ತಿಂಡಿ ಕೊಡಿಸುವ ನೆಪದಲ್ಲಿ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ವ್ಯಕ್ತಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಸಾರ್ವಜನಿಕರು

ಬಾಲಕಿ ತಂದೆಗೆ ಪರಿಚಿತನಾಗಿರುವ ಬಂಧಿತ ಆರೋಪಿಯು ಬಾಲಕಿಯನ್ನು ಮನೆಯಿಂದ ತಿಂಡಿ ಕೊಡಿಸುವ ನೆಪದಲ್ಲಿ ಕರೆತಂದು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಈತನ ಕೃತ್ಯದಿಂದ ಗಾಬರಿಗೊಂಡ ಬಾಲಕಿ ಓಡಿ ತಪ್ಪಿಸಿಕೊಳ್ಳಲು ಯತ್ನಿಸಿ ಕೂಗಿಕೊಂಡಿದ್ದಾಳೆ.

ತಿಂಡಿ ಕೊಡಿಸುವ ನೆಪದಲ್ಲಿ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ವ್ಯಕ್ತಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಸಾರ್ವಜನಿಕರು
ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿ ಆರೀಫ್
Follow us
TV9 Web
| Updated By: Skanda

Updated on: Sep 13, 2021 | 2:57 PM

ಮಂಗಳೂರು: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿಯನ್ನು ಸಾಮಾಜಿಕ ಕಾರ್ಯಕರ್ತರು ಹಾಗೂ ಸಾರ್ವಜನಿಕರು ಸೇರಿ ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಸುಮಾರು ಐದು ವರ್ಷ ಪ್ರಾಯದ ಬಾಲಕಿಗೆ ತಿಂಡಿ ಕೊಡಿಸುವ ನೆಪದಲ್ಲಿ ಕಿರುಕುಳ ನೀಡಿದ ವ್ಯಕ್ತಿಯನ್ನು ಉಳ್ಳಾಲ ಪೊಲೀಸ್​ ಠಾಣೆ ಸಿಬ್ಬಂದಿ ವಶಕ್ಕೆ ಒಪ್ಪಿಸಲಾಗಿದ್ದು, ಆರೋಪಿ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ಬಂಧಿತ ಆರೋಪಿಯನ್ನು ಆರೀಫ್ ಪಾಷಾ (30 ವರ್ಷ) ಎಂದು ಗುರುತಿಸಲಾಗಿದ್ದು, ಮೂಲತಃ ಬೆಂಗಳೂರಿನ ಕಲಾಸಿಪಾಳ್ಯ ನಿವಾಸಿಯಾದ ಆತ ಸದ್ಯ ಮಂಗಳೂರಿನ ಕಲ್ಕಟ್ಟದಲ್ಲಿ ವಾಸಿಸುತ್ತಿದ್ದ ಎಂದು ತಿಳಿದುಬಂದಿದೆ. ಜೀವನ ನಡೆಸಲು ಕೆಲಸ ಅರಸಿ ಬಂದಿದ್ದ ಆರೀಫ್ ಪಾಷಾ ಕೂಲಿ ಕಾರ್ಮಿಕನಾಗಿದ್ದು, ಬಾಲಕಿಯ ತಂದೆಗೆ ಪರಿಚಿತನಾಗಿರುವ ಕಾರಣ ಅದನ್ನೇ ದುರ್ಬಳಕೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ.

