AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರು: ಇಡಿ ಹೆಸರು ಹೇಳಿಕೊಂಡು ದಾಳಿ ಮಾಡಿ 30 ಲಕ್ಷ ರೂ. ದರೋಡೆ

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನಲ್ಲಿ ಉದ್ಯಮಿ ಸುಲೈಮಾನ್ ಹಾಜಿ ಅವರ ಮನೆಯ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳೆಂದು ನಟಿಸಿದ ಖದೀಮರು ದಾಳಿ ಮಾಡಿ 30 ಲಕ್ಷ ರೂಪಾಯಿಗಳನ್ನು ದೋಚಿ ಪರಾರಿಯಾಗಿದ್ದಾರೆ. ಈ ಘಟನೆಯಿಂದಾಗಿ ಪ್ರದೇಶದಲ್ಲಿ ಆತಂಕ ಹೆಚ್ಚಾಗಿದೆ. ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಮಂಗಳೂರು: ಇಡಿ ಹೆಸರು ಹೇಳಿಕೊಂಡು ದಾಳಿ ಮಾಡಿ 30 ಲಕ್ಷ ರೂ. ದರೋಡೆ
ಆರೋಪಿಗಳು ದರೋಡೆ ಮಾಡಿದ ಮನೆ
ಪೃಥ್ವಿರಾಜ್​ ಬಿ.ಯು. ಮಂಗಳೂರು
| Edited By: |

Updated on: Jan 04, 2025 | 11:14 AM

Share

ಮಂಗಳೂರು, ಜನವರಿ 04: ಜಾರಿ ನಿರ್ದೇಶನಾಲಯದ (ED) ಹೆಸರಿನಲ್ಲಿ ಉದ್ಯಮಿ ಮನೆ ಮೇಲೆ ದಾಳಿ ಮಾಡಿದ ಖದೀಮರು 30 ಲಕ್ಷ ರೂ. ಕದ್ದು ಪರಾರಿಯಾಗಿದ್ದಾರೆ. ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಬಂಟ್ವಾಳ ತಾಲೂಕಿನ ಬೋಳಂತೂರು ಸಮೀಪದ ನಾರ್ಶ ಎಂಬಲ್ಲಿ ಘಟನೆ ನಡೆದಿದೆ.

ಸುಲೈಮಾನ್ ಹಾಜಿ ಎಂಬುವರು ಸಿಂಗಾರಿ ಬೀಡಿ ಎಂಬ ಹೆಸರಿನ ಸಂಸ್ಥೆಯನ್ನು ಅನೇಕ ವರ್ಷಗಳಿಂದ ನಡೆಸುತ್ತಿದ್ದಾರೆ. ತಡರಾತ್ರಿ ತಮಿಳುನಾಡು ಮೂಲದ ಖದೀಮರ ತಂಡ ಸುಲೈಮಾನ್ ಹಾಜಿ ಅವರ ಮನೆಗೆ ಕಾರ್​ನಲ್ಲಿ ಆಗಮಿಸಿದೆ. ನಾವು ಇಡಿ ಅಧಿಕಾರಿಗಳು ಎಂದು ಸುಲೈಮಾನ್ ಹಾಜಿ ಅವರನ್ನು ನಂಬಿಸಿ ಸುಮಾರು ಎರಡು ಗಂಟೆಗಳವರೆಗೆ ಮನೆಯಲ್ಲ ಪರಿಶೀಲಿಸಿದ್ದಾರೆ. ಕೊನೆಗೆ ಮನೆಯಲ್ಲಿದ್ದ ಸುಮಾರು 30 ಲಕ್ಷ ರೂ. ದೋಚಿ ಪರಾರಿಯಾಗಿದ್ದಾರೆ.

ವಿಟ್ಲ ಪೋಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಸ್ಥಳಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಯತೀಶ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ವಿಟ್ಲ ಪೊಲೀಸ್ ಠಾಣೆಯಲ್ಲಿ ದರೋಡೆ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಸೈಬರ್ ವಂಚಕರಿಗೆ ಭಾರತದಿಂದ 500ಕ್ಕೂ ಹೆಚ್ಚು ಸಿಮ್ ಪೂರೈಸಿದ್ದ ಆರೋಪಿ ಬಂಧನ

ತೋಟದ ಮನೆಗೆ ನುಗ್ಗಿ ದರೋಡೆ

ವೃದ್ದ ದಂಪತಿ ಇದ್ದ ತೋಟದ ಮನೆಗೆ ನುಗ್ಗಿ ದರೋಡೆ ಘಟನೆ ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ದೊಡ್ಡಮಧುರೆ ಗ್ರಾಮದಲ್ಲಿ ನಡೆದಿದೆ. ವೃದ್ದ ದಂಪತಿಗಳಿದ್ದ ತೋಟದ ಮನೆಯನ್ನು ಟಾರ್ಗೆಟ್ ಮಾಡಿತ್ತು. ಮೊಲ ಹಿಡಿಯುವ ನೆಪದಲ್ಲಿ ಕಳ್ಳರ ಗ್ಯಾಂಗ್ ಶುಕ್ರವಾರ ತೋಟಕ್ಕೆ ಬಂದಿತ್ತು. ರಾತ್ರಿ ನಿವಾಸದೊಳಗೆ ನುಗ್ಗಿದೆ.

ಮನೆಯಲ್ಲಿದ್ದ ಚನ್ನೇಗೌಡ (75) ಅವರ ಮೇಲೆ ಹಲ್ಲೆ ಮಾಡಿ, ಬಳಿಕ ಒಡವೆ, ಮೊಬೈಲ್, ಹಣ ದೋಚಿ ದರೋಡೆಕೂರರು ಪರಾರಿಯಾಗಿದ್ದಾರೆ. ದರೋಡೆಕೋರರು ಸುಮಾರು ಎರಡು ಲಕ್ಷ ಮೌಲ್ಯದ ಒಡವೆ ಮತ್ತು ಹಣ ದೋಚಿರುವ ಶಂಕೆ ವ್ಯಕ್ತವಾಗಿದೆ.

ಗಾಯಗೊಂಡ ಚನ್ನೆಗೌಡ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ದರೋಡೆ ಸುದ್ದಿ ತಿಳಿದು ದೊಡ್ಡಮಧುರೆ ಗ್ರಾಮದ ಜನರಲ್ಲಿ ಆತಂಕ ಮೂಡಿದೆ. ಘಟನಾ ಸ್ಥಳಕ್ಕೆ ಅಮೃತೂರು ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಮೃತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು