ಬಸ್ನಲ್ಲಿ ಯುವತಿ ಜೊತೆಗೆ ಅಸಭ್ಯವಾಗಿ ವರ್ತಿಸಿದ ಯುವಕನಿಗೆ ಧರ್ಮದೇಟು
ಮಂಗಳೂರಿನ ಖಾಸಗಿ ಬಸ್ನಲ್ಲಿ ತೆರಳುತ್ತಿದ್ದ ಯುವತಿಯ ಜೊತೆ ಅಸಭ್ಯವಾಗಿ ವರ್ತಿಸಿದ್ದ ಯುವಕನಿಗೆ ಧರ್ಮದೇಟು ನೀಡಿ ಪೋಲಿಸರಿಗೆ ಒಪ್ಪಿಸಲಾಗಿದೆ. ಘಟನೆ ಸಂಬಂಧ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಯುವಕನಿಗೆ ಥಳಿಸಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಮಂಗಳೂರು, ಜೂನ್ 08: ಬಸ್ಸಿನಲ್ಲಿ ಅಸಭ್ಯವಾಗಿ ವರ್ತಿಸಿದ ಯುವಕನಿಗೆ ಯುವತಿಯ (Girl) ಸಂಬಂಧಿಕರು ಧರ್ಮದೇಟು ನೀಡಿರುವ ಘಟನೆ ಮಂಗಳೂರಿನ (Mangaluru) ಬಲ್ಲಾಳ್ ಬಾಗ್ ಎಂಬಲ್ಲಿ ನಡೆದಿದೆ. ಪಾಂಡೇಶ್ವರ ಪೊಲೀಸ್ (Police) ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಯುವತಿ ಮಂಗಳೂರು ನಗರದ ನಾಗೂರಿಯಲ್ಲಿರುವ ಎಸ್ಕೆ ಗ್ರೂಪ್ ಆಫ್ ಕಂಪನಿಯಲ್ಲಿ ಪ್ರೊಡಕ್ಟ್ಗಳನ್ನು ಸೇಲ್ ಮಾಡುವ ಕೆಲಸ ಮಾಡುತ್ತಿದ್ದಾರೆ. ಯುವತಿ ಶುಕ್ರವಾರ (ಜೂ.07) ರಂದು ಬೆಳಗ್ಗೆ 8 ಗಂಟೆ ಸುಮಾರಿಗೆ ನಾಗೂರಿಯಲ್ಲಿರುವ ಕಚೇರಿಗೆ ಹೋಗಿ ಪ್ರೊಡಕ್ಟ್ಗಳನ್ನು ತೆಗೆದುಕೊಂಡಿದ್ದಾಳೆ. ಬಳಿಕ ಪ್ರೊಡಕ್ಟ್ಗಳನ್ನು ಮಾರಾಟ ಮಾಡಲು ನಾಗೂರಿಯಿಂದ ಬಸ್ನಲ್ಲಿ ಹೊರಟು 9 ಗಂಟೆ ಸುಮಾರಿಗೆ ಸ್ಟೇಟ್ ಬ್ಯಾಂಕ್ಗೆ ಬಂದು ಇಳಿದಿದ್ದಾರೆ.
ಇದನ್ನೂ ಓದಿ: ಪ್ರೀತಿಯ ನಾಟಕವಾಡಿ ಹಿಂದೂ ಯುವತಿಯ ಮತಾಂತರ, ಗೋಮಾಂಸ ತಿನ್ನಿಸಿ ಚಿತ್ರಹಿಂಸೆ; ಲವ್ ಜಿಹಾದ್ ಬಯಲು
ನಂತರ ಸ್ಟೇಟ್ ಬ್ಯಾಂಕ್ನಿಂದ ಬಜಪೆ ಕಡೆಗೆ ಹೋಗಲು ಮರೋಳಿ ಎಂಬ ಹೆಸರಿನ ಬಸ್ಸನಲ್ಲಿ 9:10ಕ್ಕೆ ಹತ್ತಿ ನಿರ್ವಾಹಕ ಸೈಡ್ನ ನಾಲ್ಕನೇ ಸೀಟಿನಲ್ಲಿ ಕುಳಿತುಕೊಂಡಿದ್ದಾಳೆ. ಯುವತಿಯನ್ನು ಹಿಂಬಾಲಿಸಿಕೊಂಡು ಬಂದಿದ್ದ ಯುವಕ, ಯುವತಿ ಕೂತಿದ್ದ ಕುಳಿತುಕೊಂಡಿದ್ದ ಹಿಂಬದಿಯ ಸೀಟಿನಲ್ಲಿ ಕೂರುತ್ತಾನೆ. ಬಳಿಕ ಯುವತಿಯ ಸೊಂಟಕ್ಕೆ ಕೈ ಹಾಕಿ ಅಸಭ್ಯವಾಗಿ ವರ್ತಿಸಿದ್ದಾನೆ.
ಬಳಿಕ ಯುವತಿ ಈ ವಿಚಾರವನ್ನು ತನ್ನ ಸಂಬಂಧಿಕರಿಗೆ ತಿಳಿಸಿದ್ದಾಳೆ. ವಿಚಾರ ತಿಳಿದು ಯುವತಿ ಸಂಬಂಧಿಕರು ಬಸ್ಸನ್ನು ಬಲ್ಲಾಳ್ ಬಾಗ್ ಎಂಬಲ್ಲಿ ತಡೆದಿದ್ದಾರೆ. ಬಳಿಕ ಆತನನ್ನು ಬಸ್ನಿಂದ ಕೆಳಗಿಳಿಸಿ ವಿಚಾರಿಸಿ, ಧರ್ಮದೇಟು ನೀಡಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಯುವಕನಿಗೆ ಥಳಿಸಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