AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರು: SSLC ಪ್ರಿಪರೇಟರಿ ಪರೀಕ್ಷೆ ನಂತರ ನಾಪತ್ತೆಯಾಗಿದ್ದ ನಾಲ್ವರು ನದಿ ಬಳಿ ಶವವಾಗಿ ಪತ್ತೆ

ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರು ತಾಲೂಕಿನ ಸುರತ್ಕಲ್​ ಪಟ್ಟಣದ ವಿದ್ಯಾದಾಯಿನಿ ಪ್ರೌಢಶಾಲೆಯ ನಾಲ್ವರು ವಿದ್ಯಾರ್ಥಿಗಳು ನಿನ್ನೆ SSLC ಪ್ರಿಪರೇಟರಿ ಪರೀಕ್ಷೆ ಬರೆದ ನಂತರ ನಾಪತ್ತೆಯಾಗಿದ್ದರು. ಇದೀಗ ನದಿ ಬಳಿ ಶವವಾಗಿ ಪತ್ತೆಯಾಗಿದ್ದಾರೆ. ಮಕ್ಕಳು ಈಜಲು ಹೋಗಿ ಮೃತಪಟ್ಟಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ.

ಮಂಗಳೂರು: SSLC ಪ್ರಿಪರೇಟರಿ ಪರೀಕ್ಷೆ ನಂತರ ನಾಪತ್ತೆಯಾಗಿದ್ದ ನಾಲ್ವರು ನದಿ ಬಳಿ ಶವವಾಗಿ ಪತ್ತೆ
ಸಾಂದರ್ಭಿಕ ಚಿತ್ರ
ಪೃಥ್ವಿರಾಜ್​ ಬಿ.ಯು. ಮಂಗಳೂರು
| Updated By: ಆಯೇಷಾ ಬಾನು|

Updated on:Feb 28, 2024 | 10:03 AM

Share

ಮಂಗಳೂರು, ಫೆ.28:  SSLC ಪ್ರಿಪರೇಟರಿ ಪರೀಕ್ಷೆ ನಂತರ ನಾಪತ್ತೆಯಾಗಿದ್ದ ನಾಲ್ವರು ವಿದ್ಯಾರ್ಥಿಗಳು ಶವವಾಗಿ (Dead Body) ಪತ್ತೆಯಾಗಿದ್ದಾರೆ. ಮುಲ್ಕಿ ಠಾಣಾ ವ್ಯಾಪ್ತಿಯ ಹಳೆಯಂಗಡಿ ಬಳಿಯ ನದಿಯಲ್ಲಿ ನಾಲ್ವರ ಮೃತದೇಹ ಪತ್ತೆಯಾಗಿದೆ. ಪರೀಕ್ಷೆ ಬರೆದು ಈಜಲು ತೆರಳಿದ್ದ ನಾಲ್ವರು (Students) ನದಿಯಲ್ಲಿ ಮುಳುಗಿ ಮೃತಪಟ್ಟಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಯಶ್ವಿತ್ ಚಂದ್ರಕಾಂತ್, ನಿರೂಪ್, ಅನ್ವಿತ್ ಹಾಗೂ ರಾಘವೇಂದ್ರ ಮೃತ ದುರ್ದೈವಿಗಳು. ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಘಟನೆ ಹಿನ್ನೆಲೆ

ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರು ತಾಲೂಕಿನ ಸುರತ್ಕಲ್​ ಪಟ್ಟಣದ ವಿದ್ಯಾದಾಯಿನಿ ಪ್ರೌಢಶಾಲೆಯಲ್ಲಿ SSLC ಓದುತ್ತಿದ್ದ ವಿದ್ಯಾರ್ಥಿಗಳು ನಿನ್ನೆ SSLC ಇಂಗ್ಲಿಷ್ ಪೂರ್ವಸಿದ್ಧತಾ ಪರೀಕ್ಷೆಗೆ ಹಾಜರಾಗಿದ್ದರು. ಪರೀಕ್ಷೆ ಬರೆದು ಶಾಲೆಯಿಂದ ಹೊರಬಂದ 4 ವಿದ್ಯಾರ್ಥಿಗಳು ನಾಪತ್ತೆಯಾಗಿದ್ದರು. ಎಷ್ಟು ಸಮಯವಾದರೂ ಮಕ್ಕಳು ಮನೆಗೆ ಬರದ ಹಿನ್ನೆಲೆ ಪೋಷಕರು ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಆದರೆ ಈಗ ಹಳೆಯಂಗಡಿ ಬಳಿಯ ನದಿಯಲ್ಲಿ ನಾಲ್ವರ ಶವ ಪತ್ತೆಯಾಗಿದೆ. ಪರೀಕ್ಷೆ ನಂತರ ನದಿಗೆ ಈಜಲು ಹೋಗಿ ವಿದ್ಯಾರ್ಥಿಗಳು ಪ್ರಾಣ ಕಳೆದುಕೊಂಡಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದ್ದು ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

ಇದನ್ನೂ ಓದಿ: ನಾಡಗೀತೆ ವಿವಾದ ಬೆನ್ನಲ್ಲೇ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಾರ್ಯದರ್ಶಿ ವರ್ಗಾವಣೆ

ಈಜಲು ಹೋಗಿದ್ದು 7 ಜನ

ಇನ್ನು ತನಿಖೆ ವೇಳೆ 7 ಎಸ್​ಎಸ್​ಎಲ್​ಸಿ ವಿದ್ಯಾರ್ಥಿಗಳು ಈಜಲು ಹೋಗಿದ್ದು ಪತ್ತೆಯಾಗಿದೆ. ತನಿಖೆ ವೇಳೆ ಸಿಸಿಟಿವಿಯಲ್ಲಿ ವಿಷಯ ಬಯಲಾಗಿದೆ. ಒಬ್ಬನಿಗೆ ಮಾತ್ರ ಈಜು ಗೊತ್ತಿತ್ತು. ಉಳಿದ ಆರು ವಿದ್ಯಾರ್ಥಿಗಳಿಗೆ ಈಜು ಬರ್ತಾ ಇರಲಿಲ್ಲ. ಪರೀಕ್ಷೆ ಬರೆದು ಹಳೆಯಂಗಡಿ ಬಳಿಯ ಫಲ್ಗುಣಿ ನದಿಗೆ ಹೋಗಿದ್ದರು ಎಂದು ತಿಳಿದು ಬಂದಿದೆ.

ದಂಪತಿ, ಪುತ್ರ ಸ್ಥಳದಲ್ಲೇ ಸಾವು

ಬೈಕ್​ಗೆ ಲಾರಿ ಡಿಕ್ಕಿಯಾಗಿದ್ದು ದಂಪತಿ ಮತ್ತು ಪುತ್ರ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಹಾವೇರಿ ಜಿಲ್ಲೆ ಬ್ಯಾಡಗಿ ತಾಲೂಕಿನ ಮೋಟೆಬೆನ್ನೂರು ಬಳಿ ಅಪಘಾತ ಸಂಭವಿಸಿದ್ದು, ಅಪಘಾತದ ನಂತರ ಲಾರಿ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ. ಲಾರಿ ಡಿಕ್ಕಿ ಹೊಡೆದ ರಭಸಕ್ಕೆ ಮೂವರ ದೇಹಗಳು ಛಿದ್ರ ಛಿದ್ರವಾಗಿವೆ. ಸಿಡೇನೂರಿನ ಆಸೀಫ್, ಪತ್ನಿ ಅಫ್ರೀನ್, ಪುತ್ರ ಸಾವನ್ನಪ್ಪಿದ್ದು, 6 ವರ್ಷದ ಪುತ್ರಿ ಸ್ಥಿತಿ ಗಂಭೀರವಾಗಿದ್ದು, ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗ್ತಿದೆ.

ಸಿಸಿಬಿಯಿಂದ ಕುಖ್ಯಾತ ಡ್ರಗ್ ಪೆಡ್ಲರ್ ಅರೆಸ್ಟ್

ಬೆಂಗಳೂರು ಉತ್ತರ ತಾಲೂಕಿನ ದೊಡ್ಡಬ್ಯಾಲದಕೆರೆ ಹಾಗೂ ಗುಣಿಅಗ್ರಾಹಾರದ ಬಳಿ ಸಿಸಿಬಿ ಪೊಲೀಸರು ಕಾರ್ಯಚರಣೆ ನಡೆಸಿ 3ಜನ ಕುಖ್ಯಾತ ಡ್ರಗ್ ಪೆಡ್ಲರ್​ಗಳನ್ನ ಬಂಧಿಸಿದ್ದಾರೆ. ಬಂಧಿತ ಆರೋಪಿಗಳಿಂದ 1ಕೋಟಿ 82ಲಕ್ಷದ MDMA, ಎಕ್ಸ್ ಟೀಸಿ ಪಿಲ್ಸಗಳು, 3ಮೊಬೈಲ್ ಜಪ್ತಿ ಮಾಡಲಾಗಿದೆ. ಪ್ರಕರಣದ ಮತ್ತಿಬ್ಬರು ಕಿಂಗ್​ಪಿನ್​ಗಳಿಗೆ ಶೋಧ ಕಾರ್ಯ ಮುಂದುವರಿದಿದೆ. ಬಿಜಿನೆಸ್ ವೀಸಾದಡಿ ಬೆಂಗಳೂರಿಗೆ ಬಂದು ಕೃತ್ಯ ನಡೆಸುತ್ತಿದ್ರು.

ಅಪರಾಧ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 7:30 am, Wed, 28 February 24

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