Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡೆತ್ ನೋಟ್ ಬರೆದಿಟ್ಟು ಮೂಡಿಗೆರೆ ಬಿಇಒ ಕಚೇರಿಯಲ್ಲಿ ಮ್ಯಾನೇಜರ್ ಆತ್ಮಹತ್ಯೆ

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ BEO ಕಚೇರಿಯಲ್ಲಿ ಮ್ಯಾನೇಜರ್ ನಿಂಗನಾಯಕ್(57) ಎಂಬುವವರು ಡೆತ್ ನೋಟ್ ಬರೆದಿಟ್ಟು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಒಂದು ವಾರದ ಹಿಂದಷ್ಟೇ BEO ಕಚೇರಿಯ ಮೇಲೆ ಲೋಕಾಯುಕ್ತ ದಾಳಿ ನಡೆಸಿತ್ತು. ಆಗ ಹತ್ತು ಸಾವಿರ ಹಣ ಪಡೆಯುತ್ತಿದ್ದ BEO ಹೇಮಂತ್ ರಾಜ್ ಸಿಕ್ಕಿಬಿದ್ದಿದ್ದರು.

ಡೆತ್ ನೋಟ್ ಬರೆದಿಟ್ಟು ಮೂಡಿಗೆರೆ ಬಿಇಒ ಕಚೇರಿಯಲ್ಲಿ ಮ್ಯಾನೇಜರ್ ಆತ್ಮಹತ್ಯೆ
ನಿಂಗನಾಯಕ್
Follow us
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Updated By: ಆಯೇಷಾ ಬಾನು

Updated on:Jan 01, 2024 | 12:35 PM

ಚಿಕ್ಕಮಗಳೂರು, ಜ.01: ಮೂಡಿಗೆರೆ ಬಿಇಒ ಕಚೇರಿಯಲ್ಲಿ ಮ್ಯಾನೇಜರ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ BEO ಕಚೇರಿಯಲ್ಲಿ ಮ್ಯಾನೇಜರ್ ನಿಂಗನಾಯಕ್(57) ಎಂಬುವವರು ಡೆತ್ ನೋಟ್ (Death Note) ಬರೆದಿಟ್ಟು ನೇಣು ಹಾಕಿಕೊಂಡು ಆತ್ಮಹತ್ಯೆ (Hanging) ಮಾಡಿಕೊಂಡಿದ್ದಾರೆ. ಕಡೂರು ಮೂಲದ ಮೃತ ನಿಂಗನಾಯಕ್ ಅವರು ಕಳೆದ ಎರಡು ವರ್ಷಗಳಿಂದ ಮೂಡಿಗೆರೆ BEO ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.

ಒಂದು ವಾರದ ಹಿಂದಷ್ಟೇ BEO ಕಚೇರಿಯ ಮೇಲೆ ಲೋಕಾಯುಕ್ತ ದಾಳಿ ನಡೆಸಿತ್ತು. ಆಗ ಹತ್ತು ಸಾವಿರ ಹಣ ಪಡೆಯುತ್ತಿದ್ದ BEO ಹೇಮಂತ್ ರಾಜ್ ಸಿಕ್ಕಿಬಿದ್ದಿದ್ದರು. ಈ ಘಟನೆ ನಡೆದ ವಾರಕ್ಕೆ ನಿಂಗರಾಜ್ ಆತ್ಯಹತ್ಯೆಗೆ ಶರಣಾಗಿದ್ದಾರೆ. ಸದ್ಯ ಮೂಡಿಗೆರೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಡೆತ್​​ನೋಟ್​​ನಲ್ಲಿ ಹಲವು ಅಂಶಗಳ ಬಗ್ಗೆ ಉಲ್ಲೇಖ

ಇನ್ನು ಮೃತ ನಿಂಗನಾಯಕ್ ಅವರು ಬರೆದ ಡೆತ್​ನೋಟ್ ಸಿಕ್ಕಿದ್ದು ಅದರಲ್ಲಿ ಹಲವು ಅಂಶಗಳನ್ನು ಉಲ್ಲೇಖಿಸಿದ್ದಾರೆ. ಕಚೇರಿಯಲ್ಲಿ ಸಿಬ್ಬಂದಿ ಕೊರತೆ, ಕೆಲಸದ ಒತ್ತಡ, ಲೋಕಾಯುಕ್ತ ದಾಳಿಯ ಆತಂಕದ ಬಗ್ಗೆ ಉಲ್ಲೇಖಿಸಲಾಗಿದೆ. ಜೊತೆಗೆ ಕೆಲವರಿಂದ ಲೋಕಾಯುಕ್ತಕ್ಕೆ ದೂರು ನೀಡುವ ಬೆದರಿಕೆ ಬಗ್ಗೆ ಉಲ್ಲೇಖಿಸಿದ್ದಾರೆ. ಮೃತ ನಿಂಗನಾಯಕ್, ನಿನ್ನೆ ಭಾನುವಾರದ ದಿನವೂ ಕಚೇರಿಗೆ ಬಂದು ಕೆಲಸ ಮಾಡಿದ್ದರು. ಮನೆಯಲ್ಲಿ ವಾಕಿಂಗ್ ಹೋಗಿ ಬರುತ್ತೇನೆಂದು ಹೊರ ಬಂದು ಸೀದ ಕಚೇರಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ವಾರದ ಹಿಂದೆ ಕಚೇರಿ ಮೇಲೆ ಲೋಕಾಯುಕ್ತ ದಾಳಿ ನಡೆದಿತ್ತು. ಬಿಇಒ ಹೇಮಂತ್​ ರಾಜ್​ನನ್ನು ಲೋಕಾಯುಕ್ತರು ಪೊಲೀಸರು ಬಂಧಿಸಿದ್ದರು. ದಾಳಿ ವೇಳೆ ನಿಂಗಾನಾಯಕ್ ಬಳಿಯಿದ್ದ ದಾಖಲೆ ಕೂಡ ವಶಕ್ಕೆ ಪಡೆಯಲಾಗಿತ್ತು. ಲೋಕಾಯುಕ್ತ ದಾಳಿ‌ ಬಳಿಕ ಆತಂಕಗೊಂಡಿದ್ದ ನಿಂಗನಾಯಕ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಬೆಂಗಳೂರಿನಲ್ಲಿ BBA ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು

