ಧರ್ಮಸ್ಥಳದಲ್ಲಿ ಮುಸ್ಲಿಂ ಯುವಕನೊಂದಿಗೆ ಹಿಂದೂ ಯುವತಿ ಸುತ್ತಾಟ; ಜೋಡಿಯನ್ನು ಪೊಲೀಸರಿಗೆ ಒಪ್ಪಿಸಿದ ಸ್ಥಳೀಯರು

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನೈತಿಕ ಪೊಲೀಸ್ ಗಿರಿ ಪ್ರಕರಣಗಳು ನಡೆಯುತ್ತಲೇ ಇವೆ. 20 ದಿನಗಳ ಅಂತರದಲ್ಲಿ ಮೂರನೇ ಪ್ರಕರಣ ನಡೆದಿದೆ. ಧರ್ಮಸ್ಥಳದಲ್ಲಿ ಮುಸ್ಲಿಂ ಯುವಕನೊಂದಿಗೆ ಹಿಂದೂ ಯುವತಿ ಸುತ್ತಾಡುತ್ತಿರುವುದನ್ನು ಗಮನಿಸಿದ ಸ್ಥಳೀಯರು ಜೋಡಿಯನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ.

ಧರ್ಮಸ್ಥಳದಲ್ಲಿ ಮುಸ್ಲಿಂ ಯುವಕನೊಂದಿಗೆ ಹಿಂದೂ ಯುವತಿ ಸುತ್ತಾಟ; ಜೋಡಿಯನ್ನು ಪೊಲೀಸರಿಗೆ ಒಪ್ಪಿಸಿದ ಸ್ಥಳೀಯರು
ಧರ್ಮಸ್ಥಳದಲ್ಲಿ ಮುಸ್ಲಿಂ ಯುವಕನೊಂದಿಗೆ ಹಿಂದೂ ಯುವತಿ ಸುತ್ತಾಟ; ಜೋಡಿಯನ್ನು ಪೊಲೀಸರಿಗೆ ಒಪ್ಪಿಸಿದ ಸ್ಥಳೀಯರು
Follow us
ಪೃಥ್ವಿರಾಜ್​ ಬಿ.ಯು. ಮಂಗಳೂರು
| Updated By: Rakesh Nayak Manchi

Updated on: Jan 16, 2024 | 3:47 PM

ಮಂಗಳೂರು, ಜ.16: ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯಲ್ಲಿ ನೈತಿಕ ಪೊಲೀಸ್ ಗಿರಿ ಪ್ರಕರಣಗಳು ನಡೆಯುತ್ತಲೇ ಇದ್ದು, 20 ದಿನಗಳ ಅಂತರದಲ್ಲಿ ಮೂರನೇ ಪ್ರಕರಣ ನಡೆದಿದೆ. ಧರ್ಮಸ್ಥಳದಲ್ಲಿ (Dharmasthala) ಮುಸ್ಲಿಂ ಯುವಕನೊಂದಿಗೆ ಹಿಂದೂ ಯುವತಿ ಸುತ್ತಾಡುತ್ತಿರುವುದನ್ನು ಗಮನಿಸಿದ ಸ್ಥಳೀಯರು ಜೋಡಿಯನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನಲ್ಲಿ ಬೆಂಗಳೂರು ಮೂಲದ ಮುಸ್ಲಿಂ ಯುವಕ ಹಾಗೂ ಹಿಂದೂ ಯುವತಿ ಧರ್ಮಸ್ಥಳದಲ್ಲಿ ತಿರುಗಾಡುತ್ತಿದ್ದರು. ಇದನ್ನು ಗಮನಿಸಿ ಜೋಡಿಯನ್ನು ತಡೆದ ಸ್ಥಳೀಯರು ಪೊಲೀಸರಿಗೆ ಒಪ್ಪಿಸಿದ್ದು, ಪೊಲೀಸರು ಜೋಡಿಯನ್ನು ವಿಚಾರಣೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆ ಹೇಳಿ ಕೇಳಿ ಕೋಮ ಸೂಕ್ಷ್ಮ ಪ್ರದೇಶ. ಯಾವುದೇ ಘಟನೆ ನಡೆದರೂ ಅದಕ್ಕೆ ಕೋಮು ಅನ್ನೋದು ತಳುಕು ಹಾಕಿಕೊಂಡಿರುತ್ತದೆ. ಡಿಸೆಂಬರ್ 22 ರಂದು ಮಂಗಳೂರಿನ ಹಂಪನಕಟ್ಟೆಯ ಮಿಲಾಗ್ರಿಸ್ ಬಳಿ ಅನ್ಯಕೋಮಿನ ಯುವಕನ ಜೊತೆ ಹಿಂದೂ ಯುವತಿ ನಿಂತಿದ್ದಾಗ ಹಿಂದೂ ಕಾರ್ಯಕರ್ತರು ದಾಳಿ ನಡೆಸಿ ಹಲ್ಲೆಗೆ ಯತ್ನಿಸಿದ್ದರು. ವಿಚಾರ ತಿಳಿದು ಬಂದರು ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸುತ್ತಿದ್ದಂತೆ ಕಾರ್ಯಕರ್ತರು ಪರಾರಿಯಾಗಿದ್ದರು.

