Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರು: ಅವಳಿ ಕೊಲೆ ಕೇಸ್​ನಲ್ಲಿ ಮೃತಪಟ್ಟಿದ್ದ ಮಹಿಳೆ ಪತಿ ಹತ್ಯೆಗೆ ಯತ್ನ: ಆಸ್ಪತ್ರೆಗೆ ದಾಖಲು

ಮಂಗಳೂರು(Mangaluru)ಹೊರವಲಯದ ಉಳ್ಳಾಲ ನಗರಸಭೆ ಸಮೀಪದ ಬಾಡಿಗೆ ಮನೆಯಲ್ಲಿ ಇಂದು(ಏ.06) ಮಧ್ಯಾಹ್ನದ ವೇಳೆ ಕರಾವಳಿಯಲ್ಲಿ ಸಂಚಲನ ಸೃಷ್ಟಿಸಿದ್ದ ಪಂಜಿಮೊಗರು ಜೋಡಿ ಕೊಲೆ ಪ್ರಕರಣದಲ್ಲಿ ಸಾವನ್ನಪ್ಪಿದ್ದ ಮಹಿಳೆಯ ಪತಿಯ ಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ.

ಮಂಗಳೂರು: ಅವಳಿ ಕೊಲೆ ಕೇಸ್​ನಲ್ಲಿ ಮೃತಪಟ್ಟಿದ್ದ ಮಹಿಳೆ ಪತಿ ಹತ್ಯೆಗೆ ಯತ್ನ: ಆಸ್ಪತ್ರೆಗೆ ದಾಖಲು
ಚಾಕು ಇರಿತಕ್ಕೊಳಗಾದ ವ್ಯಕ್ತಿ
Follow us
ಪೃಥ್ವಿರಾಜ್​ ಬಿ.ಯು. ಮಂಗಳೂರು
| Updated By: ಕಿರಣ್ ಹನುಮಂತ್​ ಮಾದಾರ್

Updated on:Apr 06, 2024 | 6:58 PM

ದಕ್ಷಿಣ ಕನ್ನಡ, ಏ.06: ಕರಾವಳಿಯಲ್ಲಿ ಸಂಚಲನ ಸೃಷ್ಟಿಸಿದ್ದ ಪಂಜಿಮೊಗರು ಜೋಡಿ ಕೊಲೆ ಪ್ರಕರಣದಲ್ಲಿ ಸಾವನ್ನಪ್ಪಿದ್ದ ಮಹಿಳೆಯ ಪತಿಯ ಹತ್ಯೆಗೆ ಯತ್ನಿಸಿದ ಘಟನೆ ಮಂಗಳೂರು(Mangaluru)ಹೊರವಲಯದ ಉಳ್ಳಾಲ ನಗರಸಭೆ ಸಮೀಪದ ಬಾಡಿಗೆ ಮನೆಯಲ್ಲಿ ಇಂದು(ಏ.06) ಮಧ್ಯಾಹ್ನದ ವೇಳೆ ನಡೆದಿದೆ. ಹಮೀದ್  ಚೂರಿ ಇರಿತಕ್ಕೊಳಗಾದ ವ್ಯಕ್ತಿ. ಗಂಭೀರ ಸ್ಥಿತಿಯಲ್ಲಿದ್ದ ಗಾಯಾಳು ಹಮೀದ್​ನನ್ನು ಕೂಡಲೇ  ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಮಂಗಳೂರಿನ ಖ್ಯಾತ ಈಜುಪಟು ಜಾವೇದ್ ಎಂಬಾತನಿಂದ ಕೃತ್ಯ ಶಂಕೆ

ಇನ್ನು ಪ್ರಕರಣ ದಾಖಲಿಸಿಕೊಂಡ ಉಳ್ಳಾಲ ಪೊಲೀಸರು ಆರೋಪಿಗಾಗಿ ಶೋಧಕಾರ್ಯ ಆರಂಭಿಸಿದ್ದಾರೆ. ಮೇಲ್ನೋಟಕ್ಕೆ ಹಣದ ವಿಚಾರವಾಗಿ ಕೃತ್ಯ ನಡೆದಿರುವ ಬಗ್ಗೆ ಅನುಮಾನ ಮೂಡಿದ್ದು, ಮಂಗಳೂರಿನ ಖ್ಯಾತ ಈಜುಪಟು ಜಾವೇದ್​ ಎಂಬಾತನಿಂದ ಕೃತ್ಯ ನಡೆದ ಶಂಕೆ ವ್ಯಕ್ತವಾಗಿದೆ.