ಇನ್ನು ಮತ್ತೊಂದೆಡೆ ಬೆಂಗಳೂರಿನ ಸುಧಾಮನಗರದಲ್ಲಿ ಕುಟುಂಬದೊಂದಿಗೆ ವಾಸವಿದ್ದ ವರ್ಷಿಣಿ(21) ಎಂಬ ಯುವತಿ ನೇಣುಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಮೃತ ವರ್ಷಿಣಿ ಜಯನಗರದ ಕಮ್ಯೂನಿಟಿ ಕಾಲೇಜಿನಲ್ಲಿ ಬಿಬಿಎ ವ್ಯಾಸಂಗ ಮಾಡುತ್ತಿದ್ದರು. ಯುವತಿ ಮೃತದೇಹ ಮರಣೋತ್ತರ ಪರೀಕ್ಷೆಗಾಗಿ ಕಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ. ವಿಲ್ಸನ್ ಗಾರ್ಡನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಬೆಂಗಳೂರು: 700ಕ್ಕೂ ಹೆಚ್ಚು ಡ್ರಿಂಕ್ ಆ್ಯಂಡ್ ಡ್ರೈವ್ ಪ್ರಕರಣಗಳನ್ನು ದಾಖಲಿಸಿದ ಟ್ರಾಫಿಕ್ ಪೊಲೀಸ್

ಬೈಕ್-ಆಟೋ ಡಿಕ್ಕಿ; ಇಬ್ಬರು ದುರ್ಮರಣ

ಭೀಕರ ಅಪಘಾತಕ್ಕೆ ಇಬ್ಬರು ಬಲಿಯಾಗಿದ್ದಾರೆ. ಬೈಕ್ ಹಾಗೂ ಆಟೋ ನಡುವೆ ಆಪಘಾತ ಸಂಭವಿಸಿದ್ದು ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಚಿತ್ರದುರ್ಗ ತಾಲೂಕಿನ ಹೊಸಲ್ಲಹಳ್ಳಿ ಬಳಿ ಭೀಕರ ಅಪಘಾತ ನಡೆದಿದೆ. ಬೈಕ್ ಹಿಂಬದಿ ಕುಳಿತಿದ್ದ ಶಿಲ್ಪಾ, ಆಟೋದಲ್ಲಿದ್ದ ಬರ್ಕತ್ ಅಲಿ ಉಸಿರು ಚೆಲ್ಲಿದ್ದಾರೆ. ಸವಾರ ಸೇರಿ ಮೂವರು ಗಾಯಗೊಂಡಿದ್ದಾರೆ. ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕಸ ಹಾಕೋ ವಿಚಾರಕ್ಕೆ ಚಾಕು ಇರಿತ

ಕಸ ಹಾವುಕವ ವಿಚಾರಕ್ಕೆ ಗಲಾಟೆ ನಡೆದು ಅಣ್ಣನ ಮಗನ ಮೇಲೆ ಚಿಕ್ಕಪ್ಪ ಚಾಕುವಿನಿಂದ ಹಲ್ಲೆ ಮಾಡಿದ್ದಾನೆ. ಶಿವಮೊಗ್ಗ ತಾಲೂಕಿನ ಮಂಡೇನಕೊಪ್ಪ ಗ್ರಾಮದಲ್ಲಿ ಘಟನೆ ನಡೆದಿದೆ. ಚಿಕ್ಕಪ್ಪ ಉಮೇಶ್, ಅಣ್ಣನ ಮಗ ಆಕಾಶ್​ಗೆ ಚಾಕುವಿನಿಂದ ಇರಿದಿದ್ದಾನೆ. ಆಕಾಶ್ ಸ್ಥಿತಿ ಗಂಭೀರವಾಗಿದ್ದು, ಮೆಗ್ಗಾನ್ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಘಟನೆ ಬಳಿಕ ಪರಾರಿಯಾಗಿದ್ದ ಆರೋಪಿಯನ್ನ ತುಂಗಾ ನಗರ ಪೊಲೀಸರು ಬಂಧಿಸಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 11:00 am, Mon, 1 January 24