಿಗಣತಿ ವರದಿ ಮಂಡನೆ: ಸಿದ್ದರಾಮಯ್ಯ