AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ: ಮತ್ತೋರ್ವ ಆರೋಪಿಯನ್ನು ಬಂಧಿಸಿದ NIA

ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹಂತಕರಿಗಾಗಿ ತೀವ್ರ ಶೋಧ ನಡೆಸಿದ್ದ ಎನ್​ಐಎ ತಂಡ ಇದೀಗ ಮತ್ತೋರ್ವ ಆರೋಪಿಯನ್ನು ಬಂಧಿಸಿದೆ.

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ: ಮತ್ತೋರ್ವ ಆರೋಪಿಯನ್ನು ಬಂಧಿಸಿದ NIA
NIA-Praveen Nettaru
TV9 Web
| Edited By: |

Updated on: Nov 12, 2022 | 10:21 PM

Share

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬೆಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ (Praveen Nettaru Murder Case)  ಸಂಬಂಧಿಸಿದಂತೆ ಎನ್​ಐಎ ಅಧಿಕಾರಿಗಳು ಮತ್ತೋರ್ವ ಆರೋಪಿಯನ್ನು ಬಂಧಿಸಿದ್ದಾರೆ. ಬೆಳ್ಳಾರೆ ನಿವಾಸಿ ಶಾಹಿದ್(40) ಬಂಧಿತ ಆರೋಪಿ.

ಬಂಧಿತ ಆರೋಪಿ ಶಾಹಿದ್, SDPI ಮುಖಂಡರಾದ ಶಾಫಿ ಬೆಳ್ಳಾರೆ ಮತ್ತು ಇಕ್ಬಾಲ್ ಬೆಳ್ಳಾರೆಯ ತಂಗಿ ಗಂಡ ಎಂದು ತಿಳಿದುಬಂದಿದೆ. ಸದ್ಯ ಎನ್​ಐಎ ಅಧಿಕಾರಿಗಳು ಆರೋಪಿ ಶಾಹಿದ್​ನನ್ನು ಬೆಂಗಳೂರಿನತ್ತ ಕರೆದುಕೊಂಡು ಹೋಗುತ್ತಿದ್ದಾರೆ ಎಂದು ತಿಳಿದುಬಂದಿದೆ.

ಪ್ರವೀಣ್ ನೆಟ್ಟಾರು ಹಂತಕರಿಗಾಗಿ ಪುತ್ತೂರು, ಸುಳ್ಯದಲ್ಲಿ ಎನ್​ಐಎ ತಂಡದಿಂದ ವ್ಯಾಪಕ ತಲಾಶ್​

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಸಂಬಂಧ ತಲೆಮರೆಸಿಕೊಂಡಿರುವ ಉಳಿದ ಆರೋಪಿಗಳ ಬಂಧನಕ್ಕೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಸುತ್ತಮುತ್ತ ರಾಷ್ಟ್ರೀಯ ತನಿಖಾ ದಳದ (ಎನ್​ಐಎ) ಶೋಧ ಕಾರ್ಯ ನಡೆಸಿತ್ತು. ಪುತ್ತೂರು, ಬೆಳ್ಳಾರೆ, ಸುಳ್ಯದಲ್ಲಿ ಎನ್​ಐಎ ಅಧಿಕಾರಿಗಳ ಒಟ್ಟು ಆರು ತಂಡಗಳಿಂದ ಶೋಧ ಕಾರ್ಯ ಮಾಡಿ, ಸಾರ್ವಜನಿಕರಿಂದ ಮಾಹಿತಿ ಕಲೆ ಹಾಕಿತ್ತು.

ಬಹುಮಾನ ಘೋಷಿಸಿದ ಎನ್​ಐಎ

ನಾಲ್ವರು ಪ್ರಮುಖ ಆರೋಪಿಗಳ ಬಗ್ಗೆ ಮಾಹಿತಿ ನೀಡಿದರೆ ಒಟ್ಟು 14 ಲಕ್ಷ ರೂ. ನಗದು ಬಹುಮಾನ ನೀಡುವಾಗಿ ಘೋಷಿಸಿತ್ತು, ಮೊಹಮ್ಮದ್ ಮುಸ್ತಫಾ ಮತ್ತು ತುಫೈಲ್ ಬಗ್ಗೆ ಮಾಹಿತಿ ನೀಡಿದರೆ 5 ಲಕ್ಷ ರೂ. ಬಹುಮಾನ, ಇನ್ನು ಇಬ್ಬರು ಆರೋಪಿಗಳಾದ ಉಮರ್ ಫಾರೂಕ್‌ ಹಾಗೂ ಅಬೂಬಕರ್ ಸಿದ್ದಿಕ್‌ ಬಗ್ಗೆ ಮಾಹಿತಿ ನೀಡಿದರೆ 2 ಲಕ್ಷ ಬಹುಮಾನ ರೂಪಾಯಿ ನಗದು ಬಹುಮಾನ ನೀಡುವಾಗಿ ಎನ್​ಐಎ ಪ್ರಕಟಣೆಯಲ್ಲಿ ತಿಳಿಸಿತ್ತು.

ಏನಿದು ಪ್ರಕರಣ?

ದಕ್ಷಿಣ ಕನ್ನಡ ಬಿಜೆಪಿ ಯುವ ಮೋರ್ಚಾ ಕಾರ್ಯಕಾರಿಣಿ ಸದಸ್ಯರಾಗಿದ್ದ ಪ್ರವೀಣ್ ನೆಟ್ಟಾರು ಅವರನನ್ನು ಜುಲೈ 26 ರಂದು ಬೆಳ್ಳಾರೆಯಲ್ಲಿರವ ಅವರ ಕೋಳಿ ಅಂಗಡಿ ಬಳಿಯೇ ಹಂತಕರು ಬರ್ಬರವಾಗಿ ಹತ್ಯೆ ಮಾಡಿ ಪರಾರಿಯಾಗಿದ್ದರು. ಇದು ಇಡೀ ರಾಜ್ಯಾದ್ಯಂತ ಕಾರ್ಯಕರ್ತರಲ್ಲಿ ಕಿಚ್ಚು ಹತ್ತಿಸಿತ್ತು. ಇದರ ಬಿಸಿಗೆ ಬಿಜೆಪಿ ರಾಜ್ಯ ಸರ್ಕಾರದ ಬುಡವೇ ಅಲುಗಾಡಿತ್ತು. ನಂತರ ಸರ್ಕಾರ ಈ ಪ್ರಕರಣವನ್ನು ಎನ್​ಐಎ ತನಿಖೆಗೆ ವಹಿಸಿತ್ತು.

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