ಸ್ಕ್ರೂಡ್ರೈವರ್​ನಿಂದ ಲಿವ್-ಇನ್ ಸಂಗಾತಿ ಮೇಲೆ ಹಲ್ಲೆ ನಡೆಸಿದ ಪ್ರಿಯಕರನ ಬಂಧನ

ಲಿವ್-ಇನ್ ಸಂಗಾತಿ ಮೇಲೆ ವ್ಯಕ್ತಿಯೊಬ್ಬ ಸ್ಕ್ರೂಡ್ರೈವರ್​ನಿಂದ ಹಲ್ಲೆ ನಡೆಸಿರುವ ಘಟನೆ ಗುರುಗ್ರಾಮದಲ್ಲಿ ನಡೆದಿದೆ. ಆರೋಪಿಯನ್ನು ಉತ್ತರ ಪ್ರದೇಶ ಮೂಲದ ಶಿವಂ ಕುಮಾರ್ ಎಂದು ಗುರುತಿಸಲಾಗಿದ್ದು, ಗುರುಗ್ರಾಮದ ರಾಜೀವ್ ಚೌಕ್‌ನಿಂದ ಬಂಧಿಸಲಾಗಿದ್ದು, ಸದರ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಸ್ಕ್ರೂಡ್ರೈವರ್​ನಿಂದ ಲಿವ್-ಇನ್ ಸಂಗಾತಿ ಮೇಲೆ ಹಲ್ಲೆ ನಡೆಸಿದ ಪ್ರಿಯಕರನ ಬಂಧನ
ಬಂಧನ
Image Credit source: India Today

Updated on: Aug 19, 2023 | 8:52 AM

ಗುರುಗ್ರಾಮ, ಆಗಸ್ಟ್​ 19: ಲಿವ್-ಇನ್ ಸಂಗಾತಿ ಮೇಲೆ ವ್ಯಕ್ತಿಯೊಬ್ಬ ಸ್ಕ್ರೂಡ್ರೈವರ್​ನಿಂದ ಹಲ್ಲೆ ನಡೆಸಿರುವ ಘಟನೆ ಗುರುಗ್ರಾಮದಲ್ಲಿ ನಡೆದಿದೆ.
ಆರೋಪಿಯನ್ನು ಉತ್ತರ ಪ್ರದೇಶ ಮೂಲದ ಶಿವಂ ಕುಮಾರ್ ಎಂದು ಗುರುತಿಸಲಾಗಿದ್ದು, ಗುರುಗ್ರಾಮದ ರಾಜೀವ್ ಚೌಕ್‌ನಿಂದ ಬಂಧಿಸಲಾಗಿದ್ದು, ಸದರ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಮಹಿಳೆ ಉತ್ತರ ಪ್ರದೇಶ ಮೂಲದವರಾಗಿದ್ದು, ತನ್ನೊಂದಿಗೆ ದೈಹಿಕ ಸಂಬಂಧ ಹೊಂದುವಂತೆ ಶಿವಂ ಒತ್ತಾಯಿಸಿದ್ದ ಎಂದು ಆರೋಪಿಸಿದ್ದಾರೆ. ಆಕೆ ನಿರಾಕರಿಸಿದಾಗ ಸ್ಕ್ರೂಡ್ರೈವರ್‌ನಿಂದ ಕುತ್ತಿಗೆಗೆ ಮೇಲೆ ಹಲ್ಲೆ ನಡೆಸಿದ್ದಾನೆ ಎಂದು ಮಹಿಳೆ ತಿಳಿಸಿದ್ದಾರೆ.

ಮಹಿಳೆ ನೀಡಿದ ದೂರಿನ ಪ್ರಕಾರ, ಅವರು ಗುರುಗ್ರಾಮ ಬಾಡಿಗೆ ಮನೆಯಲ್ಲಿ ಪತಿಯಿಂದ ಪ್ರತ್ಯೇಕವಾಗಿ ವಾಸಿಸುತ್ತಿದ್ದರು, ಅಲ್ಲಿ ಅವರು ಯುಪಿಯ ಕನೌಜ್ ನಿವಾಸಿ ಶಿವಂ ಕುಮಾರ್ ಅವರನ್ನು ಭೇಟಿಯಾದರು.

ನಾವು ನಮ್ಮ ಲಿವ್-ಇನ್ ಸಂಬಂಧವನ್ನು ಪ್ರಾರಂಭಿಸಿದ ಕೆಲವೇ ದಿನಗಳಲ್ಲಿ, ಮದುವೆಯ ನೆಪದಲ್ಲಿ ಶಿವಮ್ ನನ್ನೊಂದಿಗೆ ದೈಹಿಕ ಸಂಬಂಧವನ್ನು ಹೊಂದಿದ್ದರು. ಇತ್ತೀಚೆಗಷ್ಟೇ ಶಿವಂ ಮದುವೆಯಾಗಿರುವುದು ನನಗೆ ಗೊತ್ತಾಯಿತು ಎಂದು ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ.

ಮತ್ತಷ್ಟು ಓದಿ: ಅಪ್ರಾಪ್ತ ಮಗಳಿಗೆ ಮದುವೆ ಮಾಡಿಸಲು ಒಲ್ಲೆ ಎಂದ ಗಂಡ, ಆತ್ಮಹತ್ಯೆ ಮಾಡಿಕೊಂಡ ಪತ್ನಿ

ಗುರುವಾರ ಸಂಜೆ ಬಂದು ಮತ್ತೆ ದೈಹಿಕ ಸಂಬಂಧ ಹೊಂದುವಂತೆ ಒತ್ತಾಯಿಸಿದರು. ನಾನು ನಿರಾಕರಿಸಿದಾಗ ಕೋಪಗೊಂಡು ಸ್ಕ್ರೂಡ್ರೈವರ್‌ನಿಂದ ನನ್ನ ಕುತ್ತಿಗೆಗೆ ಹೊಡೆದು ಪರಾರಿಯಾಗಿದ್ದಾನೆ ಎಂದು ಮಹಿಳೆ ಹೇಳಿದ್ದಾರೆ. ದೂರಿನ ಮೇರೆಗೆ ಎಫ್‌ಐಆರ್ ದಾಖಲಿಸಿಕೊಂಡಿದ್ದು, ಆರೋಪಿಯನ್ನು ಬಂಧಿಸಲಾಗಿದೆ. ನಾವು ಅವನನ್ನು ವಿಚಾರಣೆ ನಡೆಸುತ್ತಿದ್ದೇವೆ. ಶನಿವಾರ ನಗರದ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಎಸಿಪಿ (ಅಪರಾಧ) ವರುಣ್ ದಹಿಯಾ ಮಾಹಿತಿ ನೀಡಿದ್ದಾರೆ.

 

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More
Loading...
Unable to load recommendations.
Follow Us