Dharmasthala: ಧರ್ಮಸ್ಥಳ ವ್ಯಾಪ್ತಿಯಲ್ಲಿ ಕಳ್ಳರ ಕೈಚಳಕ, ಒಂದೇ ದಿನ 3 ಬೈಕ್ ಕಳವು

Mangaluru Crime News; ಧರ್ಮಸ್ಥಳ ದೇಗುಲಕ್ಕೆ ಆಗಮಿಸಿದ್ದ ಕೊಪ್ಪಳದ ಯಾತ್ರಾರ್ಥಿಯೊಬ್ಬರ ಬೈಕ್ ಸೇರಿದಂತೆ ಧರ್ಮಸ್ಥಳ ಆಸುಪಾಸಿನಲ್ಲಿ ಕೆಲವು ದಿನಗಳ ಹಿಂದೆ ಒಂದೇ ದಿನ ರಾತ್ರಿ 3 ಬೈಕ್ ಕಳವಾದ ಪ್ರಕರಣ ವರದಿಯಾಗಿದೆ. ಒಂದೇ ಕಳ್ಳರ ತಂಡ ಮೂರೂ ಕೃತ್ಯಗಳನ್ನು ಎಸಗಿರುವ ಬಗ್ಗೆ ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ.

Dharmasthala: ಧರ್ಮಸ್ಥಳ ವ್ಯಾಪ್ತಿಯಲ್ಲಿ ಕಳ್ಳರ ಕೈಚಳಕ, ಒಂದೇ ದಿನ 3 ಬೈಕ್ ಕಳವು
ಬೈಕ್ ಕಳವು (ಸಾಂದರ್ಭಿಕ ಚಿತ್ರ)
Follow us
Ganapathi Sharma
|

Updated on: Feb 19, 2024 | 7:29 AM

ಧರ್ಮಸ್ಥಳ, ಫೆಬ್ರವರಿ 19: ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳ (Dharmasthala) ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದೇ ದಿನ ಮೂರು ಬೈಕ್ ಕಳ್ಳತನ (Bike Stolen) ಮಾಡಲಾಗಿದೆ. ಫೆಬ್ರವರಿ 14 ರಂದು ಬುಧವಾರ ರಾತ್ರಿ ಮೂರು ಬೈಕ್‌ಗಳನ್ನು ಕಳವು ಮಾಡಲಾಗಿದ್ದು, ಇದರಲ್ಲಿ ಧರ್ಮಸ್ಥಳ ದೇಗುಲಕ್ಕೆ (Dharmasthala Temple) ಯಾತ್ರಾರ್ಥಿಯಾಗ ಬಂದ ಕೊಪ್ಪಳದ ವ್ಯಕ್ತಿಯೊಬ್ಬರ ಬೈಕ್ ಸಹ ಸೇರಿದೆ. ಇದು ಪ್ರಸಿದ್ಧ ಕ್ಷೇತ್ರ ಧರ್ಮಸ್ಥಳಕ್ಕೆ ಬರುವ ಭಕ್ತರಲ್ಲಿ ಸಹ ಆತಂಕಕ್ಕೆ ಕಾರಣವಾಗಿದೆ. ಜತೆಗೆ, ಧರ್ಮಸ್ಥಳ ಸುತ್ತಮುತ್ತಲ ನಿವಾಸಿಗಳಲ್ಲಿ ಕೂಡ ಭೀತಿಗೆ ಕಾರಣವಾಗಿದೆ.

ಮೊದಲ ಘಟನೆಯಲ್ಲಿ ಧರ್ಮಸ್ಥಳ ಗ್ರಾಮದ ನಿವಾಸಿ ಬೇಬಿ ಎಂಬವರ ಮನೆ ಮುಂದೆ ನಿಲ್ಲಿಸಿದ್ದ ಬೈಕ್ ಕಳ್ಳತನವಾಗಿದೆ. ಬೇಬಿ ಅವರು ಬೆಳಗ್ಗೆ ಎದ್ದು ನೋಡಿದಾಗ ಬೈಕ್ ನಿಲ್ಲಿಸಿದ್ದ ಸ್ಥಳದಿಂದ ಬೈಕ್ ಕಾಣೆಯಾಗಿತ್ತು.

ಎರಡನೇ ಘಟನೆಯಲ್ಲಿ, ಸುಳ್ಯದ ನಿವಾಸಿ ಅಖಿಲೇಶ್ ಎಂಬುವರು ಬೈಕ್ ಕಳೆದುಕೊಂಡಿದ್ದಾರೆ. ಧರ್ಮಸ್ಥಳದ ಗಡಿಭಾಗದ ಕಲ್ಮಂಜ ಗ್ರಾಮದ ಮದ್ಮಾಳ್​ ಕಟ್ಟೆಯಲ್ಲಿರುವ ಸಂಬಂಧಿಕರ ಮನೆಗೆ ಆಗಮಿಸಿದ್ದರು. ಸಂಬಂಧಿಕರ ಮನೆ ಬಳಿ ಬೈಕ್ ನಿಲ್ಲಿಸಿದ್ದರು. ಆದರೆ, ಬೆಳಗ್ಗೆ ಪರಿಶೀಲಿಸಿದಾಗ ಕಾಣೆಯಾಗಿದೆ. ಬೈಕಿನ ಮೌಲ್ಯ 65,000 ರೂಪಾಯಿ ಎಂದು ಅಂದಾಜಿಸಲಾಗಿದೆ.

