ಕಳ್ಳತನ ಆರೋಪ, ಸಾರಿಗೆ ಸಂಸ್ಥೆಯ ಸಿಬ್ಬಂದಿಯನ್ನು ಕಂಬಕ್ಕೆ ಕಟ್ಟಿಹಾಕಿ ಉಸಿರು ನಿಲ್ಲುವವರೆಗೆ ಥಳಿಸಿ, ಆಸ್ಪತ್ರೆಯ ಹೊರಗೆ ಎಸೆದ ಪಾಪಿಗಳು

ಕಳ್ಳತನದ ಆರೋಪ ಹೊರಿಸಿ ಸಾರಿಗೆ ಸಂಸ್ಥೆಯ ಮ್ಯಾನೇಜರ್​ ಒಬ್ಬರನ್ನು ಕಂಬಕ್ಕೆ ಕಟ್ಟಿ ಹಾಕಿ ಉಸಿರು ನಿಲ್ಲುವವರೆಗೆ ಥಳಿಸಿರುವ ಘಟನೆ ಉತ್ತರ ಪ್ರದೇಶದ ಶಹಜಹಾನ್​ಪುರದಲ್ಲಿ ನಡೆದಿದೆ.

ಕಳ್ಳತನ ಆರೋಪ, ಸಾರಿಗೆ ಸಂಸ್ಥೆಯ ಸಿಬ್ಬಂದಿಯನ್ನು ಕಂಬಕ್ಕೆ ಕಟ್ಟಿಹಾಕಿ ಉಸಿರು ನಿಲ್ಲುವವರೆಗೆ ಥಳಿಸಿ, ಆಸ್ಪತ್ರೆಯ ಹೊರಗೆ ಎಸೆದ ಪಾಪಿಗಳು
ಮ್ಯಾನೇಜರ್ ಶಿವಂ
Edited By:

Updated on: Apr 13, 2023 | 1:49 PM

ಕಳ್ಳತನದ ಆರೋಪ ಹೊರಿಸಿ ಸಾರಿಗೆ ಸಂಸ್ಥೆಯ ಮ್ಯಾನೇಜರ್​ ಒಬ್ಬರನ್ನು ಕಂಬಕ್ಕೆ ಕಟ್ಟಿ ಹಾಕಿ ಉಸಿರು ನಿಲ್ಲುವವರೆಗೆ ಥಳಿಸಿರುವ ಘಟನೆ ಉತ್ತರ ಪ್ರದೇಶದ ಶಹಜಹಾನ್​ಪುರದಲ್ಲಿ ನಡೆದಿದೆ. 32 ವರ್ಷದ ಶಿವಂ ಜೋಹ್ರಿ ಸಾರಿಗೆ ಸಂಸ್ಥೆಯೊಂದರಲ್ಲಿ ಮ್ಯಾನೇಜರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು, ಅವರ ಮೇಲೆ ಕಳ್ಳತನದ ಆರೋಪ ಹೊರಿಸಿ, ಥಳಿಸಿ ಹತ್ಯೆ ಮಾಡಿ ಬಳಿಕ ಶವವನ್ನು ಆಸ್ಪತ್ರೆಯ ಮುಂಭಾಗ ಎಸೆದು ಬಂದಿದ್ದರು. ಈ ವಿಡಿಯೋ ವೈರಲ್ ಆಗುತ್ತಿದ್ದಂತೆ, ಏಳು ಜನರ ಮೇಲೆ ಪ್ರಕರಣ ದಾಖಲಿಸಲಾಗಿದೆ. ವ್ಯಕ್ತಿಯೊಬ್ಬ ರಾಡ್​ನಿಂದ ಪದೇ ಪದೇ ಅವರಿಗೆ ಹೊಡೆಯುತ್ತಿರುವ ದೃಶ್ಯವನ್ನು ಆ ವಿಡಿಯೋದಲ್ಲಿ ನೋಡಬಹುದು.

ಪೊಲೀಸರ ಪ್ರಕಾರ, ಮಂಗಳವಾರ ರಾತ್ರಿ ಶಿವಂ ಅವರ ದೇಹವನ್ನು ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಆವರಣದಲ್ಲಿ ಎಸೆದು ಹೋಗಲಾಗಿತ್ತು. ಅವರ ಕುಟುಂಬ ಸದಸ್ಯರಿಗೆ ವಿದ್ಯುತ್ ಶಾಕ್‌ನಿಂದ ಸಾವನ್ನಪ್ಪಿದ್ದಾರೆ ಎಂದು ಹೇಳಿದ್ದರು. ಪೊಲೀಸ್ ಅಧಿಕಾರಿಯೊಬ್ಬರು ಆಸ್ಪತ್ರೆಯಲ್ಲಿ ದೇಹವನ್ನು ಪರೀಕ್ಷಿಸಿದಾಗ, ಅವರು ವಿದ್ಯುದಾಘಾತದಿಂದ ಮೃತಪಟ್ಟಿಲ್ಲ ಅವರ ದೇಹದ ಮೇಲಿನ ಗಾಯಕ್ಕೂ ಇದಕ್ಕೂ ಯಾವುದೇ ಸಾಮ್ಯತೆ ಇಲ್ಲ ಎಂದು ಹೇಳಿ ತನಿಖೆ ಆರಂಭಿಸಿದ್ದರು.

ಮತ್ತಷ್ಟು ಓದಿ: ಮೈಸೂರು: ಬುದ್ದಿ ಮಾಂದ್ಯ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಆರೋಪಿಗೆ ಗ್ರಾಮಸ್ಥರಿಂದ ಥಳಿತ

ಇದುವರೆಗಿನ ತನಿಖೆಯಿಂದ ಶಿವಂ ಕಳೆದ ಏಳು ವರ್ಷಗಳಿಂದ ಸಾರಿಗೆ ಉದ್ಯಮಿ ಬಂಕಿಮ್ ಸೂರಿ ಅವರೊಂದಿಗೆ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ಕಳ್ಳತನದ ಶಂಕೆಯ ಹಲ್ಲೆ ನಡೆಸಲಾಗಿದೆ.

ಕನ್ಹಿಯಾ ಹೊಸೈರಿಯ ಆವರಣದಿಂದ ಕಾರನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಮರಣೋತ್ತರ ಪರೀಕ್ಷೆಯ ವರದಿಯ ಬಳಿಕ ಮತ್ತಷ್ಟು ಮಾಹಿತಿಗಳು ಲಭ್ಯವಾಗಬಹುದು.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Published On - 12:18 pm, Thu, 13 April 23

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us