ಬುದ್ಧಿವಂತ ಸಿನಿಮಾ ಮಾದರಿಯಲ್ಲಿ ಮಹಿಳೆಯರ ಸ್ನೇಹ ಬೆಳಸಿ, ಚಿನ್ನಾಭರಣ ದೋಚುತ್ತಿದ್ದ ಆರೋಪಿ ಅರೆಸ್ಟ್​

ಹಲವಾರು ಮಹಿಳೆಯರನ್ನು ತನ್ನ ಪ್ರೇಮದ ಬಲೆಗೆ ಬೀಳಿಸಿಕೊಂಡು, ಅವರ ಜೊತೆ ಸರಸ-ಸಲ್ಲಾಪವಾಡಿ ಕೊನೆಗೆ ಚಿನ್ನಾಭರಣ ದೋಚಿ ಪರಾರಿಯಾಗುತ್ತಿದ್ದ ಆರೋಪಿಯನ್ನು ದಕ್ಷಿಣ ಕನ್ನಡ ಜಿಲ್ಲೆಯ ಕಂಕನಾಡಿ ಪೊಲೀಸರು ಬಂಧಿಸಿದ್ದಾರೆ. ರೋಪಿ ರೋಹಿತ್ ಮಥಾಯೀಸ್ ಬಳಿಯಿಂದ 7 ಲಕ್ಷ ಮೌಲ್ಯದ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ.

ಬುದ್ಧಿವಂತ ಸಿನಿಮಾ ಮಾದರಿಯಲ್ಲಿ ಮಹಿಳೆಯರ ಸ್ನೇಹ ಬೆಳಸಿ, ಚಿನ್ನಾಭರಣ ದೋಚುತ್ತಿದ್ದ ಆರೋಪಿ ಅರೆಸ್ಟ್​
ಆರೋಪಿ ರೋಹಿತ್ ಮಥಾಯೀಸ್​ನನ್ನು ಬಂಧಿಸಿದ ಪೊಲೀಸರು
Follow us
| Updated By: ವಿವೇಕ ಬಿರಾದಾರ

Updated on:Sep 18, 2024 | 1:30 PM

ಮಂಗಳೂರು, ಸೆಪ್ಟೆಂಬರ್​ 17: ರಿಯಲ್​ ಸ್ಟಾರ್ ಉಪೇಂದ್ರ (Upendra) ಅವರ ಜನ್ಮದಿನವಿಂದು. ಅವರು ನಟನೆ ಮಾಡಿರುವ ಬುದ್ಧಿವಂತ (Buddivant) ಸಿನಿಮಾ ಸಾಕಷ್ಟು ಜನಪ್ರಿಯತೆ ಗಳಿಸಿದೆ. ಬುದ್ಧಿವಂತ ಸಿನಿಮಾದಲ್ಲಿ ನಟ ಉಪೇಂದ್ರ ಅವರು ನಿರ್ವಹಿಸಿದ ಪಾತ್ರಗಳ ರೀತಿಯಲ್ಲೇ ನಿಜ ​ಜೀವನದಲ್ಲಿ ನಡೆದಿದೆ. ಹೌದು, ಹಲವಾರು ಮಹಿಳೆಯರನ್ನು ತನ್ನ ಪ್ರೇಮದ ಬಲೆಗೆ ಬೀಳಿಸಿಕೊಂಡು, ಅವರ ಜೊತೆ ಸರಸ-ಸಲ್ಲಾಪವಾಡಿ ಕೊನೆಗೆ ಚಿನ್ನಾಭರಣ ದೋಚಿ ಪರಾರಿಯಾಗುತ್ತಿದ್ದ ಆರೋಪಿಯನ್ನು ಮಂಗಳೂರಿನ (Mangaluru) ಕಂಕನಾಡಿ ಪೊಲೀಸರು (Kankanvadi Police) ಬಂಧಿಸಿದ್ದಾರೆ. ಉಡುಪಿ ಜಿಲ್ಲೆ ಕಾರ್ಕಳ ನಿವಾಸಿ ನಟೋರಿಯಸ್ ಕಳ್ಳ ರೋಹಿತ್ ಮಥಾಯೀಸ್ ಬಂಧಿತ ಆರೋಪಿ.

