ಮಂಡ್ಯ: ರಸ್ತೆಯಲ್ಲಿ ಹೋಗುತ್ತಿದ್ದ ಒಂಟಿ ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಆರೋಪಿ ಅರೆಸ್ಟ್​​​

| Updated By: ವಿವೇಕ ಬಿರಾದಾರ

Updated on: Nov 30, 2023 | 9:57 AM

ಬೈಕ್​​ನಲ್ಲಿ ಬಂದು ರಸ್ತೆಯಲ್ಲಿ ಹೋಗುತ್ತಿದ್ದ ಒಂಟಿ ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಆರೋಪಿಯನ್ನು ಮಂಡ್ಯ ಪೂರ್ವ ಠಾಣೆ ಪೊಲೀಸರು ಬಂಧಿಸಿದ್ದಾರೆ. ಪೊಲೀಸರು ಸಿಸಿಕ್ಯಾಮರಾ ದೃಶ್ಯಾವಳಿ ಆಧರಿಸಿ ಚಂದ್ರಶೇಖರ್​ನನ್ನು ಬಂಧಿಸಿದ್ದಾರೆ. ಮಂಡ್ಯ ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಂಡ್ಯ: ರಸ್ತೆಯಲ್ಲಿ ಹೋಗುತ್ತಿದ್ದ ಒಂಟಿ ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಆರೋಪಿ ಅರೆಸ್ಟ್​​​
ಚಂದ್ರಶೇಖರ್​ ಬಂಧಿತ ಆರೋಪಿ
Follow us on

ಮಂಡ್ಯ ನ.30: ಬೈಕ್​​ನಲ್ಲಿ (Bike) ಬಂದು ರಸ್ತೆಯಲ್ಲಿ ಹೋಗುತ್ತಿದ್ದ ಒಂಟಿ ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಆರೋಪಿಯನ್ನು ಮಂಡ್ಯ (Mandya) ಪೂರ್ವ ಠಾಣೆ ಪೊಲೀಸರು (Police) ಬಂಧಿಸಿದ್ದಾರೆ. ಕೆರಗೋಡು ಗ್ರಾಮದ ಚಂದ್ರಶೇಖರ್ ಆರಾಧ್ಯ (35)ಬಂಧಿತ ಆರೋಪಿ. ಚಂದ್ರಶೇಖರ ಹೆಲ್ಮೆಟ್ ಧರಿಸಿ ಬೈಕ್​ನಲ್ಲಿ ಬಂದು ರಸ್ತೆಯಲ್ಲಿ ಹೋಗ್ತಿದ್ದ ಒಂಟಿ ಮಹಿಳೆಯರಿಗೆ ಕಿರುಕುಳ‌ ಕೊಡುತ್ತಿದ್ದನು. ಚಂದ್ರಶೇಖರ ಕಳೆದ ಒಂದು ತಿಂಗಳಿಂದ ಹಲವೆಡೆ ವಿಕೃತವಾಗಿ ನಡೆದುಕೊಂಡಿದ್ದನು.

ಬುಧವಾರ (ನ.29)ರ ಸಂಜೆ ರಸ್ತೆಯಲ್ಲಿ ಒಂಟಿಯಾಗಿ ಹೋಗುತ್ತಿದ್ದ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿ ಪರಾರಿಯಾಗಿದ್ದಾನೆ. ಈ ವೇಳೆ ಆರೋಪಿಯ ಬಗ್ಗೆ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸಾರ್ವಜನಿಕರಿಂದ ಮಾಹಿತಿ ಪಡೆದ ಪೊಲೀಸರು ಸಿಸಿಕ್ಯಾಮರಾ ದೃಶ್ಯಾವಳಿ ಆಧರಿಸಿ ಚಂದ್ರಶೇಖರ್​ನನ್ನು ಬಂಧಿಸಿದ್ದಾರೆ. ಮಂಡ್ಯ ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಬೆಂಗಳೂರು ಮೆಟ್ರೋ ರೈಲಿನಲ್ಲಿ ಕಾಲೇಜು ಯುವತಿಗೆ ಲೈಂಗಿಕ ಕಿರುಕುಳ: ಕಿಡಿಗೇಡಿ ಕೃತ್ಯಕ್ಕೆ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ

ವಿಜಯನಗರ: ನಕಲಿ ವೈದ್ಯನ ಬಂಧನ

ವಿಜಯನಗರ: ಕೂಡ್ಲಿಗಿ ತಾಲೂಕಿನ ಶಿವಪುರ ಗ್ರಾಮದಲ್ಲಿ ವೈದ್ಯನೆಂದು ಸುಳ್ಳು ಹೇಳಿ ಕ್ಲಿನಿಕ್​ ನಡೆಸುತ್ತಿದ್ದ ಆರೋಪಿಯನ್ನು ಬಂಧಿಸಲಾಗಿದೆ. ಮಹಮ್ಮದ್ ರಫಿ (50) ಬಂಧಿತ ನಕಲಿ ವೈದ್ಯ. ಮಹಮ್ಮದ್ ರಫಿ ಶಿವಪುರ ಗ್ರಾಮದ ತನ್ನ ಮನೆಯಲ್ಲಿ ಅನಧಿಕೃತವಾಗಿ ಕ್ಲಿನಿಕ್ ನಡೆಸುತ್ತಿದ್ದನು. ಇತನ ವಿರುದ್ಧ ಹಲವು ದೂರುಗಳು ಬಂದಿದ್ದ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಮತ್ತು ಪೊಲೀಸ್ ಇಲಾಖೆಯ ಅಧಿಕಾರಿಗಳು ಜಂಟಿಯಾಗಿ ದಾಳಿ ಮಾಡಿ ಬಂಧಿಸಿದ್ದಾರೆ.

ವಿಜಯನಗರ ಜಿಲ್ಲೆ ಆರೋಗ್ಯ ಅಧಿಕಾರಿ ಡಾ. ಶಂಕರ್ ನಾಯ್ಕ್, ಕೂಡ್ಲಿಗಿ ಸಿಪಿಐ ಸುರೇಶ್ ತಳವಾರ್ ನೇತೃತ್ವದಲ್ಲಿ ದಾಳಿ ಮಾಡಲಾಗಿದೆ. ದಾಳಿಯ ವೇಳೆ ಅನೇಕ ಸಿರಿಂಜ್​ಗಳು, ಮಾತ್ರೆಗಳು, ಸ್ಟೆತಸ್ಕೋಪ್ ಸೇರಿದಂತೆ ಇತರೆ ವೈದ್ಯಕೀಯ ಪರಿಕರಗಳನ್ನು ವಶಕ್ಕೆ ಪಡೆಯಲಾಗಿದೆ. ಕೂಡ್ಲಿಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು  ಇಲ್ಲಿ ಕ್ಲಿಕ್ ಮಾಡಿ

Published On - 9:56 am, Thu, 30 November 23