ಮಂಗಳೂರು, ಜನವರಿ 28: ಮನೆ ಪಕ್ಕದ ಕಸಕ್ಕೆ ಹಾಕಿದ್ದ ಬೆಂಕಿಗೆ (fire) ಸಿಲುಕಿ ವೃದ್ಧ ದಂಪತಿ ದುರ್ಮರಣ ಹೊಂದಿರುವಂತಹ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಅಮ್ಟಾಡಿ ಬಳಿಯ ತುಂಡು ಪದವು ಎಂಬಲ್ಲಿ ನಡೆದಿದೆ. ಗಿಲ್ಬರ್ಟ್ ಕಾರ್ಲೋ(78) ಪತ್ನಿ ಕ್ರಿಸ್ಟಿನಾ ಕಾರ್ಲೋ(70) ಮೃತ ದುರ್ದೈವಿಗಳು. ಮನೆ ಪಕ್ಕದ ಕಸ ಕಡ್ಡಿಗೆ ದಂಪತಿ ಬೆಂಕಿ ಹಾಕಿದ್ದರು. ಮನೆ ಪಕ್ಕದ ಕಾಡಿಗೂ ಬೆಂಕಿಯ ಕೆನ್ನಾಲಿಗೆ ವ್ಯಾಪಿಸಿಕೊಂಡಿದೆ. ಹಾಗಾಗಿ ಬೆಂಕಿಯನ್ನು ನಂದಿಸಲು ದಂಪತಿ ಮುಂದಾಗಿದ್ದಾರೆ. ಈ ವೇಳೆ ಬೆಂಕಿಯ ಕೆನ್ನಾಲಿಗೆಗೆ ಸಿಲುಕಿದ ದಂಪತಿ ಸುಟ್ಟು ಕರಕಲಾಗಿದ್ದಾರೆ. ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
ಚಿಕ್ಕಬಳ್ಳಾಫುರ: ನಂದಿಗಿರಿಧಾಮದಲ್ಲಿ ಕೊಳೆತ ಸ್ಥಿತಿಯಲ್ಲಿ ಯುವಕನ ಶವ ಪತ್ತೆ ಆಗಿದೆ. ಜಿಲ್ಲೆಯ ಚಿಂತಾಮಣಿ ತಾಲ್ಲೂಕಿನ ಬ್ಯಾಲಹಳ್ಳಿ ಗ್ರಾಮದ ನಾರಾಯಣಸ್ವಾಮಿ (37) ಎಂದು ಪತ್ತೆ ಹಚ್ಚಲಾಗಿದೆ. ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಹೇಳಿ ಹೋಗಿದ್ದ. ಚಿಕ್ಕಬಳ್ಳಾಫುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಯುವಕ ನಾಪತ್ತೆ ಪ್ರಕರಣ ದಾಖಲಾಗಿತ್ತು. ಸ್ಥಳಕ್ಕೆ ನಂದಿಗಿರಿಧಾಮ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.
ನೆಲಮಂಗಲ: ನಿಯಂತ್ರಣ ತಪ್ಪಿ ಡಿವೈಡರ್ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಸಾವನ್ನಪ್ಪಿರುವಂತಹ ಘಟನೆ ಬೆಂಗಳೂರು ಉತ್ತರ ತಾಲೂಕಿನ ಜಿಂದಾಲ್ ಸಿಟಿ ರಾಷ್ಟ್ರೀಯ ಹೆದ್ದಾರಿ 4 ಜಿಂದಾಲ್ ಸಿಟಿ ಬಳಿ ನಡೆದಿದೆ. ನೆಲಮಂಗಲದ ವಾಜರಹಳ್ಳಿಯ ಕಿರಣ್ ಕುಮಾರ್(34) ಮೃತ ಬೈಕ್ ಸವಾರ. ಖಾಸಗಿ ಬ್ಯಾಂಕ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ. ನೆಲಮಂಗಲದಿಂದ ಬೆಂಗಳೂರಿಗೆ ಬರುವ ವೇಳೆ ಅಪಘಾತ ನಡೆದಿದೆ. ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
ಧಾರವಾಡ: ಸಂಗೊಳ್ಳಿ ರಾಯಣ್ಣ ಪಾತ್ರ ಮಾಡಲು ಹೋಗಿದ್ದ ಬಾಲಕ ಶವವಾಗಿ ಪತ್ತೆಯಾಗಿರುವಂತಹ ಘಟನೆ ಜಿಲ್ಲೆಯ ಕುಂದಗೋಳ ತಾಲೂಕಿನ ಸಂಶಿ ಗ್ರಾಮದ ಕೆರೆಯಲ್ಲಿ ನಡೆದಿದೆ. 10 ವರ್ಷದ ಮನೋಜ್ ಪೂಜಾರ್ ಶವ ಪತ್ತೆ ಆಗಿದೆ. ಗಣರಾಜ್ಯೋತ್ಸವ ದಿನಾಚರಣೆ ಅಂಗವಾಗಿ ಸಂಗೊಳ್ಳಿ ರಾಯಣ್ಣ ಪಾತ್ರ ಮಾಡಿದ್ದ.
ಇದನ್ನೂ ಓದಿ: ಬೆಂಗಳೂರಿನಲ್ಲಿ ರೌಡಿಶೀಟರ್ ಬರ್ಬರ ಹತ್ಯೆ; ಲಾಂಗ್ನಿಂದ ಹೊಡೆದು ಕೊಲೆ
ಶಾಲೆಯಲ್ಲಿ ಪಾತ್ರ ಮುಗಿಸಿ ಕಳೆದ ಎರಡು ದಿನಗಳಿಂದ ಕಾಣೆಯಾಗಿದ್ದ. ಮನೆಯಲ್ಲಿ ಎರಡು ದಿನ ಹುಡಕಾಡಿದರು ಮನೋಜ್ ಸುಳಿವು ಸಿಕ್ಕಿರಲಿಲ್ಲ. ಇಂದು ಕರೆಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ. ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ಭೇಟಿ ನೀಡಿದ್ದು, ಕುಂದಗೋಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಕಂಡುಬಂದಿದೆ.
ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.