ಮಂಗಳೂರು: ವಿವಾಹವಾಗುವುದಾಗಿ ನಂಬಿಸಿ ಮಹಿಳೆಯೊಂದಿಗೆ ನಿರಂತರ ದೈಹಿಕ ಸಂಬಂಧ ಬೆಳೆಸಿ ವಂಚಿಸಿದ ಆರೋಪದ ಮೇಲೆ ಕಡಬ ನಿವಾಸಿ ಯುವಕನನ್ನು ಮಂಗಳೂರು ನಗರ ಠಾಣೆ ಪೊಲೀಸರು (Mangalore Police) ಬಂಧಿಸಿದ್ದಾರೆ. ಬಂಧಿತನನ್ನು ಅನೀಶ್ ರೆಹಮಾನ್ ಎಂದು ಗುರುತಿಸಲಾಗಿದೆ. ಅನೀಶ್ ರೆಹಮಾನ್ ತನ್ನನ್ನು ಇನ್‌ಸ್ಟಾಗ್ರಾಮ್‌ನಲ್ಲಿ (Instagram) ಸಂಪರ್ಕಿಸಿದ್ದ. ನಂತರ ಇಬ್ಬರೂ ಪ್ರೀತಿಸುತ್ತಿದ್ದ ನಾಟಕವಾಡಿ ದೈಹಿಕ ಸಂಪರ್ಕ ಬೆಳೆಸಿದ್ದಾನೆ ಎಂದು ಆರೋಪಿಸಿ 24 ವರ್ಷದ ಸಂತ್ರಸ್ತ ಮಹಿಳೆ ಮಂಗಳೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಜೂನ್ 26 ರಂದು ಲಿಖಿತ ದೂರು ದಾಖಲಿಸಿದ್ದರು.
ಆರೋಪಿಯು ಮದುವೆಯಾಗುವುದಾಗಿ ಭರವಸೆ ನೀಡಿ ನಗರದ ಖಾಸಗಿ ಲಾಡ್ಜ್‌ಗೆ ಕರೆದೊಯ್ದಿದ್ದ. 20 ದಿನಗಳ ಕಾಲ ನಿರಂತರವಾಗಿ ದೈಹಿಕ ಸಂಬಂಧ ಹೊಂದಿದ್ದ ಎಂದು ಆಕೆ ಹೇಳಿಕೆ ನೀಡಿದ್ದಾಳೆ. ನಂತರ ಆರೋಪಿಗೆ ಈಗಾಗಲೇ ಮದುವೆಯಾಗಿರುವುದು ಸಂತ್ರಸ್ತೆಗೆ ತಿಳಿದು ಬಂದಿದ್ದು, ಮನೆಯವರಿಗೆ ವಿಷಯ ತಿಳಿಸಿದ್ದಾಳೆ.
ಅನೀಶ್ ರೆಹಮಾನ್ ವಿರುದ್ಧ ಭಾರತೀಯ ದಂಡಸಂಹಿತೆಯ ಸೆಕ್ಷನ್ 506, 417 ಹಾಗೂ 376 ರಡಿ ಕೇಸು ದಾಖಲಿಸಿ ಜೂನ್ 26 ರಂದು ಬಂಧಿಸಲಾಗಿದೆ. 27 ರಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಆರೋಪಿಯನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
ಇದನ್ನೂ ಓದಿ: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ವಿವಿಧ ಅರಬ್ ರಾಷ್ಟ್ರಗಳಲ್ಲಿ ತಲೆಮರೆಸಿಕೊಂಡ ಆರೋಪಿಗಳು
ಆರೋಪಿ ರೆಹಮಾನ್ ಈ ಹಿಂದೆ ಗಾಂಜಾ ಸೇವನೆ ಕೇಸ್ನಲ್ಲಿ ಬಂಧಿತನಾಗಿದ್ದ. ಇದು ಕಾವೂರು ಠಾಣಾ ವ್ಯಾಪ್ತಿಗೆ ಸೇರಿದ್ದ ಪ್ರಕರಣವಾಗಿದೆ. ಇದರಲ್ಲಿ ಆತ ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ಎದುರಿಸುತ್ತಿದ್ದಾನೆ.
ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 3:05 pm, Thu, 29 June 23