ಇದನ್ನೂ ಓದಿ:ಕೊಲೆ ಯತ್ನ ಪ್ರಕರಣ ಆರೋಪಿ ಪ್ರೈವೇಟ್ ಜೆಟ್​ ಮೂಲಕ ಎಸ್ಕೇಪ್, ಬೆಂಗಳೂರು ಪೊಲೀಸರು ಬರಿಗೈನಲ್ಲಿ ವಾಪಸ್

13 ವರ್ಷದ ಹಿಂದೆ ನಡೆದಿತ್ತು ಪಂಜಿಮೊಗರು ಜೋಡಿ ಕೊಲೆ

ಪಂಜಿಮೊಗರಿನಲ್ಲಿ 2011ರ ಜೂ.28ರಂದು ಮಧ್ಯಾಹ್ನ ಚೂರಿಯಿಂದ ತಿವಿದು ತಾಯಿ ರಜಿಯಾ ಮತ್ತು ಆಕೆಯ ಪುಟ್ಟ ಮಗು ಫಾತಿಮಾ ಜುವಾ ಎಂಬುವವರನ್ನು ಹತ್ಯೆ ಮಾಡಲಾಗಿತ್ತು. ಈ ಘಟನೆ ಕರಾವಳಿಯಲ್ಲಿ ಭಾರೀ ಸಂಚಲನ ಸೃಷ್ಟಿಸಿತ್ತು. ಆದರೆ, ಈ ಘಟನೆ ನಡೆದು 13 ವರ್ಷ ಕಳೆದರೂ ಹತ್ಯೆ ಆರೋಪಿಗಳು ಪತ್ತೆಯಾಗಿಲ್ಲ. ಈ ಕುರಿತು ಸ್ಥಳೀಯ ಪೊಲೀಸರ ಜೊತೆ ಸಿಐಡಿ ತನಿಖೆ ನಡೆದರೂ ಹಂತಕರು ಸಿಕ್ಕಿಲ್ಲ.

ಮೃತ ರಜಿಯಾಳ ಪತಿ, ಸದ್ಯ ಕೊಲೆ ಯತ್ನಕ್ಕೆ ಒಳಗಾದ ಹಮೀದ್ ಪಿ.ಎಂ. ವಿರುದ್ದವೂ ಆರೋಪ ಕೇಳಿ ಬಂದಿತ್ತು. ಪತಿ‌ ಹಮೀದ್ ಮನೆಯಿಂದ ಹೊರ ಹೋದ 30 ನಿಮಿಷದ ಬಳಿಕ ಹತ್ಯೆಯಾಗಿತ್ತು. ಆದರೆ, ಸ್ಥಳೀಯ ಪೊಲೀಸರು ಹಾಗೂ ಸಿಐಡಿ ತನಿಖೆ ವೇಳೆ ಹಮೀದ್ ಕೈವಾಡ ಇಲ್ಲ ಎಂದಾಗಿತ್ತು. ಅಲ್ಲದೇ ಪತಿ ಹಮೀದ್ ಮಂಪರು ಪರೀಕ್ಷೆಗೂ ಆಗ್ರಹಿಸಿದ್ದರು. ಇದೀಗ ಉಳ್ಳಾಲದಲ್ಲಿ ಹಮೀದ್​​ಗೆ ಚೂರಿ ಇರಿದು ಹತ್ಯೆಗೆ ಯತ್ನಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:12 pm, Sat, 6 April 24

