AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mangaluru News: ಮದುವೆಯಾಗುವುದಾಗಿ ನಂಬಿಸಿ ನಿರಂತರ ದೈಹಿಕ ಸಂಪರ್ಕ; ಮಂಗಳೂರು ಪೊಲೀಸರಿಂದ ಕಡಬದ ರೆಹಮಾನ್ ಬಂಧನ

ಆರೋಪಿಯು ಮದುವೆಯಾಗುವುದಾಗಿ ಭರವಸೆ ನೀಡಿ ನಗರದ ಖಾಸಗಿ ಲಾಡ್ಜ್‌ಗೆ ಕರೆದೊಯ್ದಿದ್ದ. 20 ದಿನಗಳ ಕಾಲ ನಿರಂತರವಾಗಿ ದೈಹಿಕ ಸಂಬಂಧ ಹೊಂದಿದ್ದ ಎಂದು ಸಂತ್ರಸ್ತೆ ಹೇಳಿಕೆ ನೀಡಿದ್ದಾಳೆ.

Mangaluru News: ಮದುವೆಯಾಗುವುದಾಗಿ ನಂಬಿಸಿ ನಿರಂತರ ದೈಹಿಕ ಸಂಪರ್ಕ; ಮಂಗಳೂರು ಪೊಲೀಸರಿಂದ ಕಡಬದ ರೆಹಮಾನ್ ಬಂಧನ
ಅನೀಶ್ ರೆಹಮಾನ್
TV9 Web
| Edited By: |

Updated on:Jun 29, 2023 | 3:06 PM

Share

ಮಂಗಳೂರು: ವಿವಾಹವಾಗುವುದಾಗಿ ನಂಬಿಸಿ ಮಹಿಳೆಯೊಂದಿಗೆ ನಿರಂತರ ದೈಹಿಕ ಸಂಬಂಧ ಬೆಳೆಸಿ ವಂಚಿಸಿದ ಆರೋಪದ ಮೇಲೆ ಕಡಬ ನಿವಾಸಿ ಯುವಕನನ್ನು ಮಂಗಳೂರು ನಗರ ಠಾಣೆ ಪೊಲೀಸರು (Mangalore Police) ಬಂಧಿಸಿದ್ದಾರೆ. ಬಂಧಿತನನ್ನು ಅನೀಶ್ ರೆಹಮಾನ್ ಎಂದು ಗುರುತಿಸಲಾಗಿದೆ. ಅನೀಶ್ ರೆಹಮಾನ್ ತನ್ನನ್ನು ಇನ್‌ಸ್ಟಾಗ್ರಾಮ್‌ನಲ್ಲಿ (Instagram) ಸಂಪರ್ಕಿಸಿದ್ದ. ನಂತರ ಇಬ್ಬರೂ ಪ್ರೀತಿಸುತ್ತಿದ್ದ ನಾಟಕವಾಡಿ ದೈಹಿಕ ಸಂಪರ್ಕ ಬೆಳೆಸಿದ್ದಾನೆ ಎಂದು ಆರೋಪಿಸಿ 24 ವರ್ಷದ ಸಂತ್ರಸ್ತ ಮಹಿಳೆ ಮಂಗಳೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಜೂನ್ 26 ರಂದು ಲಿಖಿತ ದೂರು ದಾಖಲಿಸಿದ್ದರು.

ಆರೋಪಿಯು ಮದುವೆಯಾಗುವುದಾಗಿ ಭರವಸೆ ನೀಡಿ ನಗರದ ಖಾಸಗಿ ಲಾಡ್ಜ್‌ಗೆ ಕರೆದೊಯ್ದಿದ್ದ. 20 ದಿನಗಳ ಕಾಲ ನಿರಂತರವಾಗಿ ದೈಹಿಕ ಸಂಬಂಧ ಹೊಂದಿದ್ದ ಎಂದು ಆಕೆ ಹೇಳಿಕೆ ನೀಡಿದ್ದಾಳೆ. ನಂತರ ಆರೋಪಿಗೆ ಈಗಾಗಲೇ ಮದುವೆಯಾಗಿರುವುದು ಸಂತ್ರಸ್ತೆಗೆ ತಿಳಿದು ಬಂದಿದ್ದು, ಮನೆಯವರಿಗೆ ವಿಷಯ ತಿಳಿಸಿದ್ದಾಳೆ.

ಅನೀಶ್ ರೆಹಮಾನ್ ವಿರುದ್ಧ ಭಾರತೀಯ ದಂಡಸಂಹಿತೆಯ ಸೆಕ್ಷನ್ 506, 417 ಹಾಗೂ 376 ರಡಿ ಕೇಸು ದಾಖಲಿಸಿ ಜೂನ್ 26 ರಂದು ಬಂಧಿಸಲಾಗಿದೆ. 27 ರಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಆರೋಪಿಯನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ಇದನ್ನೂ ಓದಿ: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ವಿವಿಧ ಅರಬ್ ರಾಷ್ಟ್ರಗಳಲ್ಲಿ ತಲೆಮರೆಸಿಕೊಂಡ ಆರೋಪಿಗಳು

ಗಾಂಜಾ ಸೇವನೆ ಕೇಸ್​ನಲ್ಲಿ ಬಂಧಿತನಾಗಿದ್ದ ರೆಹಮಾನ್

ಆರೋಪಿ ರೆಹಮಾನ್ ಈ ಹಿಂದೆ ಗಾಂಜಾ ಸೇವನೆ ಕೇಸ್​ನಲ್ಲಿ ಬಂಧಿತನಾಗಿದ್ದ. ಇದು ಕಾವೂರು ಠಾಣಾ ವ್ಯಾಪ್ತಿಗೆ ಸೇರಿದ್ದ ಪ್ರಕರಣವಾಗಿದೆ. ಇದರಲ್ಲಿ ಆತ ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ಎದುರಿಸುತ್ತಿದ್ದಾನೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:05 pm, Thu, 29 June 23

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