ಬಾಲಕಿ ತಂದೆಗೆ ಪರಿಚಿತನಾಗಿರುವ ಬಂಧಿತ ಆರೋಪಿಯು ಬಾಲಕಿಯನ್ನು ಮನೆಯಿಂದ ತಿಂಡಿ ಕೊಡಿಸುವ ನೆಪದಲ್ಲಿ ಕರೆತಂದು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಈತನ ಕೃತ್ಯದಿಂದ ಗಾಬರಿಗೊಂಡ ಬಾಲಕಿ ಓಡಿ ತಪ್ಪಿಸಿಕೊಳ್ಳಲು ಯತ್ನಿಸಿದ್ದಾಳೆ. ಅದೇ ಸಂದರ್ಭ ಆ ದಾರಿಯಲ್ಲಿ ಬರುತ್ತಿದ್ದ ಸಾಮಾಜಿಕ ಕಾರ್ಯಕರ್ತ ತಲಪಾಡಿಯ ಯಶು ಪಕಳ ದಂಪತಿ ಬೈಕ್ ನಿಲ್ಲಿಸಿದ್ದಾರೆ. ಕಾಪಾಡಿ ಕಾಪಾಡಿ ಅನ್ನುತ್ತಿದ್ದ ಬಾಲಕಿಯನ್ನು ಗಮನಿಸಿ ಏನಾಯಿತೆಂದು ಪ್ರಶ್ನಿಸಿದಾಗ ಪುಟ್ಟ ಬಾಲಕಿ ನಡೆದ ಕೃತ್ಯವನ್ನು ವಿವರಿಸಿದ್ದಾಳೆ.

ಬಾಲಕಿ ವಿಷಯ ತಿಳಿಸುತ್ತಿದ್ದಂತೆ ಸ್ಥಳೀಯರಿಗೆ ಮಾಹಿತಿ ನೀಡಿದ ಸಾಮಾಜಿಕ ಕಾರ್ಯಕರ್ತ ಯಶು ಪಕಳ ಅಲ್ಲಿದ್ದವರ ಸಹಕಾರದೊಂದಿಗೆ ಆರೋಪಿ ಆರೀಫ್ ಪಾಷಾನನ್ನು ತಕ್ಷಣ ಹಿಡಿದಿದ್ದಾರೆ. ಬಳಿಕ ಉಳ್ಳಾಲ ಠಾಣಾ ಪೊಲೀಸರಿಗೆ ಮಾಹಿತಿ ನೀಡಿ ಅವರ ವಶಕ್ಕೆ ಆತನನ್ನು ಒಪ್ಪಿಸಿದ್ದಾರೆ. ಸದ್ಯ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಲಾಗಿದೆ.

ಇದನ್ನೂ ಓದಿ: ಫೇಸ್‌ಬುಕ್ ಖಾತೆ ತೆರೆದು ಮಹಿಳೆಯರಿಗೆ ಲೈಂಗಿಕ ಕಿರುಕುಳ: ಬಂಟ್ವಾಳ ಪೊಲೀಸರಿಂದ ಆರೋಪಿಯ ಬಂಧನ 

Crime News: ಕೊಟ್ಟಿಗೆಗೆ ನುಗ್ಗಿ ಹಸುಗಳ ಮೇಲೆ ವ್ಯಕ್ತಿಯಿಂದ ಲೈಂಗಿಕ ದೌರ್ಜನ್ಯ; ಬೇಸತ್ತು ದನಗಳನ್ನೇ ಮಾರುತ್ತಿದ್ದಾರೆ ರೈತರು

(Mangaluru man sexually abused small girl detained by police with the help of public)

