AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿ: ಚೂರಿಯಿಂದ ಇರಿದು ಒಂದೇ ಕುಟುಂಬದ ಮೂವರ ಬರ್ಬರ ಹತ್ಯೆ

ದೆಹಲಿಯಲ್ಲಿ ಬೆಳ್ಳಂಬೆಳಗ್ಗೆ ಒಂದೇ ಕುಟುಂಬದ ಮೂವರನ್ನು ಚೂರಿಯಿಂದ ಹತ್ಯೆ ಮಾಡಿರುವ ಘಟನೆ ನಡೆದಿದೆ. ದೆಹಲಿಯ ನೆಬ್ ಸರಾಯ್​ನಲ್ಲಿ ವ್ಯಕ್ತಿ ಆತನ ಪತ್ನಿ ಹಾಗೂ ಮಗಳನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಮೃತರನ್ನು ರಾಜೇಶ್ (53), ಅವರ ಪತ್ನಿ ಕೋಮಲ್ (47) ಮತ್ತು ಅವರ 23 ವರ್ಷದ ಮಗಳು ಕವಿತಾ ಎಂದು ಗುರುತಿಸಲಾಗಿದೆ. ಆದರೆ ಮಗ ಬೆಳಗ್ಗೆ ಜಾಗಿಂಗ್​​ಗೆ ಹೋಗಿದ್ದ ಕಾರಣ ಅದೃಷ್ಟವಶಾತ್ ಬದುಕುಳಿದಿದ್ದಾರೆ.

ದೆಹಲಿ: ಚೂರಿಯಿಂದ ಇರಿದು ಒಂದೇ ಕುಟುಂಬದ ಮೂವರ ಬರ್ಬರ ಹತ್ಯೆ
ಕೊಲೆImage Credit source: NDTV
ನಯನಾ ರಾಜೀವ್
|

Updated on:Dec 04, 2024 | 3:09 PM

Share

ದೆಹಲಿಯಲ್ಲಿ ಬೆಳ್ಳಂಬೆಳಗ್ಗೆ ಒಂದೇ ಕುಟುಂಬದ ಮೂವರನ್ನು ಚೂರಿಯಿಂದ ಹತ್ಯೆ ಮಾಡಿರುವ ಘಟನೆ ನಡೆದಿದೆ. ದೆಹಲಿಯ ನೆಬ್ ಸರಾಯ್​ನಲ್ಲಿ ವ್ಯಕ್ತಿ ಆತನ ಪತ್ನಿ ಹಾಗೂ ಮಗಳನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಮೃತರನ್ನು ರಾಜೇಶ್ (53), ಅವರ ಪತ್ನಿ ಕೋಮಲ್ (47) ಮತ್ತು ಅವರ 23 ವರ್ಷದ ಮಗಳು ಕವಿತಾ ಎಂದು ಗುರುತಿಸಲಾಗಿದೆ. ಆದರೆ ಮಗ ಬೆಳಗ್ಗೆ ಜಾಗಿಂಗ್​​ಗೆ ಹೋಗಿದ್ದ ಕಾರಣ ಅದೃಷ್ಟವಶಾತ್ ಬದುಕುಳಿದಿದ್ದಾರೆ.

ಮಗ ಬೆಳಗ್ಗೆ 5 ಗಂಟೆ ಸುಮಾರಿಗೆ ಜಾಗಿಂಗ್​ಗೆಂದು ಹೊರಗೆ ಹೋಗಿದ್ದ ಮನೆಗೆ ಹಿಂದಿರುಗಿದಾಗ ಹೆತ್ತವರು ಹಾಗೂ ಸಹೋದರಿ ರಕ್ತದ ಮಡುವಿನಲ್ಲಿ ಬಿದ್ದಿರುವುದನ್ನು ಕಂಡು ಬೆಚ್ಚಿಬಿದ್ದಿದ್ದಾನೆ. ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ, ತಕ್ಷಣವೇ ಪೊಲೀಸರು ದೌಡಾಯಿಸಿ ತನಿಖೆ ಆರಂಭಿಸಿದ್ದಾರೆ.

ಆದರೆ ಪ್ರಾಥಮಿಕ ತನಿಖೆಯಲ್ಲಿ ಮನೆಯಲ್ಲಿ ಯಾವ ವಸ್ತುವು ಕಳವಾಗಿಲ್ಲ ಎಂಬುದು ತಿಳಿದುಬಂದಿದೆ. ಇಂದು ತಂದೆ-ತಾಯಿಯ ಮದುವೆ ವಾರ್ಷಿಕೋತ್ಸವವಿತ್ತು ಎಲ್ಲರೂ ಸಂತೋಷದಿಂದಿದ್ದರು ಎಂದು ಮಗ ಹೇಳಿದ್ದಾನೆ. ನಿವಾಸಿಗಳಿಗೆ ಭದ್ರತೆ ಒದಗಿಸುವ ತನ್ನ ಜವಾಬ್ದಾರಿಯನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಆರೋಪಿಸಿ ದೆಹಲಿ ಮುಖ್ಯಮಂತ್ರಿ ಅತಿಶಿ ಕೇಂದ್ರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

ಮತ್ತಷ್ಟು ಓದಿ: ಶಾಸಕ ಮುನಿರತ್ನ ವಿರುದ್ಧ ಮತ್ತೊಂದು ಹನಿಟ್ರ್ಯಾಪ್ ಆರೋಪ: ಬೆಡ್ ರೂಂನಲ್ಲಿ ಕ್ಯಾಮರಾ ಇಡಲು ಯತ್ನಿಸಿದ್ದರೆಂದ ಸಂತ್ರಸ್ತೆಯ ಪತಿ

ದೆಹಲಿಯಲ್ಲಿ ಹಗಲು ದರೋಡೆ, ಕೊಲೆ, ಮಾದಕವಸ್ತುಗಳನ್ನು ಬಹಿರಂಗವಾಗಿ ಮಾರಾಟ ಮಾಡಲಾಗುತ್ತಿದೆ. ಜನರಿಗೆ ಭದ್ರತೆ ಒದಗಿಸುವಲ್ಲಿ ಸರ್ಕಾರ ಸೋತಿದೆ ಎಂದರು. ದೆಹಲಿ ಪೊಲೀಸರು ಕೇಂದ್ರ ಗೃಹ ಸಚಿವಾಲಯದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಾರೆ.

ಮುಂಬರುವ ದೆಹಲಿ ವಿಧಾನಸಭಾ ಚುನಾವಣೆಗೆ ಮುನ್ನ ದೆಹಲಿಯ ಕಾನೂನು ಮತ್ತು ಸುವ್ಯವಸ್ಥೆಯನ್ನು ನಿರ್ಲಕ್ಷಿಸಿದೆ ಎಂದು ಆರೋಪಿಸಲಾಗಿದೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 3:08 pm, Wed, 4 December 24

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