AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಡ್ಯ: ಬಾಲಕಿಯ ಕೊಲೆ ಪ್ರಕರಣಕ್ಕೆ ಟ್ವಿಸ್ಟ್; ಅತ್ಯಾಚಾರ ಎಸಗಿ ಕೊಲೆ ಮಾಡಿರುವುದು ಸಾಬೀತು

ಮಂಡ್ಯ ಜಿಲ್ಲೆಯ ಮಳವಳ್ಳಿಯಲ್ಲಿ ನಡೆದ ಬಾಲಕಿ ಕೊಲೆ ಪ್ರಕರಣದ ಸ್ಫೋಟಕ ಮಾಹಿತಿ ಬಹಿರಂಗಗೊಂಡಿದ್ದು, ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿರುವುದು ಮರಣೋತ್ತರ ಪರೀಕ್ಷೆಯಿಂದ ಸಾಬೀತಾಗಿದೆ.

ಮಂಡ್ಯ: ಬಾಲಕಿಯ ಕೊಲೆ ಪ್ರಕರಣಕ್ಕೆ ಟ್ವಿಸ್ಟ್; ಅತ್ಯಾಚಾರ ಎಸಗಿ ಕೊಲೆ ಮಾಡಿರುವುದು ಸಾಬೀತು
ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ (ಫೋಟೋ: ಕೃತ್ಯ ಖಂಡಿಸಿ ಹಾಗೂ ನ್ಯಾಯಕ್ಕಾಗಿ ಪ್ರತಿಭಟನೆ)
TV9 Web
| Edited By: Rakesh Nayak Manchi|

Updated on:Oct 14, 2022 | 11:03 AM

Share

ಮಂಡ್ಯ: ಜಿಲ್ಲೆಯ ಮಳವಳ್ಳಿಯಲ್ಲಿ ನಡೆದ ಬಾಲಕಿ ಕೊಲೆ ಪ್ರಕರಣದ ಸ್ಫೋಟಕ ಮಾಹಿತಿ ಬಹಿರಂಗಗೊಂಡಿದ್ದು, ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿರುವುದು ತಿಳಿದುಬಂದಿದೆ. ಟ್ಯೂಷನ್​ ನೀಡುವ ನೆಪದಲ್ಲಿ ಕರೆಸಿಕೊಂಡ ಕಾಂತರಾಜ್ ಎಂಬಾತ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕತ್ತು ಹಿಸುಕಿ ಕೊಲೆ ಮಾಡಿರುವುದು ಮರಣೋತ್ತರ ಪರೀಕ್ಷೆಯಿಂದ ಬಹಿರಂಗಗೊಂಡಿದೆ. ಆರೋಪಿ ಕಾಂತರಾಜ್ ಬಾಲಕಿಗೆ ಟ್ಯೂಷನ್ ನೀಡುವುದಾಗಿ ಕರೆಸಿಕೊಂಡು ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ. ಬಳಿಕ ಈ ವಿಚಾರ ಬಾಲಕಿಯ ಮನೆಗೆ ತಿಳಿದರೆ ಪರಿಸ್ಥಿತಿ ಬೇರೆಯದ್ದೇ ಆಗುತ್ತದೆ ಎಂಬ ಭಯದಿಂದ ಬಾಲಕಿಯ ತಲೆಗೆ ರಾಡ್​ನಿಂದ ಹೊಡೆದು ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ. ಸ್ಥಳಕ್ಕೆ ಭೇಟಿಕೊಟ್ಟ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದರು. ಇದೀಗ ವರದಿ ಪೊಲೀಸರ ಕೈ ಸೇರಿದ್ದು, ಅತ್ಯಾಚಾರ ಎಸಗಿ ಕೊಲೆ ಮಾಡಿರುವುದು ಸಾಬೀತಾಗಿದೆ. ಸದ್ಯ ಮರಣೋತ್ತರ ಪರೀಕ್ಷೆಯ ವರದಿ ಆದಾರದ ಮೇಲೆ ನ್ಯಾಯಾಲಯ ಅನುಮತಿ ಪಡೆದು ಪೋಕ್ಸೊ ಕಾಯ್ದೆ ದಾಖಲಿಸಿದ ಮಳವಳ್ಳಿ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

ಏನಿದು ಪ್ರಕರಣ?

ಮಂಡ್ಯ ಜಿಲ್ಲೆ ಮಳವಳ್ಳಿ ಪಟ್ಟಣದಲ್ಲಿ ನಿರ್ಮಾಣ ಹಂತದ ಮನೆಯ ಸಂಪ್​ನಲ್ಲಿ ಬಾಲಕಿ ಶವಪತ್ತೆಯಾಗಿತ್ತು. ದಿವ್ಯಾ ಮಧ್ಯಾಹ್ನ ಟ್ಯೂಷನ್​ಗೆ ತೆರಳಿದ್ದಳು. ಎಷ್ಟು ಸಮಯ ಕಳೆದರೂ ಬಾಲಕಿ ಮನೆಗೆ ಬಾರದ ಹಿನ್ನೆಲೆ ಕುಟುಂಬಸ್ಥರು ಹುಡುಕಾಡಿದ್ದಾರೆ. ಈ ವೇಳೆ ಟ್ಯೂಷನ್ ಹಿಂಭಾಗದಲ್ಲಿ ನಿರ್ಮಾಣ ಹಂತದ ಮನೆಯ ಸಂಪ್​​ನಲ್ಲಿ ಬಾಲಕಿ ಶವ ಪತ್ತೆಯಾಗಿತ್ತು. ಸ್ಥಳಕ್ಕೆ ಮಳವಳ್ಳಿ ಟೌನ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಮೃತದೇಹವನ್ನ ಮರಣೋತ್ತರ ಪರೀಕ್ಷೆಗಾಗಿ ಮಿಮ್ಸ್ ಶವಾಗಾರಕ್ಕೆ ರವಾನಿಸಿದ್ದರು. ಇದರ ನಡುವೆ ಬಾಲಕಿಯನ್ನ ಅತ್ಯಾಚಾರವೆಸಗಿ ಕೊಲೆಗೈದಿರುವ ಬಗ್ಗೆ ಪೋಷಕರು ಆರೋಪ ಮಾಡಿದ್ದರು. ಸದ್ಯ ಈಗ ಪೊಲೀಸರ ವಿಚಾರಣೆ ವೇಳೆ ಸತ್ಯ ಬಯಲಾಗಿದೆ.

ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:03 am, Fri, 14 October 22

Follow Us
TV9 Web
TV9 Web

TV9 Kannada

Read More
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ
ಆಟೋದಲ್ಲಿ ಸೋಮನಾಥಪುರ ದೇವಾಲಯಕ್ಕೆ ಬಂದ ರಜನಿಕಾಂತ್
ಆಟೋದಲ್ಲಿ ಸೋಮನಾಥಪುರ ದೇವಾಲಯಕ್ಕೆ ಬಂದ ರಜನಿಕಾಂತ್
ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ ಕಳವು
ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ ಕಳವು