ಈ ಕೋತಿ ಚಪಾತಿಯನ್ನೂ ಮಾಡುತ್ತೆ, ಪಾತ್ರೆಯನ್ನೂ ತೊಳೆಯುತ್ತೆ!
ಈ ಕೋತಿ ಚಪಾತಿಯನ್ನೂ ಮಾಡುತ್ತೆ, ಪಾತ್ರೆಯನ್ನೂ ತೊಳೆಯುತ್ತೆ!
ರಜೆಗೆ ಮನೆಗೆ ಹೊರಟಿದ್ದ ಸೈನಿಕ ಕಾಲು ಜಾರಿ ರೈಲಿನಡಿ ಬಿದ್ದು ಸಾವು
ರಜೆಗೆ ಮನೆಗೆ ಹೊರಟಿದ್ದ ಸೈನಿಕ ಕಾಲು ಜಾರಿ ರೈಲಿನಡಿ ಬಿದ್ದು ಸಾವು
ಹೊಸ ವರ್ಷದಂದು ಬೆಂಗಳೂರಿನ ಅಧಿಕಾರಿಗಳಿಗೆ ರಜೆ ಇಲ್ಲ: ಡಿಕೆ ಶಿವಕುಮಾರ್
ಹೊಸ ವರ್ಷದಂದು ಬೆಂಗಳೂರಿನ ಅಧಿಕಾರಿಗಳಿಗೆ ರಜೆ ಇಲ್ಲ: ಡಿಕೆ ಶಿವಕುಮಾರ್
ಈ ಬಾರಿ ಬಿಗ್ ಬಾಸ್ ಟ್ರೋಫಿ ಯಾರಿಗೆ? ಭವಿಷ್ಯ ನುಡಿದ ಐಶ್ವರ್ಯಾ
ಈ ಬಾರಿ ಬಿಗ್ ಬಾಸ್ ಟ್ರೋಫಿ ಯಾರಿಗೆ? ಭವಿಷ್ಯ ನುಡಿದ ಐಶ್ವರ್ಯಾ
ದೋಸೆ ಜೊತೆ ಅವರೇ ಕಾಳಿನ ಹಲವಾರು ತಿಂಡಿಗಳು ಮೇಳದಲ್ಲಿ ಲಭ್ಯ
ದೋಸೆ ಜೊತೆ ಅವರೇ ಕಾಳಿನ ಹಲವಾರು ತಿಂಡಿಗಳು ಮೇಳದಲ್ಲಿ ಲಭ್ಯ
ಹೊಲಗಳಿಗೆ ಕುಟುಂಬವಾಗಿ ತೆರಳಿ ಒಟ್ಟಿಗೆ ಕೂತು ಉಣ್ಣುವುದೇ ಒಂದು ಸಂಭ್ರಮ!
ಹೊಲಗಳಿಗೆ ಕುಟುಂಬವಾಗಿ ತೆರಳಿ ಒಟ್ಟಿಗೆ ಕೂತು ಉಣ್ಣುವುದೇ ಒಂದು ಸಂಭ್ರಮ!
ಬೆಂಗಳೂರು ನಗರದಲ್ಲಿ ಒತ್ತುವರಿ ಮಾಡಿಕೊಳ್ಳುವ ಕಾಯಕ ಎಗ್ಗಿಲ್ಲದೆ ಸಾಗುತ್ತಿದೆ
ಬೆಂಗಳೂರು ನಗರದಲ್ಲಿ ಒತ್ತುವರಿ ಮಾಡಿಕೊಳ್ಳುವ ಕಾಯಕ ಎಗ್ಗಿಲ್ಲದೆ ಸಾಗುತ್ತಿದೆ
ಹಿಮಪಾತದಿಂದ ಮನಾಲಿಯಲ್ಲಿ ಟ್ರಾಫಿಕ್ ಜಾಮ್; ಹಿಮದಲ್ಲೇ ಮುಚ್ಚಿಹೋದ ಕಾರುಗಳು
ಹಿಮಪಾತದಿಂದ ಮನಾಲಿಯಲ್ಲಿ ಟ್ರಾಫಿಕ್ ಜಾಮ್; ಹಿಮದಲ್ಲೇ ಮುಚ್ಚಿಹೋದ ಕಾರುಗಳು
ಮುನಿರತ್ನಗೆ ಒಂದು ನೋಟೀಸ್ ನೀಡುವ ಯೋಗ್ಯತೆ ಬಿಜೆಪಿಗಿಲ್ಲ: ಪ್ರಿಯಾಂಕ್ ಖರ್ಗೆ
ಮುನಿರತ್ನಗೆ ಒಂದು ನೋಟೀಸ್ ನೀಡುವ ಯೋಗ್ಯತೆ ಬಿಜೆಪಿಗಿಲ್ಲ: ಪ್ರಿಯಾಂಕ್ ಖರ್ಗೆ
ಮಹಿಳೆಯರ ವಿಷಯದಲ್ಲಿ ಅವಾಚ್ಯ ಪದಬಳಕೆ ಸಲ್ಲದು: ಬಸವರಾಜ ಹೊರಟ್ಟಿ, ಸಭಾಪತಿ
ಮಹಿಳೆಯರ ವಿಷಯದಲ್ಲಿ ಅವಾಚ್ಯ ಪದಬಳಕೆ ಸಲ್ಲದು: ಬಸವರಾಜ ಹೊರಟ್ಟಿ, ಸಭಾಪತಿ