AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಂಟ್ವಾಳ: ಕಾಡಿಗೆ ವ್ಯಾಪಿಸಿದ್ದ ಬೆಂಕಿಯನ್ನು ನಂದಿಸಲು ಮುಂದಾಗಿದ್ದ ದಂಪತಿ ಸಾವು

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಅಮ್ಟಾಡಿ‌ ಬಳಿಯ ತುಂಡು ಪದವು ಎಂಬಲ್ಲಿ ಮನೆ ಪಕ್ಕದ ಕಸಕ್ಕೆ ಹಾಕಿದ್ದ ಬೆಂಕಿಗೆ ಸಿಲುಕಿ ವೃದ್ಧ ದಂಪತಿ ದುರ್ಮರಣ ಹೊಂದಿರುವಂತಹ ಘಟನೆ ನಡೆದಿದೆ. ಕಾಡಿಗೆ ವ್ಯಾಪಿಸಿದ್ದ ಬೆಂಕಿಯನ್ನು ನಂದಿಸಲು ಮುಂದಾಗಿದ್ದಾಗ ಅವಘಡ ಸಂಭವಿಸಿದೆ. ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ. 

ಬಂಟ್ವಾಳ: ಕಾಡಿಗೆ ವ್ಯಾಪಿಸಿದ್ದ ಬೆಂಕಿಯನ್ನು ನಂದಿಸಲು ಮುಂದಾಗಿದ್ದ ದಂಪತಿ ಸಾವು
ಪ್ರಾತಿನಿಧಿಕ ಚಿತ್ರ
ಪೃಥ್ವಿರಾಜ್​ ಬಿ.ಯು. ಮಂಗಳೂರು
| Edited By: |

Updated on: Jan 28, 2024 | 5:42 PM

Share

ಮಂಗಳೂರು, ಜನವರಿ 28: ಮನೆ ಪಕ್ಕದ ಕಸಕ್ಕೆ ಹಾಕಿದ್ದ ಬೆಂಕಿಗೆ (fire) ಸಿಲುಕಿ ವೃದ್ಧ ದಂಪತಿ ದುರ್ಮರಣ ಹೊಂದಿರುವಂತಹ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಅಮ್ಟಾಡಿ‌ ಬಳಿಯ ತುಂಡು ಪದವು ಎಂಬಲ್ಲಿ ನಡೆದಿದೆ. ಗಿಲ್ಬರ್ಟ್ ಕಾರ್ಲೋ(78) ಪತ್ನಿ ಕ್ರಿಸ್ಟಿನಾ ಕಾರ್ಲೋ(70) ಮೃತ ದುರ್ದೈವಿಗಳು. ಮನೆ ಪಕ್ಕದ ಕಸ ಕಡ್ಡಿಗೆ ದಂಪತಿ ಬೆಂಕಿ‌ ಹಾಕಿದ್ದರು. ಮನೆ ಪಕ್ಕದ ಕಾಡಿಗೂ ಬೆಂಕಿಯ ಕೆನ್ನಾಲಿಗೆ ವ್ಯಾಪಿಸಿಕೊಂಡಿದೆ. ಹಾಗಾಗಿ ಬೆಂಕಿಯನ್ನು ನಂದಿಸಲು ದಂಪತಿ ಮುಂದಾಗಿದ್ದಾರೆ. ಈ ವೇಳೆ ಬೆಂಕಿಯ ಕೆನ್ನಾಲಿಗೆಗೆ ಸಿಲುಕಿದ ದಂಪತಿ ಸುಟ್ಟು ಕರಕಲಾಗಿದ್ದಾರೆ. ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ನಂದಿಗಿರಿಧಾಮದಲ್ಲಿ ಕೊಳೆತ ಸ್ಥಿತಿಯಲ್ಲಿ ಯುವಕನ ಶವ ಪತ್ತೆ

ಚಿಕ್ಕಬಳ್ಳಾಫುರ: ನಂದಿಗಿರಿಧಾಮದಲ್ಲಿ ಕೊಳೆತ ಸ್ಥಿತಿಯಲ್ಲಿ ಯುವಕನ ಶವ ಪತ್ತೆ ಆಗಿದೆ. ಜಿಲ್ಲೆಯ ಚಿಂತಾಮಣಿ ತಾಲ್ಲೂಕಿನ ಬ್ಯಾಲಹಳ್ಳಿ ಗ್ರಾಮದ ನಾರಾಯಣಸ್ವಾಮಿ (37) ಎಂದು ಪತ್ತೆ ಹಚ್ಚಲಾಗಿದೆ. ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಹೇಳಿ ಹೋಗಿದ್ದ. ಚಿಕ್ಕಬಳ್ಳಾಫುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಯುವಕ ನಾಪತ್ತೆ ಪ್ರಕರಣ ದಾಖಲಾಗಿತ್ತು. ಸ್ಥಳಕ್ಕೆ ನಂದಿಗಿರಿಧಾಮ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ನಿಯಂತ್ರಣ ತಪ್ಪಿ ಡಿವೈಡರ್​ಗೆ ಬೈಕ್ ಡಿಕ್ಕಿ: ಸವಾರ ಮೃತ