ಆರೋಪಿ ರೋಹಿತ್ ಮಥಾಯೀಸ್ ಸಾಮಾಜಿಕ ಜಾಲತಾಣದ ಮೂಲಕ ಮಂಗಳೂರು-ಉಡುಪಿ ಭಾಗದ ಕ್ರಿಸ್ಚಿಯನ್ ಸಮುದಾಯಕ್ಕೆ ಸೇರಿದ ಅಂದವಾದ ಶ್ರೀಮಂತ ಮಹಿಳೆಯರನ್ನು ಪರಿಚಯ ಮಾಡಿಕೊಳ್ಳುತ್ತಿದ್ದನು. ಅವರ ಜೊತೆ ನಿತ್ಯ ಸಂಪರ್ಕದಲ್ಲಿ ಇರುತ್ತಿದ್ದನು. ಅವರೊಂದಿಗೆ ಚಾಟ್​ ಮಾಡುತ್ತ ಮೋಡಿ ಮಾಡುತ್ತಿದ್ದನು. ಮೊದಲಿಗೆ ಅವರೊಂದಿಗೆ ಗಾಢವಾದ ಸ್ನೇಹ ಬೆಳಸುತ್ತಿದ್ದನು. ದಿನಗಳು ಕಳೆದಂತೆ ಮಹಿಳೆಯರನ್ನು ತನ್ನ ಪ್ರೀತಿಯೆಂಬ ನಾಟಕದ ಬಲೆಗೆ ಬೀಳಿಸಿಕೊಳ್ಳುತ್ತಿದ್ದನು.

ಬಳಿಕ ಅವರ ಮನೆಯ ವಿಳಾಸ ಪಡೆದು, ಹೋಗಿ-ಬಂದು ಮಾಡುತ್ತಿದ್ದನು. ನಂತರ ಅವರ ಜೊತೆ ಸರಸ ಸಲ್ಲಾಪವಾಡುತ್ತಿದ್ದನು. ಕೊನೆಗೆ ಅವರ ಮನೆಯಲ್ಲಿನ ಚಿನ್ನ ದೋಚಿ ಪರಾರಿಯಾಗುತ್ತಿದ್ದನು.

ಇದನ್ನೂ ಓದಿ: ಮುಂಬೈ ಕ್ರೈಂ ಬ್ರ್ಯಾಂಚ್​ ಪೊಲೀಸ್​ ಹೆಸರಿನಲ್ಲಿ ವಿಜಯಪುರದ ಯುವಕನಿಗೆ ವಿಡಿಯೋ ಕಾಲ್​: ವಂಚನೆಗೆ ಯತ್ನ

ಆರೋಪಿ ರೋಹಿತ್ ಮಥಾಯೀಸ್ ಇತರರೊಂದಿಗೆ ಸೇರಿಕೊಂಡು 2019ರಲ್ಲಿ ನಿವೃತ್ತ ಪಿಡಿಓ ಭರತಲಕ್ಷ್ಮಿ ಹಣ ಮತ್ತು ಚಿನ್ನಾಭರಣ ದೋಚಿದ್ದನು. ಬಳಿಕ ಅವರನ್ನು ಬೆಳ್ಮಣ ಗ್ರಾಮದಲ್ಲಿನ ಮನೆಯಲ್ಲಿ ಕೊಲೆ ಮಾಡಿ, ಅವರ ಮೃತ ದೇಹವನ್ನು ಕಲ್ಯಾದ ಬಾವಿಯೊಂದರಲ್ಲಿ ಪ್ಲಾಸ್ಟಿಕ್​ನಲ್ಲಿ ಸುತ್ತಿ ಎಸೆದು ಹೋಗಿದ್ದನು. ಈ ಪ್ರಕರಣದಲ್ಲಿ ಆರೋಪಿ ರೋಹಿತ್ ಮಥಾಯೀಸ್​ನನ್ನು ಪೊಲೀಸರು ಬಂಧಿಸಿದ್ದರು. ಆರೋಪಿ ರೋಹಿತ್ ಮಥಾಯೀಸ್ ಜೈಲುವಾಸ ಅನುಭವಿಸಿ, ನಂತರ ಪ್ರಕರಣದ ವಿಚಾರಣೆಗೆ ಸಿಗದೇ ಎರಡು ವರ್ಷಗಳಿಂದ ತಲೆಮರೆಸಿಕೊಂಡಿದ್ದನು.