ಮತ್ತೊಂದು ಘಟನೆಯಲ್ಲಿ ಕೊಪ್ಪಳದಿಂದ ಧರ್ಮಸ್ಥಳಕ್ಕೆ ಆಗಮಿಸಿದ್ದ ಯಾತ್ರಾರ್ಥಿ ಬಸವರಾಜ್ ಎಂಬುವರು ಬೈಕ್ ಕಳೆದುಕೊಂಡಿದ್ದಾರೆ. ಧರ್ಮಸ್ಥಳದ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ಎಟಿಎಂ ಕಿಯೋಸ್ಕ್ ಬಳಿ ಬೈಕ್ ನಿಲ್ಲಿಸಿ ಪಕ್ಕದಲ್ಲೇ ಮಲಗಿದ್ದರು. ಆದರೆ, ಬೆಳಗ್ಗೆ ಎದ್ದು ನೋಡಿದಾಗ ಬೈಕ್ ಕಳ್ಳತನವಾಗಿರುವುದು ಕಂಡು ಬೆಚ್ಚಿಬಿದ್ದಿದ್ದಾರೆ.

ಒಂದೇ ಕಳ್ಳರ ತಂಡವೇ ದಾಳಿ ಮಾಡಿರಬೇಕು ಮತ್ತು ಮೂರು ಬೈಕ್‌ಗಳನ್ನು ಪ್ರತ್ಯೇಕ ಘಟನೆಗಳಲ್ಲಿ ಕಳ್ಳತನ ಮಾಡಿರಬೇಕು ಎಂದು ಪೊಲೀಸರು ಶಂಕಿಸಿರುವುದಾಗಿ ಸ್ಥಳೀಯ ಮಾಧ್ಯಮ ವರದಿ ಮಾಡಿದೆ.

ಇದನ್ನೂ ಓದಿ: ಮಂಗಳೂರು: ಹರೇಕಳದಲ್ಲಿ ಹಾಕಿದ ಟಿಪ್ಪು ಸುಲ್ತಾನ್ ಕಟೌಟ್ ತೆರವಿಗೆ ಪೊಲೀಸರಿಂದ ನೋಟಿಸ್

1 ಲಕ್ಷ ರೂ ಎಗರಿಸಿದ್ದ ಹೋಟೆಲ್ ಕ್ಯಾಷಿಯರ್: ಸಿಸಿಟಿವಿ ದೃಶ್ಯ ಬಯಲು

ಬೆಂಗಳೂರಿನ ಹೋಟೇಲೊಂದರ ಮಾಲೀಕರು ಕ್ಯಾಷ್ ಕೌಂಟರ್​ನಲ್ಲಿಟ್ಟದ್ದ 1 ಲಕ್ಷ ರೂಪಾಯಿ ನಗದು ಕಳವು ಪ್ರಕರಣದ ಸಿಸಿಟಿವಿ ದೃಶ್ಯಾವಳಿ ಪತ್ತೆಯಾಗಿದ್ದು, ಹೋಟೆಲ್ ಕ್ಯಾಷಿಯರ್ ಆಗಿ ಕೆಲಸಕ್ಕೆ ಸೇರಿದ್ದ ವ್ಯಕ್ತಿಯೇ ಕೃತ್ಯ ಎಸಗಿರುವುದು ತಿಳಿದುಬಂದಿದೆ. ಕ್ಯಾಷಿಯರ್ ರವಿಕುಮಾರ್ ಎಂಬಾತನೇ ಕೃತ್ಯ ಎಸಗಿದ್ದಾನೆ. ಆರೋಪಿಯು ಕ್ಯಾಷ್ ಕೌಂಟರ್​ನಲ್ಲಿ ಕುಳಿತುಕೊಂಡೇ ಹಣವನ್ನು ಪ್ಯಾಂಟ್ ಜೇಬಿಗಿಳಿಸುತ್ತಿರುವ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಕಂಡುಬಂದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು
ಹೊಸ ವರ್ಷಕ್ಕೆ ಸಿಹಿ ಸುದ್ದಿ ಕೊಟ್ಟ ಶಿವಣ್ಣ: ವಿಡಿಯೋ ನೋಡಿ
ಹೊಸ ವರ್ಷಕ್ಕೆ ಸಿಹಿ ಸುದ್ದಿ ಕೊಟ್ಟ ಶಿವಣ್ಣ: ವಿಡಿಯೋ ನೋಡಿ
ನ್ಯೂ ಈಯರ್ ರೆವೆಲ್ಲರ್​​ಗಳ ಅಮಲಿನ ಹಾವಭಾವಗಳು ನಗೆ ಹುಟ್ಟಿಸುವಂತಿದ್ದವು!
ನ್ಯೂ ಈಯರ್ ರೆವೆಲ್ಲರ್​​ಗಳ ಅಮಲಿನ ಹಾವಭಾವಗಳು ನಗೆ ಹುಟ್ಟಿಸುವಂತಿದ್ದವು!
ಗುಂಡಿನ ಮತ್ತೇ ಗಮ್ಮತ್ತು, ಗೆಳೆಯ ಹೊತ್ತೊಯ್ಯದಿದ್ದರೆ ಕಾದಿತ್ತು ಆಪತ್ತು
ಗುಂಡಿನ ಮತ್ತೇ ಗಮ್ಮತ್ತು, ಗೆಳೆಯ ಹೊತ್ತೊಯ್ಯದಿದ್ದರೆ ಕಾದಿತ್ತು ಆಪತ್ತು
ಕಂಠಮಟ್ಟ ಕುಡಿದು ರಸ್ತೆಯಲ್ಲಿ ಓಲಾಡುತ್ತಇತರರ ಕಣ್ಣಿಗೆ ಆಹಾರವಾದ ಯುವತಿಯರು
ಕಂಠಮಟ್ಟ ಕುಡಿದು ರಸ್ತೆಯಲ್ಲಿ ಓಲಾಡುತ್ತಇತರರ ಕಣ್ಣಿಗೆ ಆಹಾರವಾದ ಯುವತಿಯರು