ನೆಲಮಂಗಲ: ನಿಯಂತ್ರಣ ತಪ್ಪಿ ಡಿವೈಡರ್​ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಸಾವನ್ನಪ್ಪಿರುವಂತಹ ಘಟನೆ ಬೆಂಗಳೂರು ಉತ್ತರ ತಾಲೂಕಿನ ಜಿಂದಾಲ್ ಸಿಟಿ ರಾಷ್ಟ್ರೀಯ ಹೆದ್ದಾರಿ 4 ಜಿಂದಾಲ್ ಸಿಟಿ ಬಳಿ ನಡೆದಿದೆ. ನೆಲಮಂಗಲದ ವಾಜರಹಳ್ಳಿಯ ಕಿರಣ್ ಕುಮಾರ್(34) ಮೃತ ಬೈಕ್ ಸವಾರ. ಖಾಸಗಿ ಬ್ಯಾಂಕ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ. ನೆಲಮಂಗಲದಿಂದ ಬೆಂಗಳೂರಿಗೆ ಬರುವ ವೇಳೆ  ಅಪಘಾತ ನಡೆದಿದೆ. ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಸಂಗೊಳ್ಳಿ ರಾಯಣ್ಣ ಪಾತ್ರ ಮಾಡಲು ಹೋಗಿದ್ದ ಬಾಲಕ ಶವವಾಗಿ ಪತ್ತೆ

ಧಾರವಾಡ: ಸಂಗೊಳ್ಳಿ ರಾಯಣ್ಣ ಪಾತ್ರ ಮಾಡಲು ಹೋಗಿದ್ದ ಬಾಲಕ ಶವವಾಗಿ ಪತ್ತೆಯಾಗಿರುವಂತಹ ಘಟನೆ ಜಿಲ್ಲೆಯ ಕುಂದಗೋಳ ತಾಲೂಕಿನ ಸಂಶಿ ಗ್ರಾಮದ ಕೆರೆಯಲ್ಲಿ ನಡೆದಿದೆ. 10 ವರ್ಷದ ಮನೋಜ್ ಪೂಜಾರ್ ಶವ ಪತ್ತೆ ಆಗಿದೆ. ಗಣರಾಜ್ಯೋತ್ಸವ ದಿನಾಚರಣೆ ಅಂಗವಾಗಿ‌ ಸಂಗೊಳ್ಳಿ ರಾಯಣ್ಣ ಪಾತ್ರ ಮಾಡಿದ್ದ.

ಇದನ್ನೂ ಓದಿ: ಬೆಂಗಳೂರಿನಲ್ಲಿ ರೌಡಿಶೀಟರ್ ಬರ್ಬರ ಹತ್ಯೆ; ಲಾಂಗ್​​​ನಿಂದ ಹೊಡೆದು ಕೊಲೆ

ಶಾಲೆಯಲ್ಲಿ ಪಾತ್ರ ಮುಗಿಸಿ ಕಳೆದ ಎರಡು ದಿನಗಳಿಂದ ಕಾಣೆಯಾಗಿದ್ದ. ಮನೆಯಲ್ಲಿ ಎರಡು ದಿನ ಹುಡಕಾಡಿದರು ಮನೋಜ್ ಸುಳಿವು ಸಿಕ್ಕಿರಲಿಲ್ಲ. ಇಂದು ಕರೆಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ. ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ಭೇಟಿ‌ ನೀಡಿದ್ದು, ಕುಂದಗೋಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಕಂಡುಬಂದಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಸುದೀಪ್ ಹೇಳಿಕೆಗೆ ಟಾಂಗ್ ಕೊಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಹೇಳಿದ್ದೇನು?
ಸುದೀಪ್ ಹೇಳಿಕೆಗೆ ಟಾಂಗ್ ಕೊಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಹೇಳಿದ್ದೇನು?
ಗೃಹಲಕ್ಷ್ಮೀಯರಿಗೆ ಗುಡ್​ನ್ಯೂಸ್: ಸದ್ಯದಲ್ಲೇ ನಿಮ್ ಅಕೌಂಟ್​​ ಲಕ್ಷ್ಮೀ!
ಗೃಹಲಕ್ಷ್ಮೀಯರಿಗೆ ಗುಡ್​ನ್ಯೂಸ್: ಸದ್ಯದಲ್ಲೇ ನಿಮ್ ಅಕೌಂಟ್​​ ಲಕ್ಷ್ಮೀ!
ಪಿಚ್ ಮಧ್ಯದಲ್ಲೇ ಪಾಕ್ ವೇಗಿಗೆ ವಾರ್ನಿಂಗ್ ಕೊಟ್ಟ ವೈಭವ್; ವಿಡಿಯೋ
ಪಿಚ್ ಮಧ್ಯದಲ್ಲೇ ಪಾಕ್ ವೇಗಿಗೆ ವಾರ್ನಿಂಗ್ ಕೊಟ್ಟ ವೈಭವ್; ವಿಡಿಯೋ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