ಮತ್ತೆ 2021ರಲ್ಲಿ ಕಂಕನಾಡಿಯ ಮಹಿಳೆಯೋರ್ವರ ಮನೆಯಿಂದ ಕಳ್ಳತನ ಮಾಡಿ ಪರಾರಿಯಾಗಿದ್ದನು. ಮತ್ತೆ ಇದೇ ರೀತಿ ಕೃತ್ಯ ಎಸಗಲು ಮುಂದಾದಾಗ ಮಾಹಿತಿ ತಿಳಿದ ಕಂಕನಾಡಿ ನಗರ ಪೊಲೀಸರು ಆರೋಪಿ ರೋಹಿತ್ ಮಥಾಯೀಸ್​ನನ್ನು ವಶಕ್ಕೆ ಪಡೆದಿದ್ದಾರೆ. ಆರೋಪಿ ರೋಹಿತ್ ಮಥಾಯೀಸ್ ಬಳಿಯಿಂದ 7 ಲಕ್ಷ ಮೌಲ್ಯದ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ.

ಮಹಿಳೆಯ ಜೊತೆ ಸೇರಿ ಖೆಡ್ಡಾ ತೋಡಿದ್ದ ಪೊಲೀಸರು

ಆರೋಪಿ ರೋಹಿತ್ ಮಥಾಯೀಸ್ ಸಾಮಾಜಿಕ ಜಾಲತಾಣದ ಮೂಲಕ ಇಸ್ರೇಲ್​ನಲ್ಲಿ ವಾಸವಿದ್ದ ಮಹಿಳೆಯನ್ನು ತನ್ನ ಬಲೆಗೆ ಬೀಳಿಸಿಕೊಂಡಿದ್ದನು. ಈತನ ಜೊತೆ ಲಿವಿಂಗ್​ ಟುಗೆದರ್​ನಲ್ಲಿ ಇರಲು ಮಹಿಳೆ ಇಸ್ರೇಲ್ ಬಿಟ್ಟು ಮಂಗಳೂರಿಗೆ ಬಂದಿದ್ದಳು. ಆರೋಪಿ ರೋಹಿತ್ ಮಥಾಯೀಸ್ ಜೊತೆ ಲಿವಿಂಗ್​ ಟುಗೆದರ್ ಇರಲು ನಿರ್ಧರಿಸಿರುವ ಬಗ್ಗೆ ಮಹಿಳೆ ತನ್ನ ಸ್ನೇಹಿತನಿಗೆ ತಿಳಿಸಿದ್ದಳು. ಮಹಿಳೆಯ ಸ್ನೇಹಿತನಿಗೆ ಆರೋಪಿ ರೋಹಿತ್ ಮಥಾಯೀಸ್ ವಂಚಕ ಎಂದು ಮೊದಲೇ ಗೊತ್ತಿತ್ತು.

ಬಳಿಕ, ಈ ವಿಚಾರವನ್ನು ಮಹಿಳೆಗೆ ತಿಳಿಸಿ, ನಂತರ ಪೊಲೀಸರ ಗಮನಕ್ಕೂ ತಂದಿದ್ದನು. ಈತನನ್ನು ಪೊಲೀಸ್​ ಖೆಡ್ಡಾಕ್ಕೆ ಕೆಡವಲು ಪೊಲೀಸರೊಂದಿಗೆ ಸೇರಿ ಇಸ್ರೇಲ್​ ಮಹಿಳೆ, “ನನ್ನ ಬಳಿ ಇರುವ ಚಿನ್ನವನ್ನು ನಿನಗೆ ಕೊಡುವೆ. ಅದನ್ನು ಅಡಮಾನವಿಟ್ಟು ಹಣ ಕೊಡಿಸು ಎಂದಿದ್ದಾಳೆ” ಇದನ್ನು ನಂಬಿದ ಆರೋಪಿ ರೋಹಿತ್ ಮಥಾಯೀಸ್ ಮಹಿಳೆಯನ್ನು ಭೇಟಿ ಮಾಡಲು ಮಂಗಳೂರಿಗೆ ಬಂದಿದ್ದಾನೆ. ಆಗ ಪೊಲೀಸರು ಆರೋಪಿ ರೋಹಿತ್ ಮಥಾಯೀಸ್ ಅನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 8:36 am, Wed, 18 September 24

ಗದಗ: ಲಂಚದ ಆರೋಪ, ಅಧಿಕಾರಿಗೆ ಸಚಿವ ಎಚ್​ಕೆ ಪಾಟೀಲ್​ ಹಿಗ್ಗಾಮುಗ್ಗಾ ತರಾಟೆ
ಗದಗ: ಲಂಚದ ಆರೋಪ, ಅಧಿಕಾರಿಗೆ ಸಚಿವ ಎಚ್​ಕೆ ಪಾಟೀಲ್​ ಹಿಗ್ಗಾಮುಗ್ಗಾ ತರಾಟೆ
ಪ್ರವಾಹ ಸ್ಥಳದಲ್ಲಿ ಟಿಎಂಸಿ ಶಾಸಕರು, ಸಂಸದರಿದ್ದ ದೋಣಿ ಪಲ್ಟಿ
ಪ್ರವಾಹ ಸ್ಥಳದಲ್ಲಿ ಟಿಎಂಸಿ ಶಾಸಕರು, ಸಂಸದರಿದ್ದ ದೋಣಿ ಪಲ್ಟಿ
ಸಿಎಂ ಸಿದ್ದರಾಮಯ್ಯಗೆ ಧನ್ಯವಾದ ಹೇಳಿದ ದುನಿಯಾ ವಿಜಯ್; ಕಾರಣವೇನು?
ಸಿಎಂ ಸಿದ್ದರಾಮಯ್ಯಗೆ ಧನ್ಯವಾದ ಹೇಳಿದ ದುನಿಯಾ ವಿಜಯ್; ಕಾರಣವೇನು?
ಒಬ್ಬರೇ ಇದ್ದೀರಾ? ಭಯ ಅನಿಸುತ್ತಿದೆಯಾ? ಈ ವೇಳೆ ಜಪಿಸಬೇಕಾದ ನಾಮಗಳು ಇಲ್ಲಿವೆ
ಒಬ್ಬರೇ ಇದ್ದೀರಾ? ಭಯ ಅನಿಸುತ್ತಿದೆಯಾ? ಈ ವೇಳೆ ಜಪಿಸಬೇಕಾದ ನಾಮಗಳು ಇಲ್ಲಿವೆ
ಈ ರಾಶಿಯವರು ಗೊತ್ತಾಗದೇ ಕೆಟ್ಟವರ ಸಹವಾಸವನ್ನು ಮಾಡುವಿರಿ
ಈ ರಾಶಿಯವರು ಗೊತ್ತಾಗದೇ ಕೆಟ್ಟವರ ಸಹವಾಸವನ್ನು ಮಾಡುವಿರಿ
ಚಲಿಸುವಾಗಲೇ ನೀರಿನಲ್ಲಿ ತೇಲಿದ ಕಾರು; ಪ್ರಾಣದ ಹಂಗು ತೊರೆದು ಜನರ ರಕ್ಷಣೆ
ಚಲಿಸುವಾಗಲೇ ನೀರಿನಲ್ಲಿ ತೇಲಿದ ಕಾರು; ಪ್ರಾಣದ ಹಂಗು ತೊರೆದು ಜನರ ರಕ್ಷಣೆ
ಹೃದಯ ವಿದ್ರಾವಕ ಘಟನೆ: ಬೈಕ್‌ನಲ್ಲೇ ತಂದೆಯ ಶವ ಸಾಗಿಸಿದ ಮಕ್ಕಳು
ಹೃದಯ ವಿದ್ರಾವಕ ಘಟನೆ: ಬೈಕ್‌ನಲ್ಲೇ ತಂದೆಯ ಶವ ಸಾಗಿಸಿದ ಮಕ್ಕಳು
ಭಾರತದ ಷೇರುಪೇಟೆ ಇನ್ನೆಷ್ಟು ಬೇಗ ಡಬಲ್ ಆಗುತ್ತೆ?
ಭಾರತದ ಷೇರುಪೇಟೆ ಇನ್ನೆಷ್ಟು ಬೇಗ ಡಬಲ್ ಆಗುತ್ತೆ?
ಸುದ್ದಿಗೋಷ್ಠಿಗೂ ಮುನ್ನ ಸಿಎಂ- ಸಚಿವರುಗಳು ಪಿಸು ಪಿಸು ಮಾತು
ಸುದ್ದಿಗೋಷ್ಠಿಗೂ ಮುನ್ನ ಸಿಎಂ- ಸಚಿವರುಗಳು ಪಿಸು ಪಿಸು ಮಾತು
ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ
ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