ಇದನ್ನೂ ಓದಿ: ಹಾವೇರಿ: ಗ್ಯಾಂಗ್​ ರೇಪ್​ ಪ್ರಕರಣವಾಗಿ ಬದಲಾದ ಹಾನಗಲ್ ನೈತಿಕ ಪೊಲೀಸ್​ಗಿರಿ ಕೇಸ್

ಈ ಪ್ರಕರಣ ನಡೆದ ಬೆನ್ನಲ್ಲೇ ಡಿಸೆಂಬರ್ 25 ರಂದು ಮಂಗಳೂರಿನ ಸೋಮೇಶ್ವರ ದೇವಸ್ಥಾನ ಬಳಿ ನೈತಿಕ ಪೊಲೀಸ್​ಗಿರಿ ನಡೆದಿತ್ತು. ಇಬ್ಬರು ಹಿಂದೂ ಯುವತಿಯರು, ಓರ್ವ ಹಿಂದೂ ಯುವಕ ಮತ್ತು ಓರ್ವ ಮುಸ್ಲಿಂ ಯುವಕ ಮಂಗಳೂರು ಹೊರವಲಯದ ಉಳ್ಳಾಲ ತಾಲೂಕಿನ ಸೋಮೇಶ್ವರ ದೇವಸ್ಥಾನಕ್ಕೆ ತೆರಳಿ ಸುತ್ತಮುತ್ತ ಓಡಾಡುತ್ತಿದ್ದಾಗ ಹಿಂದೂ ಕಾರ್ಯಕರ್ತರು ತಡೆದು ವಿಚಾರಿಸಿದ್ದರು.