ಹೈದರಾಬಾದ್ ಆಟಗಾರರು ತಂಗಿದ್ದ ಹೋಟೆಲ್‌ನಲ್ಲಿ ಅಗ್ನಿ ಅವಘಡ
ಹೈದರಾಬಾದ್ ಆಟಗಾರರು ತಂಗಿದ್ದ ಹೋಟೆಲ್‌ನಲ್ಲಿ ಅಗ್ನಿ ಅವಘಡ
ಜಾತಿ ಗಣತಿ ಅವೈಜ್ಞಾನಿಕವಾಗಿದೆ, ಮತ್ತೊಮ್ಮೆ ಮಾಡಿಸಬೇಕು: ಸ್ವಾಮೀಜಿ
ಜಾತಿ ಗಣತಿ ಅವೈಜ್ಞಾನಿಕವಾಗಿದೆ, ಮತ್ತೊಮ್ಮೆ ಮಾಡಿಸಬೇಕು: ಸ್ವಾಮೀಜಿ
ಬೃಹತ್ ಜಾತಿ ಗಣತಿ ವರದಿಯನ್ನು ಯಾರೂ ಓದಿದಂತಿಲ್ಲ, ಓದಲು ಸಮಯ ಹಿಡಿಯಲಿದೆ
ಬೃಹತ್ ಜಾತಿ ಗಣತಿ ವರದಿಯನ್ನು ಯಾರೂ ಓದಿದಂತಿಲ್ಲ, ಓದಲು ಸಮಯ ಹಿಡಿಯಲಿದೆ
25 ವರ್ಷಗಳ ಹಿಂದೆಯೇ ಬ್ಯಾಂಕ್ ಜನಾರ್ದನ್​ಗೆ ಹಾರ್ಟ್ ಸಮಸ್ಯೆ: ಸಾಧು ಕೋಕಿಲ
25 ವರ್ಷಗಳ ಹಿಂದೆಯೇ ಬ್ಯಾಂಕ್ ಜನಾರ್ದನ್​ಗೆ ಹಾರ್ಟ್ ಸಮಸ್ಯೆ: ಸಾಧು ಕೋಕಿಲ
ಭಾರತದ ಲೇಸರ್ ವೆಪನ್ ಸಿಸ್ಟಂ ಪ್ರಯೋಗದ ವಿಡಿಯೋ
ಭಾರತದ ಲೇಸರ್ ವೆಪನ್ ಸಿಸ್ಟಂ ಪ್ರಯೋಗದ ವಿಡಿಯೋ
ಕುಮಾರಸ್ವಾಮಿ ಮನೆಗೆ ಲೇಟಾಗಿ ಹೋಗಿದ್ದರೆ ಅವರೇ ಅದಕ್ಕೆ ಜಬಾಬ್ದಾರರು: ಸಚಿವ
ಕುಮಾರಸ್ವಾಮಿ ಮನೆಗೆ ಲೇಟಾಗಿ ಹೋಗಿದ್ದರೆ ಅವರೇ ಅದಕ್ಕೆ ಜಬಾಬ್ದಾರರು: ಸಚಿವ
ಪಬ್ಲಿಕ್​ನಲ್ಲಿ ಮುಸ್ಲಿಂ ಮಹಿಳೆಯ ಹಿಜಾಬ್ ಕಳಚಿದ ಪುರುಷರು
ಪಬ್ಲಿಕ್​ನಲ್ಲಿ ಮುಸ್ಲಿಂ ಮಹಿಳೆಯ ಹಿಜಾಬ್ ಕಳಚಿದ ಪುರುಷರು
ಭಯಾನಕ ವಿಡಿಯೋ: ಜೀಪ್ ರ‍್ಯಾಲಿ ನಡೆಯುವ ವೇಳೆ‌ ಕಾಡಾನೆ ಡೆಡ್ಲಿ ಅಟ್ಯಾಕ್
ಭಯಾನಕ ವಿಡಿಯೋ: ಜೀಪ್ ರ‍್ಯಾಲಿ ನಡೆಯುವ ವೇಳೆ‌ ಕಾಡಾನೆ ಡೆಡ್ಲಿ ಅಟ್ಯಾಕ್
4 ವರ್ಷದ ಪ್ರೀತಿಗೆ ಸಾಕ್ಷಿಯಾದ ಅಂಬೇಡ್ಕರ್ ಜಯಂತಿ: ಪ್ರತಿಮೆ ಎದುರೇ ವಿವಾಹ
4 ವರ್ಷದ ಪ್ರೀತಿಗೆ ಸಾಕ್ಷಿಯಾದ ಅಂಬೇಡ್ಕರ್ ಜಯಂತಿ: ಪ್ರತಿಮೆ ಎದುರೇ ವಿವಾಹ
ಜಾತಿಗಣತಿ ವರದಿ ಬಗ್ಗೆ ಕೇಳಿದರೆ ಸಿಡಿಮಿಡಿಗೊಳ್ಳುವ ಸಿಎಂ ಸಿದ್ದರಾಮಯ್ಯ
ಜಾತಿಗಣತಿ ವರದಿ ಬಗ್ಗೆ ಕೇಳಿದರೆ ಸಿಡಿಮಿಡಿಗೊಳ್ಳುವ ಸಿಎಂ ಸಿದ್ದರಾಮಯ್ಯ