ಈ ವೇಳೆ, ಮುಸ್ಲಿಂ ಯುವಕ ಸೋಮೇಶ್ವರ ದೇವಸ್ಥಾನ ಸುತ್ತಾಡಿ ಹಣೆಗೆ ಗಂಧ ಹಚ್ಚಿಕೊಂಡಿರುವುದು ಬೆಳಕಿಗೆ ಬಂದಿತ್ತು. ಅನ್ಯಕೋಮಿನ ಜೋಡಿ ಎಂದು ಗೊತ್ತಾದ ಹಿನ್ನೆಲೆ ಪೊಲೀಸ್ ಕಂಟ್ರೋಲ್‌ ರೂಂಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ್ದ ಪೊಲೀಸರು, ಯುವಕ-ಯುವತಿಯನ್ನ ಠಾಣೆಗೆ ಕರೆದೊಯ್ದು ವಿಚಾರಣೆ ನಡೆಸಿ ಬಿಟ್ಟು ಕಳುಹಿಸಿದ್ದರು.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಈ ಕೋತಿ ಚಪಾತಿಯನ್ನೂ ಮಾಡುತ್ತೆ, ಪಾತ್ರೆಯನ್ನೂ ತೊಳೆಯುತ್ತೆ!
ಈ ಕೋತಿ ಚಪಾತಿಯನ್ನೂ ಮಾಡುತ್ತೆ, ಪಾತ್ರೆಯನ್ನೂ ತೊಳೆಯುತ್ತೆ!
ರಜೆಗೆ ಮನೆಗೆ ಹೊರಟಿದ್ದ ಸೈನಿಕ ಕಾಲು ಜಾರಿ ರೈಲಿನಡಿ ಬಿದ್ದು ಸಾವು
ರಜೆಗೆ ಮನೆಗೆ ಹೊರಟಿದ್ದ ಸೈನಿಕ ಕಾಲು ಜಾರಿ ರೈಲಿನಡಿ ಬಿದ್ದು ಸಾವು
ಹೊಸ ವರ್ಷದಂದು ಬೆಂಗಳೂರಿನ ಅಧಿಕಾರಿಗಳಿಗೆ ರಜೆ ಇಲ್ಲ: ಡಿಕೆ ಶಿವಕುಮಾರ್
ಹೊಸ ವರ್ಷದಂದು ಬೆಂಗಳೂರಿನ ಅಧಿಕಾರಿಗಳಿಗೆ ರಜೆ ಇಲ್ಲ: ಡಿಕೆ ಶಿವಕುಮಾರ್
ಈ ಬಾರಿ ಬಿಗ್ ಬಾಸ್ ಟ್ರೋಫಿ ಯಾರಿಗೆ? ಭವಿಷ್ಯ ನುಡಿದ ಐಶ್ವರ್ಯಾ
ಈ ಬಾರಿ ಬಿಗ್ ಬಾಸ್ ಟ್ರೋಫಿ ಯಾರಿಗೆ? ಭವಿಷ್ಯ ನುಡಿದ ಐಶ್ವರ್ಯಾ
ದೋಸೆ ಜೊತೆ ಅವರೇ ಕಾಳಿನ ಹಲವಾರು ತಿಂಡಿಗಳು ಮೇಳದಲ್ಲಿ ಲಭ್ಯ
ದೋಸೆ ಜೊತೆ ಅವರೇ ಕಾಳಿನ ಹಲವಾರು ತಿಂಡಿಗಳು ಮೇಳದಲ್ಲಿ ಲಭ್ಯ
ಹೊಲಗಳಿಗೆ ಕುಟುಂಬವಾಗಿ ತೆರಳಿ ಒಟ್ಟಿಗೆ ಕೂತು ಉಣ್ಣುವುದೇ ಒಂದು ಸಂಭ್ರಮ!
ಹೊಲಗಳಿಗೆ ಕುಟುಂಬವಾಗಿ ತೆರಳಿ ಒಟ್ಟಿಗೆ ಕೂತು ಉಣ್ಣುವುದೇ ಒಂದು ಸಂಭ್ರಮ!
ಬೆಂಗಳೂರು ನಗರದಲ್ಲಿ ಒತ್ತುವರಿ ಮಾಡಿಕೊಳ್ಳುವ ಕಾಯಕ ಎಗ್ಗಿಲ್ಲದೆ ಸಾಗುತ್ತಿದೆ
ಬೆಂಗಳೂರು ನಗರದಲ್ಲಿ ಒತ್ತುವರಿ ಮಾಡಿಕೊಳ್ಳುವ ಕಾಯಕ ಎಗ್ಗಿಲ್ಲದೆ ಸಾಗುತ್ತಿದೆ
ಹಿಮಪಾತದಿಂದ ಮನಾಲಿಯಲ್ಲಿ ಟ್ರಾಫಿಕ್ ಜಾಮ್; ಹಿಮದಲ್ಲೇ ಮುಚ್ಚಿಹೋದ ಕಾರುಗಳು
ಹಿಮಪಾತದಿಂದ ಮನಾಲಿಯಲ್ಲಿ ಟ್ರಾಫಿಕ್ ಜಾಮ್; ಹಿಮದಲ್ಲೇ ಮುಚ್ಚಿಹೋದ ಕಾರುಗಳು
ಮುನಿರತ್ನಗೆ ಒಂದು ನೋಟೀಸ್ ನೀಡುವ ಯೋಗ್ಯತೆ ಬಿಜೆಪಿಗಿಲ್ಲ: ಪ್ರಿಯಾಂಕ್ ಖರ್ಗೆ
ಮುನಿರತ್ನಗೆ ಒಂದು ನೋಟೀಸ್ ನೀಡುವ ಯೋಗ್ಯತೆ ಬಿಜೆಪಿಗಿಲ್ಲ: ಪ್ರಿಯಾಂಕ್ ಖರ್ಗೆ
ಮಹಿಳೆಯರ ವಿಷಯದಲ್ಲಿ ಅವಾಚ್ಯ ಪದಬಳಕೆ ಸಲ್ಲದು: ಬಸವರಾಜ ಹೊರಟ್ಟಿ, ಸಭಾಪತಿ
ಮಹಿಳೆಯರ ವಿಷಯದಲ್ಲಿ ಅವಾಚ್ಯ ಪದಬಳಕೆ ಸಲ್ಲದು: ಬಸವರಾಜ ಹೊರಟ್ಟಿ, ಸಭಾಪತಿ